ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೋರ್ವ ವಿದೇಶಿ ಡ್ರಗ್ಸ್ ಪೆಡ್ಲರ್ನನ್ನು ಬಂಧಿಸಿದ್ದಾರೆ.
ಚಿಡಿಬೈರ್ ಆ್ಯಮರೋಸ್ ಬಂಧಿತ ಆರೋಪಿ. ಈತನನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಪಾರ್ಟಿಗಳಿಗೆ ಡ್ರಗ್ ಸಪ್ಲೈ ಮಾಡುತ್ತಿರುವುದಾಗಿ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಆ್ಯಮರೋಸ್ನಿಂದ 10 ಗ್ರಾಂ ಎಲ್ಎಸ್ಡಿ ವಶಕ್ಕೆ ಪಡೆಯಲಾಗಿದ್ದು, ಈ ಮೂಲಕ ಪ್ರಕರಣದಲ್ಲಿ 21 ಆರೋಪಿಗಳನ್ನು ಬಂಧಿಸಿದಂತಾಗಿದೆ.
ಓದಿ: ಮಂಗಳೂರು: ಬಸ್ - ಲಾರಿ ಡಿಕ್ಕಿ, ಪ್ರಯಾಣಿಕರು ಪಾರು
ಲೂಮ್ ಪೆಪ್ಪರ್, ಬೊನಾಲ್ಡ್ ಜೊತೆಗೆ ಮೂರನೇ ವಿದೇಶಿ ಡ್ರಗ್ಸ್ ಪೆಡ್ಲರ್ ಹೈಫೈ ಪಾರ್ಟಿಗಳಿಗೆ ಡ್ರಗ್ ಸಪ್ಲೈ ಮಾಡುವ ಪಟ್ಟಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಸಿಸಿಬಿ ಪೊಲೀಸರು ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.