ETV Bharat / city

ತೃತೀಯ ಲಿಂಗಿಗಳಿಗೆ ಮೀಸಲು: ತ್ವರಿತ ಕ್ರಮ ಜರುಗಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ - ತೃತೀಯ ಲಿಂಗಿಗಳಿಗೆ ಸರ್ಕಾರಿ ಕೆಲಸದಲ್ಲಿ ಮಿಸಲು

ತೃತೀಯ ಲಿಂಗಿಗಳಿಗೆ ಸರ್ಕಾರಿ ಹುದ್ದೆಗಳ ನೇಮಕಾತಿಗಳಲ್ಲಿ ಮೀಸಲು ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪಿನ ಅನುಸಾರ ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

high court
ಹೈಕೋರ್ಟ್
author img

By

Published : Aug 29, 2020, 9:35 PM IST

ಬೆಂಗಳೂರು: ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಮೀಸಲು ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪಿನ ಅನುಸಾರ ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ರಾಜ್ಯ ವಿಶೇಷ ಮೀಸಲು ಕಾನ್ಸಟೆಬಲ್ ಪಡೆ ಹಾಗೂ ಬ್ಯಾಂಡ್ ಮೆನ್ ಹುದ್ದೆಗಳ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ ಕಲ್ಪಿಸದಿರುವುದನ್ನು ಪ್ರಶ್ನಿಸಿ ಸಂಗಮ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದಿಸಿ, ಸರ್ಕಾರಿ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅದಕ್ಕಾಗಿ ಮತ್ತಷ್ಟು ಕಾಲಾವಕಾಶದ ಅಗತ್ಯವಿದೆ. ಮಾಹಿತಿ ಸಂಗ್ರಹಿಸಿದ ಬಳಿಕ ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಈ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ವಿಳಂಬವಾದರೆ ಅಜಿರ್ಯಲ್ಲಿ ಪ್ರಶ್ನಿಸಲಾಗಿರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯೇ ಮುಗಿದು ಹೋಗಲಿದೆ. ಆದ್ದರಿಂದ, ಸುಪ್ರೀಂಕೋರ್ಟ್ 2014ರಲ್ಲಿ ನೀಡಿರುವ ತೀರ್ಪಿನ ಅನುಸಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿತು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.