ಬೆಂಗಳೂರು: ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರ ಆಪ್ತೆ ಶಶಿಕಲಾಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಕಲ್ಪಿಸಲು 2 ಕೋಟಿ ರೂ. ಲಂಚ ಪಡೆದ ಆರೋಪದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ನಿವೃತ್ತ ಡಿಜಿಪಿ ಸತ್ಯನಾರಾಯಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಿನ್ನೆ ಹೈಕೋರ್ಟ್ನಲ್ಲಿ ನಡೆಯಿತು.
ಇನ್ನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸಿಬಿ 2 ವಾರ ಕಾಲಾವಕಾಶ ಪಡೆದಿರುವ ಹಿನ್ನೆಲೆ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಯ್ತು.
ಪ್ರಕರಣದ ಹಿನ್ನೆಲೆ :
ಪರಪ್ಪನ ಅಗ್ರಹಾರದಲ್ಲಿ ಶಶಿಕಲಾಗೆ ವಿಐಪಿ ಸೌಲಭ್ಯ ಒದಗಿಸಲು ಅಂದಿನ ಡಿಜಿಪಿ ಸತ್ಯನಾರಾಯಣ ರಾವ್ 2 ಕೋಟಿ ರೂಪಾಯಿ ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿ ಅಂದಿನ ಡಿಐಜಿ ಡಿ.ರೂಪಾ ದೂರು ನೀಡಿದ್ದರು. ಈ ಸಂಬಂಧ ವಿಚಾರಣೆ ನಡೆಸಲು ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಅವರನ್ನು ನೇಮಿಸಿತ್ತು. ವಿನಯ್ ಕುಮಾರ್ ವರದಿ ಆಧರಿಸಿ ತನಿಖೆ ನಡೆಸುವಂತೆ ಪ್ರಕರಣವನ್ನು ಎಸಿಬಿಗೆ ವಹಿಸಲಾಗಿತ್ತು. ಅದರಂತೆ ಎಸಿಬಿ ತನಿಖೆ ಮುಂದುವರಿಸಿತ್ತು. ಇದನ್ನು ರದ್ದುಕೋರಿ ಸತ್ಯನಾರಾಯಣ ರಾವ್ ಹೈಕೋರ್ಟ್ ಮೆಟ್ಟಿಲೇರಿದ್ರು.