ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಶಶಿಕಲಾ ನಟರಾಜನ್ರನ್ನು ವಿಕ್ಟೋರಿಯಾ ಆಸ್ಪತ್ರೆ ಆವರಣದ ಟ್ರಾಮಾ ಸೆಂಟರ್ಗೆ ವರ್ಗಾಯಿಸಿ ಕ್ವಾರಂಟೈನ್ ಮಾಡಲಾಗಿದೆ.
ನಿನ್ನೆ ಸಂಜೆ ಶಶಿಕಲಾಗೆ ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಐಸಿಯು ವಾರ್ಡ್ಗೆ ಶಿಫ್ಟ್ ಮಾಡಿ, ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ವಿಶೇಷ ಕೊರೊನಾ ನಿಗಾ ಕೇಂದ್ರಕ್ಕೆ ವರ್ಗಾಯಿಸಲಾಗಿದೆ.
ಕೊರೊನಾ ಹಿನ್ನೆಲೆ, ಶಶಿಕಲಾಗೆ ಶ್ವಾಸಕೋಶದಲ್ಲಿ ಸೋಂಕು ಇರುವುದರಿಂದ ಕೆಲವು ದಿನಗಳ ಕಾಲ ಕ್ವಾರಂಟೈನ್ನಲ್ಲೇ ಇರಿಸಲಾಗುತ್ತದೆ. ಹೀಗಾಗಿ, ಇದೇ ತಿಂಗಳ 27ರಂದು ಶಶಿಕಲಾ ಬಿಡುಗಡೆಯಾಗುವ ಸಾಧ್ಯತೆ ಕಡಿಮೆಯಿದೆ.