ಬೆಂಗಳೂರು : ರಾಜ್ಯದೆಲ್ಲೆಡೆ ವರುಣ ತನ್ನ ಆರ್ಭಟ ಮುಂದುವರೆಸಿದ್ದಾನೆ. ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಅಣೆಕಟ್ಟುಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣವೂ ಹೆಚ್ಚಾಗಿದೆ.
ರಾಜ್ಯದಲ್ಲಿ ಕಾವೇರಿ ಮತ್ತು ಕೃಷ್ಣಾ ಕಣಿವೆ ಪ್ರದೇಶಗಳ ನದಿಗಳಲ್ಲಿ ಮತ್ತು ಜಲವಿದ್ಯುತ್ ಉತ್ಪಾದನೆಗಾಗಿ ಇರುವ ಅಣೆಕಟ್ಟುಗಳಲ್ಲಿ ಒಟ್ಟು 860.27 ಟಿಎಂಸಿ ನೀರನ್ನು ಸಂಗ್ರಹಿಸಬಹುದಾಗಿದೆ. ಈಗ 472.12 ಟಿಎಂಸಿ ನೀರಿನ ಸಂಗ್ರಹವಿದೆ.
ಹಿಂದಿನ ವರ್ಷ ಇದೇ ವೇಳೆಯಲ್ಲಿ 361.20 ಟಿಎಂಸಿ ನೀರು ಸಂಗ್ರಹವಾಗಿತ್ತು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್ಎನ್ಡಿಎಂಸಿ) ರಾಜ್ಯದ ಪ್ರಮುಖ ಜಲಾಶಯಗಳ ಪ್ರಸ್ತುತ ನೀರಿನ ಮಟ್ಟ ಹಾಗೂ ಹೊರ ಹರಿವು ಮತ್ತು ಒಳ ಹರಿವಿನ ಪ್ರಮಾಣವನ್ನು ಬಿಡುಗಡೆ ಮಾಡಿದ್ದು, ಕೆಎಸ್ಎನ್ಡಿಎಂಸಿ ನೀಡಿರುವ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: High command ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಸೂಚಿಸಿಲ್ಲ: 26ಕ್ಕೆ ಶಾಸಕಾಂಗ ಪಕ್ಷದ ಸಭೆ