ETV Bharat / city

ಫೆ. 21ರಂದು ಯಲಹಂಕದ ಅಂಬೇಡ್ಕರ್​​​ ಭವನದಲ್ಲಿ ಶಿವತಾಂಡವ ನೃತ್ಯ ಪ್ರದರ್ಶನ

author img

By

Published : Jan 31, 2020, 1:06 PM IST

Updated : Jan 31, 2020, 2:15 PM IST

ಶಿವರಾತ್ರಿ ಹಬ್ಬದ ಮೂಲವನ್ನು ತಿಳಿಸುವ ನಿಟ್ಟಿನಲ್ಲಿ ಫೆ. 21ರಂದು ಯಲಹಂಕದ ಅಂಬೇಡ್ಕರ್ ಭವನದಲ್ಲಿ ಅಹೋರಾತ್ರಿ ಜಾಗರಣೆ, ಶಿವತಾಂಡವ ನೃತ್ಯದ ಮೂಲಕ ಹಬ್ಬದ ನೈಜ ಪರಂಪರೆಯನ್ನು ಸಾರಲು ವಿವಿಧ ಸಂಘಟನೆಗಳಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ರಘುಮೂರ್ತಿ ತಿಳಿಸಿದರು.

Shiva tandava dance
ಯಲಹಂಕದ ಮಿನಿ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ

ಬೆಂಗಳೂರು: ಶಿವರಾತ್ರಿ ಹಬ್ಬದ ಮೂಲವನ್ನು ತಿಳಿಸುವ ನಿಟ್ಟಿನಲ್ಲಿ ಫೆ. 21ರಂದು ಯಲಹಂಕದ ಅಂಬೇಡ್ಕರ್ ಭವನದಲ್ಲಿ ಅಹೋರಾತ್ರಿ ಜಾಗರಣೆ, ಶಿವತಾಂಡವ ನೃತ್ಯದ ಮೂಲಕ ಹಬ್ಬದ ನೈಜ ಪರಂಪರೆಯನ್ನು ಸಾರಲು ವಿವಿಧ ಸಂಘಟನೆಗಳಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ರಘುಮೂರ್ತಿ ತಿಳಿಸಿದರು.

ಯಲಹಂಕದ ಮಿನಿ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ರಘುಮೂರ್ತಿ

ಯಲಹಂಕದ ಮಿನಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಹಶೀಲ್ದಾರ್ ರಘುಮೂರ್ತಿ, ಹಬ್ಬಗಳ ನೈಜ ವೈಶಿಷ್ಟ್ಯ ತಿಳಿಸುವ ನಿಟ್ಟಿನಲ್ಲಿ ಯಲಹಂಕ ತಾಲೂಕು ಆಡಳಿತ, ಬಿಬಿಎಂಪಿ, ಯಲಹಂಕ ಕ್ಷೇತ್ರ ಕಸಾಪ, ಜಲಸಿರಿ ಪ್ರತಿಷ್ಠಾನದ ಸಂಯುಕ್ತಾಶ್ರಯಲ್ಲಿ ಫೆ. 21ರಂದು ಶಿವನಾಮ ಸ್ಮರಣೆ ಮೂಲಕ ಶಿವರಾತ್ರಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಅಂದು ಸಂಜೆ 7 ಗಂಟೆಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಂತರ ಅಹೋರಾತ್ರಿ ಜಾಗರಣೆ ಕಾರ್ಯಕ್ರಮದಲ್ಲಿ ಅಂತರ್​ ಕಾಲೇಜು ನೃತ್ಯ ಶಾಲೆಗಳ ವಿದ್ಯಾರ್ಥಿಗಳು ಶಿವತಾಂಡವ ನೃತ್ಯ ಪ್ರಸ್ತುತಪಡಿಸಲಿದ್ದಾರೆ. ಇಡೀ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಮಾಹಿತಿ ನೀಡಿದರು.

ಯಲಹಂಕ ವ್ಯಾಪ್ತಿಯ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಶಿವತಾಂಡವ ನೃತ್ಯದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಆಸಕ್ತರು ಜ. 15ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂಖ್ಯೆ: 9986435832ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

Last Updated : Jan 31, 2020, 2:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.