ETV Bharat / city

ಕೇರಳ, ಮಹಾರಾಷ್ಟ್ರದಿಂದ ಬರುವ ಚಾಲಕರಿಗೆ ಆರ್​ಟಿಪಿಸಿಆರ್ ಪರೀಕ್ಷೆ ಕಡ್ಡಾಯ.! - ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ

ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುಮುಖದಲ್ಲಿ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮತ್ತಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

rtpcr test
ಆರ್​ಟಿಪಿಸಿಆರ್ ಪರೀಕ್ಷೆ
author img

By

Published : Mar 4, 2021, 2:14 AM IST

Updated : Mar 4, 2021, 5:29 AM IST

ಬೆಂಗಳೂರು: ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಈ ಎರಡು ರಾಜ್ಯಗಳಿಂದ ಬರುವ, ಸರಕು ಸಾಗಣೆ ವಾಹನಗಳ ಚಾಲಕರು ಹಾಗೂ ಸಹಾಯಕರುಗಳು ಕಡ್ಡಾಯವಾಗಿ ಆ‌ರ್​​ಟಿಪಿಸಿಆರ್ ಪರೀಕ್ಷೆಯ ವರದಿಯನ್ನು ಹೊಂದಿರಬೇಕು ಎಂದು ರಾಜ್ಯ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯ ಮಟ್ಟದ ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿಯ ಸಲಹೆ ಮೇರೆಗೆ ಚಾಲಕರು ಹಾಗೂ ಸಹಾಯಕರು 15 ದಿನಗಳಿಗೊಮ್ಮೆ ಆರ್​​ಟಿಪಿಸಿಆರ್ ಪರೀಕ್ಷೆಗೆ ಒಳಪಡುವುದು ಹಾಗೂ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ: ಚಿಕ್ಕ ಚುನಾವಣೆಯ ದೊಡ್ಡ ಸಂದೇಶ: ದೆಹಲಿ ಸ್ಥಳೀಯ ಚುನಾವಣೆ ಹೇಳೋದೇನು..?

ಕೋವಿಡ್ ನೆಗೆಟಿವ್ ವರದಿ ಇದ್ದರಷ್ಟೇ ರಾಜ್ಯಕ್ಕೆ ಪ್ರವೇಶಿಲು ಅವಕಾಶ ಕಲ್ಪಿಸಲಾಗುತ್ತದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅಧಿಕಾರಿಗಳು ಸೂಕ್ತ ಕ್ರಮಗಳನ್ನು
ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ.

Last Updated : Mar 4, 2021, 5:29 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.