ಬೆಂಗಳೂರು: ಸೆಪ್ಟೆಂಬರ್ವರೆಗೆ ಆನ್ ಲೈನ್ ತರಗತಿಗಳು ನಡೆಯಲಿದ್ದು, ಬಳಿಕ ಅಕ್ಟೋಬರ್ ನಿಂದ ಶಾಲಾ-ಕಾಲೇಜುಗಳು ಆರಂಭವಾಗಲಿರುವ ಸುಳಿವು ಸಿಕ್ಕಿದೆ. ಈ ಬಗ್ಗೆ ಉನ್ನತ ಮೂಲಗಳು ಖಚಿತ ಪಡಿಸಿವೆ.
ಈಗಾಗಲೇ ರಾಜ್ಯದಲ್ಲಿ ಶುರುವಾಗಬೇಕಿದ್ದ ಶೈಕ್ಷಣಿಕ ತರಗತಿಗಳು ಕೋವಿಡ್ ಭೀತಿಯಿಂದ ಸ್ಥಗಿತವಾಗಿವೆ. ಈ ನಡುವೆ ಜುಲೈನಲ್ಲಿ ಆರಂಭ ಮಾಡಲು ಚಿಂತನೆ ನಡೆಸಲಾಗಿತ್ತು. ಆದರೆ, ಜೂನ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ, ದ್ವಿತೀಯ ಪಿಯುಸಿಯ ಕೊನೆಯ ಪರೀಕ್ಷೆ ನಡೆಸಬೇಕಾಗಿತ್ತು.
ಹೀಗಾಗಿಯೇ ಜುಲೈ ಮೊದಲ ವಾರದಲ್ಲಿ ಶಾಲೆಗಳನ್ನ ಆರಂಭಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ದಿಢೀರ್ ಅಂತ ಕೊರೊನಾ ಸೋಂಕಿರತ ಸಂಖ್ಯೆ ಹೆಚ್ಚಾದ ಕಾರಣ ಸೆಪ್ಟೆಂಬರ್ನಲ್ಲಿ ಆರಂಭವಾಗಲಿದೆ ಅಂತ ಅಂದಾಜಿಸಲಾಗಿತ್ತು. ಆದರೆ ಇದೀಗ ಸೆಪ್ಟೆಂಬರ್ವರೆಗೆ ಆನ್ ಲೈನ್ ಕ್ಲಾಸ್ಗಳು ನಡೆಯಲಿವೆ. ನಂತರ ಅಕ್ಟೋಬರ್ನಿಂದ ಶಾಲಾ-ಕಾಲೇಜು ಆರಂಭವಾಗಲಿರುವುದಾಗಿ ಉನ್ನತ ಮೂಲಗಳು ಖಚಿತ ಪಡಿಸಿವೆ.
ಅಲ್ಲದೆ ಈಗಾಗಲೇ ಶಾಲಾ-ಕಾಲೇಜುಗಳು ಆನ್ ಲೈನ್ ಪಾಠ ಪ್ರವಚನ ಆರಂಭಿಸಿವೆ. ಇದೀಗ ಶಾಲಾ-ಕಾಲೇಜು ಆರಂಭವಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಸೆಪ್ಟೆಂಬರ್ಗೆ ಅನ್ ಲಾಕ್ -3 ಮುಗಿಯಲಿದ್ದು, 4 ಶುರುವಾಗಲಿದೆ. ಹೀಗಾಗಿ ಎಲ್ಲರ ಚಿತ್ತ ಕೇಂದ್ರ ಸರ್ಕಾರದ ನಿರ್ಧಾರದತ್ತ ನೆಟ್ಟಿದೆ.