ಬೆಂಗಳೂರು: ಶಿರಾ ಮತ್ತು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳು ಸೇರಿದಂತೆ ಕಾರ್ಖಾನೆಗಳಿಗೆ, ಖಾಸಗಿ ಕಂಪನಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ನೋಂದಾಯಿತ ಮತದಾರರಾಗಿರುವವರಿಗೆ ಮತದಾನ ಮಾಡಲು ಅನುಕೂಲವಾಗಲು ವೇತನ ಸಹಿತ ರಜೆ ಘೋಷಿಸಿ ಆದೇಶಿಸಲಾಗಿದೆ. ಅಲ್ಲದೆ ಎರಡೂ ಕ್ಷೇತ್ರದಲ್ಲಿ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜತೆಗೆ ಮುನ್ನಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನವೆಂಬರ್ 10ರಂದು ಉಪ ಚುನಾವಣೆಯ ಫಲಿತಾಂಶ ಹೊರ ಬೀಳಲಿದ್ದು, ಆರ್.ಆರ್.ನಗರ ಕ್ಷೇತ್ರದ ಮತ ಎಣಿಕೆಯು ಶ್ರೀಜ್ಞಾನಕ್ಷಿ ವಿದ್ಯಾನಿಕೇತನದಲ್ಲಿ ನಡೆಯಲಿದೆ. ಶಿರಾ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯು ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ನಲ್ಲಿ ನಡೆಯಲಿದೆ.