ETV Bharat / city

ದೂರು ದಾಖಲಾದ ವಾರದೊಳಗೆ ರಸ್ತೆಗುಂಡಿ ದುರಸ್ತಿ: ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ

ಪೂರ್ವ ಮುಂಗಾರು ಮಳೆಯಿಂದ ನಗರದಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಜೂನ್‌ನಿಂದ ಮುಂಗಾರು ಮಳೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪಾಲಿಕೆ ವಿಶೇಷ ಆಯುಕ್ತ ರವೀಂದ್ರ ಹೇಳಿದರು.

ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ
bbmp road problem
author img

By

Published : May 24, 2022, 7:21 PM IST

ಬೆಂಗಳೂರು: ರಾಜಧಾನಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಫಿಕ್ಸ್ ಮೈ ಸ್ಟ್ರೀಟ್ ಆ್ಯಪ್ ಮೂಲಕ 11,092 ರಸ್ತೆ ಗುಂಡಿಗಳನ್ನು ಗುರುತಿಸಿದ್ದು, ಇದರಲ್ಲಿ 5,119 ರಸ್ತೆ ಗುಂಡಿ ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ. ದೂರು ದಾಖಲಾದ ಒಂದು ವಾರದೊಳಗೆ ರಸ್ತೆಗುಂಡಿ ಮುಚ್ಚಲಾಗುವುದು ಎಂದು ಪಾಲಿಕೆ ವಿಶೇಷ ಆಯುಕ್ತ ರವೀಂದ್ರ ಹೇಳಿದರು.

ಮಂಗಳವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ವ ಮುಂಗಾರು ಮಳೆಯಿಂದ ನಗರದಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಜೂನ್‌ನಿಂದ ಮುಂಗಾರು ಮಳೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ದೂರು ದಾಖಲಾದ ಒಂದು ವಾರದೊಳಗೆ ರಸ್ತೆಗುಂಡಿ ಮುಚ್ಚಲಾಗುವುದು

ಮನೆಗಳಿಗೆ ನೀರು ನುಗ್ಗಿ ತೊಂದರೆಯಾದರೆ ಜನರನ್ನು ತಾತ್ಕಾಲಿಕ ಶೆಲ್ಟರ್, ಕಲ್ಯಾಣ ಮಂಟಪ, ಸಮುದಾಯ ಭವನಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಸ್ಥಳಗಳನ್ನು ಗುರುತಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕುತುಬ್​ ಮಿನಾರ್​ ಸಂಕೀರ್ಣದಲ್ಲಿ ದೇವಾಲಯ ಕೆಡವಿ ಮಸೀದಿ ಕಟ್ಟಲಾಗಿಲ್ಲ: ಪುರಾತತ್ವ ಇಲಾಖೆ, ತೀರ್ಪು ಕಾಯ್ದಿರಿಸಿದ ಕೋರ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.