ಬೆಂಗಳೂರು: ನಗರದ ವಿವಿಧೆಡೆಯಿರುವ ಓಲಾ ಮತ್ತು ಊಬರ್ ಕಚೇರಿಗಳ ಮೇಲೆ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೈಸೆನ್ಸ್ ಪಡೆಯುವ ವಿಚಾರದಲ್ಲಿ ಲೋಪಗಳಾಗಿರುವುದು ಮತ್ತು ಪ್ರಯಾಣಿಕರಿಗೆ ಸೇವೆ ಒದಗಿಸುವ ವಿಚಾರದಲ್ಲಿ ತಪ್ಪುಗಳಾಗಿರುವ ಬಗ್ಗೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ, ಡ್ರೈವಿಂಗ್ ಲೈಸೆನ್ಸ್ ಇಲ್ಲದವರು ವಾಹನ ಚಾಲನೆ, ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಬಗ್ಗೆ ಪ್ರಯಾಣಿಕರಿಂದ ದೂರುಗಳು ಕೇಳಿಬಂದಿದ್ದವು. ಅಲ್ಲದೆ, ಕೆಲ ಮಾಲೀಕರು ಚಾಲಕರಿಗೂ ಸರಿಯಾಗಿ ಹಣ ಕೊಡುತ್ತಿಲ್ಲ ಎಂಬ ಆರೋಪಗಳಿದ್ದವು.
100 ವಾಹನಗಳಿಗೆ ಲೈಸೆನ್ಸ್ ಪಡೆದು, 10 ಸಾವಿರದಿಂದ 15 ಸಾವಿರ ವಾಹನಗಳ ಓಡಾಟ ನಡೆಸುತ್ತಿರುವ ಆರೋಪವೂ ಕೂಡ ಕೇಳಿಬಂದಿದೆ. ಲಾಕ್ಡೌನ್ಗೂ ಮೊದಲು 5 ಸಾವಿರ ವಾಹನಗಳು ಓಡುತ್ತಿದ್ದವು ಎಂಬ ದೂರುಗಳು ಬಂದಿದ್ದವು.
ಪ್ರತಿ ಮೂರು ತಿಂಗಳಿಗೊಮ್ಮೆ ಚಾಲಕರ ವಿವರ, ವಾಹನಗಳ ವಿವರ, ವಿಮೆ, ಫಿಟ್ನೆಸ್, ಎಮಿಷನ್ ಪ್ರಮಾಣಪತ್ರಗಳನ್ನು ಸಲ್ಲಿಸಬೇಕು. ಈ ನಿಯಮಗಳ ಪಾಲನೆಯಾಗಿಲ್ಲ ಎಂಬ ದೂರುಗಳಿವೆ.
ಇದನ್ನೂ ಓದಿ: ಬಾವಿಯಲ್ಲಿ ಬಿದ್ದ ಬಾಲಕಿ: ರಕ್ಷಣೆಗೆ ಮುಂದಾಗಿ ಪ್ರಾಣ ಕಳೆದುಕೊಂಡ್ರು 11 ಮಂದಿ