ಬೆಂಗಳೂರು: ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ಗೆ ಬಾಹ್ಯ ಬೆಂಬಲ ನೀಡುವ ಘೋಷಣೆ ಮಾಡಿದ ಸಮಾರಂಭದಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾಗಿದ್ದು ಗೋಚರಿಸಿತು.
ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದರು. ಕೋವಿಡ್ ಎರಡನೇ ಅಲೆ ರಾಜ್ಯಕ್ಕೆ ದಾಳಿ ಇಡುವ ಆತಂಕದಲ್ಲಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಈ ಸಮಾರಂಭದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನೂ ಕಾಪಾಡಿಕೊಳ್ಳದೇ ನಿಂತದ್ದು ಗೋಚರಿಸಿತು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಶರತ್ ಬಚ್ಚೇಗೌಡಗೆ ಅವರ ಅಭಿಮಾನಿಗಳು ಸಿದ್ದರಾಮಯ್ಯ ನಿವಾಸ ಮುಂಭಾಗ ಸೇಬಿನ ಆಹಾರವನ್ನು ಹಾಕಿ ಅಭಿನಂದಿಸಿದರು. ಅದಾಗುತ್ತಿದ್ದಂತೆ ಸೇಬಿನ ಹಣ್ಣನ್ನು ಕಿತ್ತುಕೊಳ್ಳಲು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮುಗಿಬಿದ್ದು ಇನ್ನೊಮ್ಮೆ ಗುಂಪುಗೂಡುವ ಸ್ಥಿತಿಯನ್ನು ನಿರ್ಮಿಸಿದರು. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆದ ಕಾರ್ಯಕ್ರಮದುದ್ದಕ್ಕೂ ಜನ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವಿಕೆಯ ಅರ್ಥ ಕಳೆದುಕೊಳ್ಳುವಂತೆ ಮಾಡಿದ್ದರು.
ಓದಿ.. ಸೋಷಿಯಲ್ ಮೀಡಿಯಾಕ್ಕೆ ಮಾರ್ಗಸೂಚಿ ಮೂಲಕ ಕಡಿವಾಣ ಹಾಕಿದ ಕೇಂದ್ರ ಸರ್ಕಾರ
ಶರತ್ ಬಚ್ಚೇಗೌಡ ಬಾಹ್ಯ ಬೆಂಬಲವನ್ನು ಕಾಂಗ್ರೆಸ್ಗೆ ವ್ಯಕ್ತಪಡಿಸಿದ ಸಮಾರಂಭದಲ್ಲಿ ಎಲ್ಲಿಯೂ ಜನದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆದರೆ ಕೊನೆಯಲ್ಲಿ ಅದೇ ವಿಪರ್ಯಾಸವೆಂಬಂತೆ ಗೋಚರಿಸಿತು.