ETV Bharat / city

ಶೋಕಿವಾಲನಿಗೆ ಸಾಥ್ ನೀಡಿದ ಸ್ಯಾಂಡಲ್ ವುಡ್ ನಿರ್ದೇಶಕರು - Actor Ajay Rao

ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಶೋಕಿಲಾಲ ಹಾಡಿನ ಬಿಡುಗಡೆ ಸಮಾರಂಭ ನಡೆಯಿತು. ಹಾಡಿನಲ್ಲಿ ನಟಿಸಿರುವ ನಿರ್ದೇಶಕರುಗಳೇ ಈ ಹಾಡನ್ನು ರಿಲೀಸ್ ಮಾಡಿದ್ದು ವಿಶೇಷ.

The directors who supported Shokivala
ಶೋಕಿವಾಲ ಸಿನಿಮಾಗೆ ಸಾಥ್ ನೀಡಿದ ಸ್ಯಾಂಡಲ್ ವುಡ್ ನಿರ್ದೇಶಕರು
author img

By

Published : Apr 21, 2022, 9:43 AM IST

ಬೆಂಗಳೂರು: ಅಜಯ್ ರಾವ್ ನಾಯಕರಾಗಿ ನಟಿಸಿರುವ ಶೋಕಿವಾಲ ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದ್ದು, ಈ ಹಾಡಿನಲ್ಲಿ ನಾಯಕ ಅಜಯ್ ರಾವ್ ಅವರೊಂದಿಗೆ ಸ್ಯಾಂಡಲ್​ವುಡ್​ನ ನಿರ್ದೇಶಕರಾದ ರವಿ ಬಸ್ರೂರ್, ನಂದಕಿಶೋರ್, ಹರಿ ಸಂತೋಷ್, ಶಶಾಂಕ್, ವಿ.ನಾಗೇಂದ್ರ ಪ್ರಸಾದ್ ಹೆಜ್ಜೆ ಹಾಕಿದ್ದಾರೆ.

ಎಲ್ಲಾ ದಿಗ್ಗಜರ ಸಮಾಗಮದಲ್ಲಿ ಮೂಡಿ ಬಂದಿರುವ ವಿಶೇಷ ಹಾಡು ಇದು. ಈ ಹಾಡನ್ನು ಚೇತನ್ ಕುಮಾರ್ ಬರೆದಿದ್ದು, ಶಶಾಂಕ್ ಶೇಷಗಿರಿ ಹಾಡಿದ್ದಾರೆ. ಶ್ರೀಧರ್​ ವಿ. ಸಂಭ್ರಮ್ ಸಂಗೀತ ಸಂಯೋಜಿಸಿದ್ದಾರೆ. ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಈ ಹಾಡಿನ ಬಿಡುಗಡೆ ಸಮಾರಂಭ ನಡೆಯಿತು. ಹಾಡಿನಲ್ಲಿ ನಟಿಸಿರುವ ನಿರ್ದೇಶಕರುಗಳೇ ಈ ಹಾಡನ್ನು ರೀಲಿಸ್ ಮಾಡಿದ್ದು ವಿಶೇಷ.

The directors who supported Shokivala
ಶೋಕಿವಾಲ ಚಿತ್ರತಂಡಕ್ಕೆ ಸಾಥ್​ ನೀಡಿದ ನಿರ್ದೇಶಕರು

ವಿ.ನಾಗೇಂದ್ರಪ್ರಸಾದ್, ನಂದಕಿಶೋರ್, ಹರಿ ಸಂತೋಷ್, ಚೇತನ್ ಕುಮಾರ್, ಮಹೇಶ್ ಕುಮಾರ್ ರವರು ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. 5 ಜನ ನಿರ್ದೇಶಕರನ್ನು ಚಿತ್ರ ತಂಡದಿಂದ ಸನ್ಮಾನಿಸಲಾಯಿತು.

ಜಾಕಿ ನಿರ್ದೇಶನದ ಈ ಚಿತ್ರಕ್ಕೆ ಶ್ರೀಧರ್ ವಿ. ಸಂಭ್ರಮ್ ಸಂಗೀತ ನೀಡಿದ್ದಾರೆ. ನವೀನ್ ಕುಮಾರ್ ಈ ಚಿತ್ರದ ಛಾಯಾಗ್ರಹಕರು. ಅಜಯ್ ರಾವ್ ಅವರಿಗೆ ನಾಯಕಿಯಾಗಿ ಸಂಜನಾ ಆನಂದ್ ನಟಿಸಿದ್ದಾರೆ. ಶರತ್ ಲೋಹಿತಾಶ್ವ, ಅರುಣ ಬಾಲರಾಜ್, ತಬಲಾ ನಾಣಿ, ಪ್ರಮೋದ್ ಶೆಟ್ಟಿ, ಗಿರಿ, ನಾಗರಾಜ ಮೂರ್ತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ಟಿ.ಆರ್. ಚಂದ್ರಶೇಖರ್ ಹಾಗೂ ಕಿಶೋರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಇದೇ ತಿಂಗಳು 29 ರಂದು ರಾಜ್ಯಾದ್ಯಂತ ಶೋಕಿವಾಲ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಚಿಕಿತ್ಸೆ ಪಡೆದುಕೊಂಡು ಮತ್ತೆ ಶಕ್ತಿಧಾಮಕ್ಕೆ ಬಂದ ಶಿವರಾಜ್​ಕುಮಾರ್​ !

ETV Bharat Logo

Copyright © 2025 Ushodaya Enterprises Pvt. Ltd., All Rights Reserved.