ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ನಿಡಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ವಿದ್ಯಾರ್ಥಿ ಪುನೀತ್ (8) ನೀರಿನ ಸಂಪ್ಗೆ ಬಿದ್ದು ಮೃತಪಟ್ಟಿದ್ದಾನೆ.
ಮಧ್ಯಾಹ್ನ ಮಕ್ಕಳನ್ನು ಊಟಕ್ಕೆ ಬಿಟ್ಟ ಸಮಯದಲ್ಲಿ ಪುನೀತ್ ಸಂಪ್ಗೆ ಬಿದ್ದಿದ್ದಾನೆ. ಸಂಪ್ಗೆ ಬೀಳುತ್ತಲೇ ಉಳಿದ ವಿದ್ಯಾರ್ಥಿಗಳು ಕೂಗಾಡಿದ್ದಾರೆ. ತಕ್ಷಣವೇ ಸಂಪ್ನಿಂದ ಮೇಲೆತ್ತಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸಿಲ್ಲ.
ಬಳಿಕ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಯಿತು. ಸ್ಥಳಕ್ಕೆ ಆಗಮಿಸಿದ ಸಖರಾಯ ಪಟ್ಟಣ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.