ETV Bharat / city

15,000 ಶಾಲಾ ಶಿಕ್ಷಕರ ನೇಮಕ ಪರೀಕ್ಷೆಯ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ಮೇ 21, 22 ರಂದು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ನಡೆಸಿದ್ದ ಪರೀಕ್ಷೆಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ.

selection-list-for-primary-school-teacher-recruitment
ಶಿಕ್ಷಕರ ನೇಮಕ ಪರೀಕ್ಷೆಯ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
author img

By

Published : Aug 17, 2022, 10:28 PM IST

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರ ಮಾರ್ಚ್‌ /ಏಪ್ರಿಲ್‌ ತಿಂಗಳಲ್ಲಿ ಅರ್ಜಿ ಸ್ವೀಕಾರ ಮಾಡಿತ್ತು. ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು.

ಈ ನೇಮಕ ಪ್ರಕ್ರಿಯೆಯ ಗಣಕೀಕೃತ ಮೌಲ್ಯಮಾಪನ ಕಾರ್ಯ ಮುಗಿಸಿದ್ದು ತಾತ್ಕಾಲಿಕ ಆಯ್ಕೆಪಟ್ಟಿ ನೀಡಲಾಗಿದೆ. ಪ್ರಸ್ತುತ 1:2 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸೆಪ್ಟೆಂಬರ್ ಅಥವಾ ಅಕ್ಟೋಬರ್​ನಲ್ಲಿ ಪ್ರಕಟಿಸಲಾಗುತ್ತದೆ. 1:1 ಮುಖ್ಯ / ಅಂತಿಮ ಆಯ್ಕೆಪಟ್ಟಿಯನ್ನು ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ರಿಸಲ್ಟ್ ನೋಡುವ ಲಿಂಕ್: ಮೇ 21, 22, ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ವೈಯಕ್ತಿಕ ಅಂಕಗಳನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಕೆಳಗಿನ ಲಿಂಕ್ ಅನ್ನು ರಿಸಲ್ಟ್ ಗಾಗಿ https://www.schooleducation.kar.nic.in/index.html ಕ್ಲಿಕ್ ಮಾಡಬೇಕು ಎಂದು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ : ಶಾಲಾ ಕಾಲೇಜುಗಳಲ್ಲಿ ಇನ್ಮುಂದೆ ರಾಷ್ಟ್ರಗೀತೆ ಗಾಯನ ಕಡ್ಡಾಯ: ಸರ್ಕಾರದ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.