ಬೆಂಗಳೂರು: ಯಾದವ ಸಮುದಾಯದ ಎಲ್ಲ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಸಮುದಾಯಕ್ಕಾಗಿ ಪ್ರತ್ಯೇಕ ಅಭಿವದ್ಧಿ ನಿಗಮ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಅಖಿಲ ಭಾರತ ಯಾದವ ಮಹಾಸಭಾ ಮತ್ತು ಕರ್ನಾಟಕ ಯಾದವ ಸಂಘ ಆಯೋಜಿಸಿದ್ದ ರಾಷ್ಟ್ರೀಯ ಕಾರ್ಯಾಕಾರಿ ಪರಿಷತ್ನ ಸಭೆಯಲ್ಲಿ ಮಾತನಾಡಿದ ಅವರು, ಬಾಣಸವಾಡಿಯಲ್ಲಿ ರಾಜ್ಯ ಯಾದವ ಸಮುದಾಯದ ಭವನ ನಿರ್ಮಾಣಕ್ಕೆ ₹3 ಕೋಟಿ ಬಿಡುಗಡೆ ಮಾಡಲಾಗುವುದು. ರಾಜ್ಯದಲ್ಲಿರುವ ಗೊಲ್ಲರ ಹಟ್ಟಿಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಬಿಎಸ್ವೈ ಭಾಷಣದ ಸಂದರ್ಭದಲ್ಲಿ ತಮ್ಮ ಸಮುದಾಯದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ಗೆ ಸಚಿವ ಸ್ಥಾನ ನೀಡುವಂತೆ ಸಭೆಯಲ್ಲಿ ಜನರು ಒತ್ತಾಯಿಸಿದರು. ಸಭಿಕರನ್ನು ಗದರಿಸಿದ ಮುಖ್ಯಮಂತ್ರಿ, ಸುಮ್ಮನೆ ಇರಿ ಹಾಗೆಲ್ಲ. ಎಲ್ಲ ಭರವಸೆಗಳನ್ನು ನೀಡಲಾಗುವುದಿಲ್ಲ. ಸೂಕ್ತ ಸಂದರ್ಭದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದರು.