ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ವ್ಯಕ್ತಿಯನ್ನು ಬಂಧಿಸುವಲ್ಲಿ ಬಾಗಲೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ನೈಜೀರಿಯಾ ಮೂಲದ ಇಜಿಕ್ ನ್ಜೆಗ್ವೂ ಬಂಧಿತ ಆರೋಪಿ. ಈತ ಸಿಲಿಕಾನ್ ಸಿಟಿಯಲ್ಲಿ ಐಷಾರಾಮಿ ಜೀವನ ನಡೆಸಲು ಗಾಂಜಾ, ಕೊಕೇನ್ ಅನ್ನು ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಈ ಕುರಿತು ಮಾಹಿತಿ ಪಡೆದ ಬಾಗಲೂರು ಪೊಲೀಸರು, ಆತ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ. ಬಂಧಿತನಿಂದ 1ಕೆ.ಜಿ ಗಾಂಜಾ,19 ಗ್ರಾಂ ಕೊಕೇನ್, 2 ಮೊಬೈಲ್ ಹಾಗೂ ತೂಕದ ಯಂತ್ರ ವಶಕ್ಕೆ ಪಡೆದು ಕೊಂಡಿದ್ದಾರೆ.
ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.