ಬೆಂಗಳೂರು: ನರ್ಸ್ ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿಗೆ ಈವರೆಗೂ ವೇತನ ನೀಡದ ಕುರಿತು ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಬಿ.ಶ್ರೀರಾಮುಲು, ವಾರದೊಳಗೆ ಸಂಬಳ ಬರುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಹಾವೇರಿ, ಗದಗ ಜಿಲ್ಲೆಗೆ ಭೇಟಿ ನೀಡಿದ್ದೆ. ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದಲೂ ಸಂಬಳವಾಗದ ಬಗ್ಗೆ ಮಾಹಿತಿ ಪಡೆದಿದಿದ್ದೇನೆ. ಹೀಗಾಗಿ 36 ಕೋಟಿ ರೂ. ಬಿಡುಗಡೆಗೆ ಆರ್ಥಿಕ ಇಲಾಖೆಗೆ ಪತ್ರ ಬರೆದಿದ್ದೇನೆ ಎಂದರು.
ವಿವಿಧ ಮೂಲಗಳಿಂದ ನರ್ಸ್ ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿಗೆ ಸಂಬಳ ನೀಡಲಾಗುತ್ತಿದೆ. ವೇತನ ವಿಳಂಬವಾಗಿರುವುದು ಗಮನಕ್ಕೆ ಬಂದಿದೆ. ಕೆಲವರಿಗೆ ಏಳೆಂಟು ತಿಂಗಳು, ಇನ್ನೂ ಕೆಲವರಿಗೆ ಮೂರು ತಿಂಗಳು ಸಂಬಳ ಆಗಿಲ್ಲ. ತಕ್ಷಣವೇ ಸಂಬಳ ನೀಡುವ ಕುರಿತು ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದರು.