ETV Bharat / city

ವಿಸ್ಟ್ರನ್ ಕಂಪನಿ ಮೇಲಿನ‌ ದಾಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ: ಸಚಿವ ಜಗದೀಶ್‌ ಶೆಟ್ಟರ್‌

ಕೋಲಾರದ ವಿಸ್ಟ್ರನ್‌ ಕಂಪನಿಯಲ್ಲಿನ ಘಟನೆ ಸಂಬಂಧ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಕೋಲಾರ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿ ಅಗತ್ಯ ರಕ್ಷಣೆ ನೀಡಲು ಸೂಚನೆ ನೀಡಿದ್ದೇವೆ. ಘಟನೆಗೆ ಕಾರಣರಾದವರು ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯವಾಗಿ ಅವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಜಗದೀಶ್‌ ಶೆಟ್ಟರ್‌
author img

By

Published : Dec 12, 2020, 8:34 PM IST

ಬೆಂಗಳೂರು: ಕೋಲಾರದ ವಿಸ್ಟ್ರನ್‌ ಕಂಪನಿಯಲ್ಲಿ ನಡೆದಿರುವ ಅಹಿತಕರ ಘಟನೆ ಬಗ್ಗೆ ತನಿಖೆ ನಡೆಸಿ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

ಕರ್ನಾಟಕ ರಾಜ್ಯ ಶಾಂತಿಪ್ರಿಯ ರಾಜ್ಯ. ಹೀಗಾಗಿಯೇ ವಿದೇಶಿ ಕಂಪನಿಗಳು ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿವೆ. ಸ್ನೇಹಕರ ವಾತಾವರಣದಲ್ಲಿ ವ್ಯವಹಾರ ಮಾಡುತ್ತಿದ್ದಾರೆ. ಫಾರ್ಚೂನ್‌ 500 ಕಂಪನಿಗಳಲ್ಲಿ 400 ಕಂಪನಿಗಳು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಕಂಪನಿಗಳು ಹಲವು ವರ್ಷಗಳಿಂದ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಆರ್ಥಿಕ ಹಾಗೂ ಕೈಗಾರಿಕಾ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿವೆ. ಇದು ನಮ್ಮ ರಾಜ್ಯ ಸರ್ಕಾರದ ಕೈಗಾರಿಕೆಗಳು, ಕಾರ್ಮಿಕರು ಹಾಗೂ ಜನಸ್ನೇಹಿ ಅಂಶಗಳ ಪ್ರತಿಬಿಂಬವಾಗಿದೆ. ಈ ರೀತಿಯ ಅಹಿತಕರ ಘಟನೆ ಆಗಿರುವುದು ವಿಷಾದನೀಯ ಎಂದು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಕೂಡ ಕಾನೂನಿನ ವಿರುದ್ಧವಾಗಿ ಹೋಗುವುದು ಸರಿಯಲ್ಲ. ರಾಜ್ಯ ಸರ್ಕಾರ ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಹಲವು ಕ್ರಮಗಳನ್ನು ಕೈಗೊಂಡಿದೆ. ಇದೇ ವೇಳೆ ಕಾರ್ಮಿಕರ ಹಕ್ಕುಗಳ ರಕ್ಷಣೆಗೂ ಬದ್ಧವಾಗಿದೆ. ತಮಗೆ ಆಗಿರುವ ತೊಂದರೆಯನ್ನು ಕಾನೂನಿನ ಅಡಿಯಲ್ಲಿ ಸಮರ್ಪಕವಾಗಿ ತಿಳಿಸಿದ್ದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿತ್ತು ಎಂದಿದ್ದಾರೆ.

ನಮ್ಮ ಸರ್ಕಾರ ರಾಜ್ಯದಲ್ಲಿ ಹೂಡಿಕೆ ಮಾಡಿರುವ ಕಂಪನಿಗಳಿಗೆ ಸೂಕ್ತ ರಕ್ಷಣೆ ಕೊಡಲು ಸಿದ್ಧವಿದೆ. ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ನಾವು ಬಿಗಿಯಾದ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈಗಾಗಲೇ ಕೋಲಾರ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿ ಅಗತ್ಯ ರಕ್ಷಣೆ ನೀಡಲು ಸೂಚನೆ ನೀಡಿದ್ದೇವೆ. ಅಲ್ಲದೆ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಘಟನೆಗೆ ಕಾರಣರಾದವರು ಯಾರೇ ಆಗಿದ್ದರೂ ನಿರ್ದಾಕ್ಷಣ್ಯವಾಗಿ ಅವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.