ETV Bharat / city

ರಾಜ್ಯದ 8 ಜಿಲ್ಲೆಗಳ 34 ಕೇಂದ್ರಗಳಲ್ಲಿ ನಡೆಯುತ್ತಿದೆ ದ್ವಿತೀಯ ಪಿಯುಸಿ ಮೌಲ್ಯಮಾಪನ - ದ್ವಿತೀಯ ಪಿಯು ಮೌಲ್ಯಮಾಪನ

ಪಿಸಿಎಂಬಿ ಹಾಗೂ ಇನ್ನೂ ನಡೆದಿರದ‌‌ ಇಂಗ್ಲಿಷ್ ಪತ್ರಿಕೆ ಪರೀಕ್ಷೆ‌‌ ಹೊರತುಪಡಿಸಿ ಉಳಿದೆಲ್ಲಾ ವಿಷಯಗಳ‌ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ ಎಂಟು ಜಿಲ್ಲೆಗಳ 34 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿದ್ದಾರೆ.

secondary PU Evaluation is taking place in 34 centers in 8 districts
ರಾಜ್ಯದ 8 ಜಿಲ್ಲೆಗಳ 34 ಕೇಂದ್ರಗಳಲ್ಲಿ ನಡೆಯುತ್ತಿದೆ ದ್ವಿತೀಯ ಪಿಯು ಮೌಲ್ಯಮಾಪನ
author img

By

Published : Jun 1, 2020, 8:00 PM IST

ಬೆಂಗಳೂರು: ರಾಜ್ಯದ ಎಂಟು ಜಿಲ್ಲೆಗಳ 34 ಕೇಂದ್ರಗಳಲ್ಲಿ ದ್ವಿತೀಯ ಪಿಯು ವಿವಿಧ ವಿಷಯಗಳ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದ್ದು, ಸುಮಾರು 6,500 ಉಪನ್ಯಾಸಕರು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ. ನಿಗದಿತ ಅವಧಿಯಲ್ಲಿ ಮೌಲ್ಯಮಾಪನ ಪೂರ್ಣಗೊಳ್ಳಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿದ್ದಾರೆ.

ಬೆಂಗಳೂರಿನ ವಿಜಯ ಹಾಗೂ ಎಸ್​ಎಸ್ಎಂಆರ್​ವಿ‌ ಕಾಲೇಜುಗಳಲ್ಲಿನ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಪಿಸಿಎಂಬಿ ಹಾಗೂ ಇನ್ನೂ ನಡೆದಿರದ‌‌ ಇಂಗ್ಲಿಷ್ ಪರೀಕ್ಷೆ‌‌ ಹೊರತುಪಡಿಸಿ ಉಳಿದೆಲ್ಲಾ ವಿಷಯಗಳ‌ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದೆ. ಇಂತಹ ಸಂದರ್ಭದಲ್ಲಿಯೂ ಉಪನ್ಯಾಸಕರು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದು, ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕಂಟೇನ್ಮೆಂಟ್ ವಲಯಗಳ ಉಪನ್ಯಾಸಕರಿಗೆ ಮೌಲ್ಯಮಾಪನದಿಂದ ವಿನಾಯಿತಿ: ಕೋವಿಡ್-19 ಹಿನ್ನೆಲೆಯಲ್ಲಿ ಕಂಟೇನ್ಮೆಂಟ್ ವಲಯಗಳಲ್ಲಿರುವವರು, ಅನಾರೋಗ್ಯ ಪೀಡಿತರು, ಗರ್ಭಿಣಿಯರಿಗೆ ಮೌಲ್ಯಮಾಪನ ಪ್ರಕ್ರಿಯೆಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಸಾಮರ್ಥ್ಯವುಳ್ಳ ಉಪನ್ಯಾಸಕರು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸ್ವಯಂಪ್ರೇರಿತರಾಗಿ ಮುಂದಿನ‌ ದಿನಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.

ಪಿಸಿಎಂಬಿ ವಿಷಯಗಳ ಮೌಲ್ಯಮಾಪನಕ್ಕೆ ಹೆಚ್ಚುವರಿ ಉಪನ್ಯಾಸಕರ‌ ಅಗತ್ಯತೆವಿದೆ.‌ ನಗರ ಕೇಂದ್ರಗಳಲ್ಲಿ ವಸತಿ, ಆಹಾರ‌ ಸೌಕರ್ಯಗಳ ಲಭ್ಯತೆ ಆಧಾರದ‌ ಮೇಲೆ ಆರಂಭ ದಿನಾಂಕ ನಿರ್ಧರಿಸಲಾಗುವುದು. ಇದೇ ಜೂನ್ 18ರಂದು ನಡೆಯಲಿರುವ ಇಂಗ್ಲಿಷ್ ಭಾಷಾ ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನವನ್ನ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ‌ ನಡೆಸಲು ಈಗಾಗಲೇ ಸೂಚನೆ‌ ನೀಡಲಾಗಿದೆ‌ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.