ಬೆಂಗಳೂರು: ಪ್ರತಿ ವರ್ಷ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಹತ್ವದ ರಾಷ್ಟ್ರೀಯ ಅಧಿವೇಶನವಾದ ಅಖಿಲ ಭಾರತ ಪ್ರತಿನಿಧಿ ಸಭೆ ಈ ಬಾರಿ ಬೆಂಗಳೂರಿನಲ್ಲಿ ನಡೆಯಲಿದ್ದು, ಅದಕ್ಕಾಗಿ ಸಿದ್ಧತಾ ಕಾರ್ಯ ಆರಂಭಿಸಲಾಗಿದೆ.
ಮಾರ್ಚ್ 15 ರಿಂದ 17 ರವರೆಗೆ ಮೂರು ದಿನಗಳ ಕಾಲ ಮಾಗಡಿ ರಸ್ತೆಯ ಚನ್ನೇನಹಳ್ಳಿಯಲ್ಲಿರುವ ಜನಸೇವಾ ವಿದ್ಯಾ ಕೇಂದ್ರದಲ್ಲಿ ನಡೆಯಲಿರುವ ಅಖಿಲ ಭಾರತ ಪ್ರತಿನಿಧಿ ಸಭೆಯಲ್ಲಿ ಬಿಜೆಪಿ, ವಿ.ಹೆಚ್.ಪಿ ಸೇರಿದಂತೆ ಆರ್‌ಎಸ್‌ಎಸ್ ಅಂಗ ಸಂಸ್ಥೆಗಳ 1400 ಕ್ಕೂ ಹೆಚ್ಚಿನ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.
ಮೂರು ದಿನಗಳ ಸಮಾವೇಶದಲ್ಲಿ ಕಳೆದ ವರ್ಷದ ವಾರ್ಷಿಕ ವರದಿ ಮಂಡನೆ, ಮುಂದಿನ ವರ್ಷದ ಕ್ರಿಯಾ ಯೋಜನೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ಕಳೆದ ಬಾರಿ ಮಧ್ಯಪ್ರವೇಶದ ಗ್ವಾಲಿಯರ್ನಲ್ಲಿ ಲೋಕಸಭಾ ಚುನಾವಣೆ ಮುನ್ನ ನಡೆದಿದ್ದ ಸಮಾವೇಶದಲ್ಲಿ ಶಬರಿಮಲೆ ದೇಗುಲಕ್ಕೆ ಸ್ತ್ರೀ ಪ್ರವೇಶ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆದಿತ್ತು. ಈ ಬಾರಿ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು, ರಾಷ್ಟ್ರದಲ್ಲಿ ಸಿಎಎ ಜಾರಿ ಕುರಿತು ಹಾಗೂ ಎನ್ಆರ್ಸಿ ಕಾಯ್ದೆ ಬಗ್ಗೆ ಚರ್ಚೆಯಾಗಲಿದೆ ಎಂದ ತಿಳಿದುಬಂದಿದೆ.
ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಹಾಗೂ ಸರಕಾರ್ಯವಾಹ ಸುರೇಶ್ ಜೋಷಿ ಸಮಾವೇಶದ ಕಲಾಪ ನಡೆಸಲಿದ್ದಾರಂತೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಆಗಮಿಸಲಿದ್ದಾರೆ ಎಂದು ಆರ್‌ಎಸ್‌ಎಸ್ ಮೂಲಗಳು ಮಾಹಿತಿ ನೀಡಿವೆ.
ಮಾರ್ಚ್ 8 ರಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಖಿಲ ಭಾರತ ಪ್ರತಿನಿಧಿ ಸಭೆಗೆ ಪೂರ್ವಭಾವಿಯಾಗಿ ಸಂಘದ ಕಾರ್ಯಕರ್ತರ ಸಭೆ ಆಯೋಜಿಸಿದ್ದು, ಆರ್‌ಎಸ್‌ಎಸ್ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಭಾಷಣ ಮಾಡಲಿದ್ದಾರೆ.
ಐದನೇ ಬಾರಿ ಬೆಂಗಳೂರಿಗೆ ಆತಿಥ್ಯ:
ಪ್ರತಿ ವರ್ಷ ಆರ್ಎಸ್ಎಸ್ನ ರಾಷ್ಟ್ರೀಯ ಅಧಿವೇಶನ ನಡೆಯುತ್ತದೆಯಾದರೂ ಮೂರು ವರ್ಷಕ್ಕೊಮ್ಮೆ ದಕ್ಷಿಣ ಭಾರತದ ರಾಜ್ಯದಲ್ಲಿ ಸಮಾವೇಶ ನಡೆಸಲಾಗುತ್ತದೆ. ಅದರಂತೆ ದಕ್ಷಿಣ ಭಾರತಕ್ಕೆ ಈ ಬಾರಿ ಅವಕಾಶ ಸಿಕ್ಕಿದೆ. ರಾಜ್ಯದಲ್ಲಿ ನಡೆಯುತ್ತಿರುವ ಏಳನೇ ಹಾಗೂ ಬೆಂಗಳೂರಿನಲ್ಲಿ ನಡೆಯುತ್ತಿರುವ ಐದನೇ ಅಧಿವೇಶನ ಇದಾಗಿದೆ.
ಬೆಂಗಳೂರಲ್ಲಿ ಆರ್‌ಎಸ್‌ಎಸ್ ರಾಷ್ಟ್ರೀಯ ಅಧಿವೇಶನ...! - ಆರ್‌ಎಸ್‌ಎಸ್ ಅಧಿವೇಶನ.
ಬೆಂಗಳೂರಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ರಾಷ್ಟ್ರೀಯ ಅಧಿವೇಶನಕ್ಕೆ ಸಿದ್ಧತಾ ಕಾರ್ಯ ಆರಂಭಗೊಂಡಿದೆ. ಮಾ.15ರಿಂದ 17ರವರೆಗೆ ಇದು ನಡೆಯಲಿದೆ. ಈಗಾಗಲೇ ನಾಲ್ಕು ಬಾರಿ ಆತಿಥ್ಯ ವಹಿಸಿದ್ದ ಬೆಂಗಳೂರು, ಈಗ ಐದನೇ ಬಾರಿಗೆ ಸಮಾವೇಶಕ್ಕೆ ಸಜ್ಜುಗೊಳ್ಳುತ್ತಿದೆ.