ಬೆಂಗಳೂರು : ಪಶ್ಚಿಮ ಪದವೀಧರ ಕ್ಷೇತ್ರದಿಂದ ಎಸ್ ವಿ ಸಂಕನೂರು ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಶಶೀಲ್ ನಮೋಶಿ ಅವರ ಹೆಸರನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕ ಅಧಿಕೃತವಾಗಿ ಇಂದು ಪ್ರಕಟಿಸಿದೆ. ಈ ಬಗ್ಗೆ ಒಂದು ತಿಂಗಳ ಮೊದಲೇ ಈಟಿವಿ ಭಾರತ ವರದಿ ಪ್ರಕಟಿಸಿತ್ತು.
ವಿಧಾನಪರಿಷತ್ ಚುನಾವಣೆ: ಎರಡು ಕ್ಷೇತ್ರಗಳಿಗೆ ರಾಜ್ಯ ಬಿಜೆಪಿಯಿಂದ ಅಭ್ಯರ್ಥಿ ಆಯ್ಕೆ
ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯ ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಿದೆ. ಪಶ್ಚಿಮ ಪದವೀಧರ ಕ್ಷೇತ್ರದಿಂದ ಹಾಲಿ ಸದಸ್ಯ ಎಸ್ ವಿ ಸಂಕನೂರು ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಸುಶೀಲ್ ನಮೋಶಿ ಅವರ ಹೆಸರನ್ನು ರಾಜ್ಯ ಬಿಜೆಪಿ ಅಂತಿಮಗೊಳಿಸಿದೆ.
ಎರಡೂ ಕ್ಷೇತ್ರಗಳಿಂದಲೂ ಒಂದೊಂದೇ ಹೆಸರನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಬಿಜೆಪಿ ರಾಜ್ಯ ಘಟಕ ಕಳುಹಿಸಿಕೊಟ್ಟಿದೆ ಎಂದು ಫೆಬ್ರವರಿ 10ರಂದು ಈಟಿವಿ ಭಾರತ ವರದಿ ಮಾಡಿತ್ತು. ಇದೀಗ ರಾಜ್ಯ ಬಿಜೆಪಿ ಅಧಿಕೃತವಾಗಿ ಕೇಂದ್ರಕ್ಕೆ ಈ ಎರಡೂ ಹೆಸರುಗಳನ್ನ ಶಿಫಾರಸು ಮಾಡಿ ಕಳುಹಿಸಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಂಕನೂರು ಹಾಗೂ ನಮೋಶಿ ಹೆಸರನ್ನೇ ವರಿಷ್ಠರೂ ಆಯ್ಕೆ ಮಾಡುವ ಸಾಧ್ಯತೆಯಿದೆ.