ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತಾರನ್ನು ಬಿಬಿಎಂಪಿ ಆಡಳಿತಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಪಾಲಿಕೆ ಸದಸ್ಯರ ಐದು ವರ್ಷದ ಅಧಿಕಾರವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆ ಗೌರವ್ ಗುಪ್ತಾರನ್ನು ಬಿಬಿಎಂಪಿ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಸದ್ಯ ಗೌರವ್ ಗುಪ್ತಾ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆ ಜೊತೆಗೆ ಬಿವಿಎಂಪಿ ಆಡಳಿತಾಧಿಕಾರಿಯಾಗಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಕಾರ್ಯನಿರ್ವಹಿಸಲಿದ್ದಾರೆ.
2007ರಲ್ಲಿ ಗೌರವ್ ಗುಪ್ತಾ ಬಿಬಿಎಂಪಿ ವಿಶೇಷ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ಸದ್ಯ ಸಿಎಂ ಬಿಎಸ್ವೈ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಮತ್ತು ಸಿಎಂ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಜೊತೆ ಚರ್ಚಿಸಿ 1990 ಬ್ಯಾಚ್ನ ಐಎಎಸ್ ಅಧಿಕಾರಿ ಗೌರವ್ ಗುಪ್ತಾರನ್ನು ಆಡಳಿತಾಧಿಕಾರಿಯಾಗಿ ಅಂತಿಮಗೊಳಿಸಿದ್ದಾರೆ.