ETV Bharat / city

ಮುಖ್ಯಮಂತ್ರಿಗಳಿಂದ ನಾಳೆ 'ಶಿವಕುಮಾರ ಸ್ವಾಮೀಜಿ ಸ್ಪರ್ಧಾತ್ಮಕ ಪರೀಕ್ಷೆಯ ಅಧ್ಯಯನ ಕೇಂದ್ರ' ಉದ್ಘಾಟನೆ

ಬಿಬಿಎಂಪಿ ಮತ್ತು ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಶಿವಕುಮಾರ ಸ್ವಾಮೀಜಿ ಸ್ಪರ್ಧಾತ್ಮಕ ಪರೀಕ್ಷೆಯ ಅಧ್ಯಯನ ಕೇಂದ್ರವನ್ನು ನಿರ್ಮಿಸಲಾಗಿದೆ. ಈ ಯೋಜನೆಯ ಒಟ್ಟು ಅಂದಾಜು ವೆಚ್ಚ 15 ಕೋಟಿ ರೂ. ಆಗಿದ್ದು, ಕಟ್ಟಡದ ಒಟ್ಟು ವಿಸ್ತೀರ್ಣ 5023.84 ಚದರ ಮೀಟರ್ ಇದೆ. ಮೂಡಲಪಾಳ್ಯ ವಾರ್ಡ್ ಸಂಖ್ಯೆ-127 ಮತ್ತು ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಉಪಯೋಗಕ್ಕೆ ಈ ಕೇಂದ್ರವನ್ನು ಮೀಸಲಿಡಲಾಗಿದೆ.

Shivakumar Swamiji Competitive Examination Center inaugurated CM
ಮುಖ್ಯಮಂತ್ರಿಗಳಿಂದ ನಾಳೆ 'ಶಿವಕುಮಾರ ಸ್ವಾಮೀಜಿ ಸ್ಪರ್ಧಾತ್ಮಕ ಪರೀಕ್ಷೆಯ ಅಧ್ಯಯನ ಕೇಂದ್ರ' ಉದ್ಘಾಟನೆ
author img

By

Published : Sep 6, 2020, 3:13 PM IST

ಬೆಂಗಳೂರು: ಗೋವಿಂದರಾಜ ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ, ಮೂಡಲಪಾಳ್ಯ ವಾರ್ಡ್ ಸಂಖ್ಯೆ-127ರ ಕಲ್ಯಾಣನಗರದಲ್ಲಿ ನೂತನವಾಗಿ ಸ್ಥಾಪಿಸಿರುವ ಶಿವಕುಮಾರ ಸ್ವಾಮೀಜಿ ಸ್ಪರ್ಧಾತ್ಮಕ ಪರೀಕ್ಷೆಯ ಅಧ್ಯಯನ ಕೇಂದ್ರವನ್ನು ನಾಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಉದ್ಘಾಟಿಸಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳಿಂದ ನಾಳೆ 'ಶಿವಕುಮಾರ ಸ್ವಾಮೀಜಿ ಸ್ಪರ್ಧಾತ್ಮಕ ಪರೀಕ್ಷೆಯ ಅಧ್ಯಯನ ಕೇಂದ್ರ' ಉದ್ಘಾಟನೆ

ಜ್ಞಾನಸೌಧದಲ್ಲಿರುವ ಸೌಲಭ್ಯಗಳ ವೀಕ್ಷಣೆ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಐತಿಹಾಸಿಕ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಶ್ರೀ ಗಳಾದ ಸಿದ್ದಲಿಂಗ ಸ್ವಾಮೀಜಿಗಳು, ಆದಿಚುಂಚನಗಿರಿ ಶ್ರೀಗಳಾದ ನಿರ್ಮಲಾನಂದ ಸ್ವಾಮೀಜಿಗಳು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸಂಸದರಾದ ತೇಜಸ್ವಿ ಸೂರ್ಯ, ರಾಜ್ಯದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಬಿಎಂಪಿ ಸದಸ್ಯರು ಉಪಸ್ಥಿತರಿಲಿದ್ದಾರೆ ಎಂದರು.

ಬಿಬಿಎಂಪಿ ಮತ್ತು ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಶಿವಕುಮಾರ ಸ್ವಾಮೀಜಿ ಸ್ಪರ್ಧಾತ್ಮಕ ಪರೀಕ್ಷೆಯ ಅಧ್ಯಯನ ಕೇಂದ್ರವನ್ನು ನಿರ್ಮಿಸಲಾಗಿದೆ. ಈ ಯೋಜನೆಯ ಒಟ್ಟು ಅಂದಾಜು ವೆಚ್ಚ 15 ಕೋಟಿ ರೂ. ಆಗಿದ್ದು, ಕಟ್ಟಡದ ಒಟ್ಟು ವಿಸ್ತೀರ್ಣ 5023.84 ಚದರ ಮೀಟರ್ ಇದೆ. ಮೂಡಲಪಾಳ್ಯ ವಾರ್ಡ್ ಸಂಖ್ಯೆ-127 ಮತ್ತು ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಉಪಯೋಗಕ್ಕೆ ಈ ಕೇಂದ್ರವನ್ನು ಮೀಸಲಿಡಲಾಗಿದೆ. ಕಟ್ಟಡದ ಆವರಣದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ಉದ್ಯಾನವನ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ ಮಕ್ಕಳ ಆಟದ ಮೈದಾನ ಹಾಗೂ ವಯಸ್ಕರಿಗೆ ಜಿಮ್ ಉಪಕರಣಗಳ ಅಳವಡಿಕೆ ಮಾಡಲಾಗಿದೆ ಎಂದು ವಿವರಿಸಿದರು.

ಇನ್ನು ತಳಮಹಡಿಯ ಒಟ್ಟು ವಿಸ್ತೀರ್ಣ 1255.81 ಚದರ ಮೀಟರ್ ಇದ್ದು, ವಾಹನ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ. ಆರ್​ಡ್ಲ್ಯುಬಿಎ ಮತ್ತು ಎನ್‍ಜಿಓ ಉದ್ದೇಶಗಳಿಗಾಗಿ ಕೊಠಡಿಗಳ ಸ್ಥಾಪನೆ ಮಾಡಲಾಗಿದೆ. ಅಲ್ಲದೆ ಸ್ಥಳೀಯ ಪಾಲಿಕೆ ಸದ ಸ್ಯರ ಕಚೇರಿ. ಪ್ರತ್ಯೇಕವಾಗಿ ಮಹಿಳೆಯರ ಮತ್ತು ಪುರುಷರ ವ್ಯಾಯಾಮ ಶಾಲೆ ಸ್ಥಾಪನೆ. ಹಿರಿಯ ನಾಗರಿಕರಿಗೆ ಮತ್ತು ಇತರರಿಗೆ ಯೋಗ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಮೊದಲನೇ ಮಹಡಿಯಲ್ಲಿ ಇ-ಗ್ರಂಥಾಲಯ ಸ್ಥಾಪನೆ ಮಾಡಲಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಸೌಲಭ್ಯ ಹಾಗೂ 200 ಆಸನಗಳಿರುವ ಸುಸರ್ಜಿತ ಸಭಾಂಗಣ ಸ್ಥಾಪನೆ ನಿರ್ಮಿಸಲಾಗಿದೆ. ಎರಡನೇ ಮಹಡಿಯಲ್ಲಿ ಬ್ಯಾಡ್ಮಿಂಟನ್ ಕೋರ್ಟ್ ಇದೆ ಎಂದು ಮಾಹಿತಿ ನೀಡಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.