ಬೆಂಗಳೂರು: ಸದಾಶಿವನಗರದಲ್ಲಿರುವ ನಟ ಪುನೀತ್ ರಾಜ್ಕುಮಾರ್ ಅವರ ನಿವಾಸಕ್ಕೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ ಭೇಟಿ ನೀಡಿದ್ದರು. ಪುನೀತ್ ಅವರ ಪತ್ನಿ ಅಶ್ವಿನಿ ಅವರಿಗೆ ಶ್ರೀಗಳು ಸಾಂತ್ವನ ಹೇಳಿದ್ದಾರೆ.
ಬಳಿಕ ಮಾತನಾಡಿದ ಶ್ರೀಗಳು, ರಾಜ್‌ಕುಮಾರ್ ಅವರ ಕುಟಂಬದ ಕುಡಿ ಪುನೀತ್ ರಾಜ್‌ಕುಮಾರ್ ತಂದೆಯಂತೆ ಶ್ರೇಷ್ಠ ಕಲಾವಿದ. ಅವರ ನಿಧನದಿಂದ ನಮಗೆಲ್ಲಾ ದೊಡ್ಡ ನಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಅವರ ಪಾರ್ಥಿವ ಶರೀರ ದರ್ಶನ ಮಾಡಿ ಪುನೀತರಾಗಿದ್ದಾರೆ. ನಾವು ಮುಂದಿನ ಬಸವ ಜಯಂತಿ ದಿನದಂದು ಪುನೀತ್ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡುತ್ತೇವೆ ಎಂದು ಹೇಳಿದರು.
ಪುನೀತ್ ರಾಜ್ಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಅವರ ಕುಟುಂಬವನ್ನು ಬಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವುದಾಗಿ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ ಇದೇ ವೇಳೆ ಮಾಹಿತಿ ನೀಡಿದರು.