ETV Bharat / city

ಸೊಲ್ಲಾಪುರ ಡಾಬಾ, ಬೆಂಗಳೂರಿನಲ್ಲಿ ಗಾಂಜಾ, ಅಫೀಮು ಮಾರಾಟ: ಕ್ರಮಕ್ಕೆ PAC ಸೂಚನೆ

ಸೊಲ್ಲಾಪುರ ರಸ್ತೆ, ಡಾಬಾಗಳಲ್ಲಿ ಗಾಂಜಾ, ಅಫೀಮು ಮಾರಾಟವಾಗುತ್ತಿದೆ. ಪೊಲೀಸರು ಮತ್ತು ಅಬಕಾರಿ ಇಲಾಖೆಯವರು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.

H K Patil
ಎಚ್.ಕೆ. ಪಾಟೀಲ್
author img

By

Published : Aug 18, 2020, 4:56 PM IST

ಬೆಂಗಳೂರು: ಅಕ್ರಮ ಮದ್ಯ ಮಾರಾಟ, ಅಬಕಾರಿ ಆದಾಯ ಕ್ರೋಢೀಕರಣದಲ್ಲಿ ಸೋರಿಕೆ ಹಾಗೂ ಸೊಲ್ಲಾಪುರ ರಸ್ತೆಯಲ್ಲಿ ಗಾಂಜಾ,ಅಫೀಮು ಮಾರಾಟದ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆಯಾಗಿದೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆ ಮುಗಿದ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

ಅಬಕಾರಿ ಇಲಾಖೆಯಿಂದ ಆದಾಯ ಕ್ರೋಢೀಕರಣದಲ್ಲಿ ಆಗುತ್ತಿರುವ ಸೋರಿಕೆಯ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಇದಕ್ಕೆ ಕಡಿವಾಣ ಹಾಕಲು ಸದಸ್ಯರು ಹಲವು ಸಲಹೆಗಳನ್ನು ನೀಡಿದ್ದಾರೆ ಎಂದರು.

ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯ ಬಳಿಕ ಎಚ್.ಕೆ. ಪಾಟೀಲ್ ಮಾಧ್ಯಮಗಳ ಜೊತೆ ಮಾತನಾಡಿದರು.

ಅಕ್ರಮ ಮದ್ಯ ಮಾರಾಟ ಮಾಡುವವರಿಗೆ ಕೇಸ್ ಹಾಕದ ಬಗ್ಗೆ ಅಧಿಕಾರಿಗಳಿಂದ ವಿವರಣೆ ಕೇಳಲಾಯಿತು. ಈ ರೀತಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕೇಸು ದಾಖಲಿಸಲು ಸಮಿತಿ ಸೂಚಿಸಿದೆ. ಈ ಕುರಿತು ತಾಂತ್ರಿಕ ಮಟ್ಟದ ವರದಿ ನೀಡಲು ಸಮಿತಿ ರಚಿಸಲಾಗಿತ್ತು. ಈ ಎರಡು ಸಮಿತಿಗಳ ವರದಿ ಅನುಷ್ಠಾನ ಮಾಡಿಲ್ಲ. ಹೀಗಾಗಿ ವರದಿ ಬಗ್ಗೆ ಪರಿಶೀಲನೆಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಡಾಬಾಗಳಲ್ಲಿ ಗಾಂಜಾ:

ಸೊಲ್ಲಾಪುರದ ಡಾಬಾಗಳಲ್ಲಿ ಗಾಂಜಾ,ಅಫೀಮು ಮಾರಾಟ ಮಾಡಲಾಗುತ್ತಿದೆ. ಬೆಂಗಳೂರಿನ ಶಾಲಾ, ಕಾಲೇಜುಗಳ ಬಳಿಯೂ ಡ್ರಗ್ಸ್ ಮಾರಾಟವಾಗುತ್ತಿದೆ ಎಂಬ ಬಗ್ಗೆ ಆತಂಕ ವ್ಯಕ್ತಪಡಿಸಿದ ಪಾಟೀಲ್‌, ಅಬಕಾರಿ ಇಲಾಖೆ ಈ ಬಗ್ಗೆ ಎಚ್ಚರಿಕೆ ವಹಿಸಬೇಕೆಂದರು.

ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ತನಿಖೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡುತ್ತಾ, ಈಗಾಗಲೇ ತನಿಖೆಗೆ ಸರ್ಕಾರ ಆದೇಶ ಮಾಡಿದೆ‌. ಈ ಸಮಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಆದರೂ ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.