ಬೆಂಗಳೂರು: ಕೊಲೆ, ದರೋಡೆ, ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿ ಸಾರ್ವಜನಿಕ ಶಾಂತಿಗೆ ಭಂಗ ತರುವ ಚಟುವಟಿಕೆಗಳಲ್ಲಿ ತೊಡಗಿದ್ದ ರೌಡಿಶೀಟರ್ ಸಾಗರ್ ಎಂಬಾತನ ವಿರುದ್ಧ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಗೂಂಡಾಕಾಯ್ಡೆ ದಾಖಲಿಸಿಕೊಂಡಿದ್ದಾರೆ.
ಸಾಗರ್ ಈ ಹಿಂದೆ ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಉಂಟು ಮಾಡಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಚಟುವಟಿಕೆಗಳಲ್ಲಿ ತೊಡಗಿದ್ದನು. ಈತನನ್ನು ಹಲವು ಬಾರಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದು, ಜೈಲಿನಿಂದ ಹೊರ ಬಂದು ಮತ್ತೆ ಹಳೆ ಚಾಳಿ ಮುಂದುವರೆಸುತ್ತಿದ್ದನು.
ಇದನ್ನೂ ಓದಿ: ಕಾಂಗ್ರೆಸ್ ಪ್ರತಿಭಟನೆ ಮಧ್ಯೆ ಎರಡು ದಿನದ 'ಒಂದು ದೇಶ, ಒಂದು ಚುನಾವಣೆ' ಮೇಲಿನ ಚರ್ಚೆ ಅಪೂರ್ಣ
ಸಿ.ಕೆ.ಅಚ್ಚುಕಟ್ಟು, ಮಹಾಲಕ್ಷ್ಮೀ ಲೇಔಟ್, ಹನುಮಂತನಗರ, ಚಾಮರಾಜಪೇಟೆ ಪೊಲೀಸ್ ಠಾಣೆ ಸೇರಿ ನಗರದ ಹಲವೆಡೆ ಈತನ ವಿರುದ್ಧ ಅಪರಾಧ ಪ್ರಕರಣಗಳು ದಾಖಲಾಗಿವೆ. ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಸಾಗರ್ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿಕೊಳ್ಳಲಾಗಿದೆ.