ಬೆಂಗಳೂರು: ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗೃಹ ರಕ್ಷಕದಳ ಸಿಬ್ಬಂದಿ ಮೃತಪಟ್ಟಿರುವ ಘಟನೆ ಎಂಟನೇ ಮೈಲಿ ಪೀಣ್ಯಾದಲ್ಲಿ ನಡೆದಿದೆ. ರವಿ ಮೃತ ಸಿಬ್ಬಂದಿ. ಡಿಕ್ಕಿ ಹೊಡೆದ ಕಾರಿನ ಚಾಲಕ ಪರಾರಿಯಾಗಿದ್ದಾನೆ.
ಮುಂಜಾನೆ ಕೆಲಸದ ನಿಮಿತ್ತ ತೆರಳುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ರವಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ 300 ಮೀಟರ್ ದೂರಕ್ಕೆ ಬೈಕ್ ಎಳದೊಯ್ದಿದೆ. ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದ ಹಿನ್ನೆಲೆ ರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಕ್ಷಣ ಸ್ಥಳೀಯರು ಪಕ್ಕದಲ್ಲಿದ್ದ ಆಸ್ಪತ್ರೆಗೆ ಕರೆಯೊಯ್ಯುವ ಪ್ರಯತ್ನಕ್ಕೆ ಮುಂದಾದರು. ಆದರೆ, ಅಷ್ಟರಲ್ಲಾಗಲೇ ಅವರು ಅಸುನೀಗಿದ್ದರು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೀಣ್ಯಾ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.