ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಏಪ್ರಿಲ್ 16 ರಿಂದ ಮೇ6 ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಪಿಯು ಬೋರ್ಡ್ ತಿಳಿಸಿದೆ. ಈ ಹಿಂದೆ ತಾತ್ಕಾಲಿಕ ವೇಳಾಪಟ್ಟಿಯನ್ನ ಪ್ರಕಟಿಸಿದ್ದ ಪಿಯು ಬೋರ್ಡ್, ಪೋಷಕರು- ವಿದ್ಯಾರ್ಥಿಗಳಿಂದ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದೀಗ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಏಪ್ರಿಲ್ 16 ರಂದು ಗಣಿತಶಾಸ್ತ್ರ ವಿಷಯದ ಮೂಲಕ ಪರೀಕ್ಷೆ ಆರಂಭಗೊಳ್ಳಲಿವೆ.
ಕೋವಿಡ್- 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳು ದ್ವಿತೀಯ ಪಿಯು ನಂತರ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ದಾಖಲಾಗಿ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಹಿತದೃಷ್ಟಿಯಿಂದ ಪಠ್ಯಕ್ರಮದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಭಾಷಾ ವಿಷಯಗಳಲ್ಲಿ ಕಳೆದ ಸಾಲಿನಲ್ಲಿ ಶೇ.30 ರಷ್ಟು ಪಠ್ಯಕ್ರಮ ಕಡಿತಗೊಳಿಸಲಾಗಿತ್ತು.
ನಂತರ 2021-22ನೇ ಸಾಲಿನಲ್ಲೂ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇ.30 ರಷ್ಟು ಪಠ್ಯಕ್ರಮ ಕಡಿತಗೊಳಿಸಲಾಗಿದೆ. ಹೀಗಾಗಿ ಶೇ.70 ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ. 2021-22ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಐಚ್ಚಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇ.100 ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ಐಚ್ಚಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವಾಗ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸುವ ಅವಕಾಶ ಕಲ್ಪಿಸಲಾಗಿದೆ.
ದ್ವಿತೀಯ ಪಿಯುಸಿ ವೇಳಾಪಟ್ಟಿ ಹೀಗಿದೆ
16-4-2022- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ
18-4-2022- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
19-4-2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
20-4-2022 - ಇತಿಹಾಸ, ಭೌತಶಾಸ್ತ್ರ
21-4-2022- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್
22-4-2022- ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
23- 4-2022- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ
25-4-2022- ಅರ್ಥ ಶಾಸ್ತ್ರ
26-4-2022- ಹಿಂದಿ
28-4-2022- ಕನ್ನಡ
30-4-2022- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
2-5-2022- ಭೂಗೋಳ ಶಾಸ್ತ್ರ, ಜೀವಶಾಸ್ತ್ರ
4-5-2022- ಇಂಗ್ಲಿಷ್
6-5-2022- ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ, ಐಚ್ಛಿಕ ಕನ್ನಡ
ಓದಿ: ಹಿಜಾಬ್ - ಕೇಸರಿ ಗಲಾಟೆ: ಶಿಕಾರಿಪುರದಲ್ಲಿ ಬಸ್ಗೆ ಕಲ್ಲು ತೂರಾಟ.. ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ