ETV Bharat / city

ಕನ್ನಡಿಗರಿಂದ ಕನ್ನಡಿಗರಿಗಾಗಿ ಸಿದ್ದವಾಗಿರೋ ಟಾಕೀಸ್​ಗೆ ಸಿಕ್ತು ಕರುನಾಡ ಚಕ್ರವರ್ತಿಯ ಅಭಯಹಸ್ತ! - ಕನ್ನಡ ಓಟಿಟಿ ಪ್ಲಾಟ್ ಫಾರಂ

ಲಾಕ್​ಡೌನ್ ಸಮಯದಲ್ಲಿ ಸಾಕಷ್ಟು ವೆಬ್ ಸಿರೀಸ್ ನೋಡಿದ್ದೀನಿ. ನನ್ನ ಮಗಳು ನಿರ್ಮಿಸಿರುವ ವೆಬ್ ಸಿರೀಸ್ ಸಹ ಸದ್ಯದಲ್ಲೇ ಇದೇ ಟಾಕೀಸ್​ನಲ್ಲಿ ಬರಲಿದೆ. ಮುಂದೆ ನಾನು ಕೂಡ ಒಂದು ವೆಬ್ ಸಿರೀಸ್ ನಿರ್ಮಿಸಿ, ನಟಿಸಲಿದ್ದೇನೆ. ಟಾಕೀಸ್ ತಂಡಕ್ಕೆ ಒಳ್ಳೆಯದಾಗಲಿ ಎಂದು ಶಿವರಾಜಕುಮಾರ್ ಹಾರೈಸಿದರು..

Shivarajkumar innaugerated talkies OTt platforum
ಟಾಕೀಸ್​ ಒಟಿಟಿ ಫ್ಲಾಟ್​ಫಾರಂ ಗೆ ಶಿವರಾಜ್​ಕುಮಾರ್​ ಚಾಲನೆ ನೀಡಿದರು.
author img

By

Published : May 2, 2022, 11:39 AM IST

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಓಟಿಟಿ ಪ್ಲಾಟ್ ಫಾರಂಗಳು ಬಂದು ಮನರಂಜನೆ ನೀಡುತ್ತಿವೆ. ಕಲಾಸಕ್ತರು ತಮ್ಮ ಪ್ರತಿಭೆ ಪ್ರದರ್ಶಿಸಲು ಸಾಕಷ್ಟು ವೇದಿಕೆಗಳಿವೆ. ಅಂತಹ ಪ್ರತಿಭಾ ಪ್ರದರ್ಶನಕ್ಕೆ ಮತ್ತೊಂದು ಉತ್ತಮ ವೇದಿಕೆ ಆಗುತ್ತಿದೆ‌. ಟಾಕೀಸ್ ಎಂಬ ಆ್ಯಪ್ ಕನ್ನಡಿಗರಿಂದ ಕನ್ನಡಿಗರಿಗಾಗಿ ಸಿದ್ಧಗೊಂಡಿರುವ ಈ ಟಾಕೀಸ್ ಆ್ಯಪ್​ನ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಉದ್ಘಾಟನೆ ಮಾಡಿದರು.

ಬಳಿಕ ಮಾತನಾಡಿದ ಸೆಂಚುರಿ ಸ್ಟಾರ್, ಈ ಸಂಸ್ಥೆಯ ಬೆಳವಣಿಗೆ ಕಂಡು ಖುಷಿಯಾಗುತ್ತಿದೆ. ಕೆಲಸ ಕೊಟ್ಟವರು ಅನ್ನದಾತರು ಎಂದು ಅಪ್ಪಾಜಿ ಹೇಳುತ್ತಿದ್ದರು. ರತ್ನಾಕರ್ ಅವರನ್ನು ನೋಡಿದರೆ ಹಾಗೆ ಅನಿಸುತ್ತಿದೆ. ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಇನ್ನೂ ಟಾಕೀಸ್ ಬಗ್ಗೆ ಹೇಳಬೇಕಾದರೆ, ಟೆಕ್ನಾಲಜಿ ಬದಲಾದ ಹಾಗೆ ನಾವು ಬದಲಾಗಬೇಕು. ನಾನು ಈ ಹೊಸ ತಂತ್ರಜ್ಞಾನಕ್ಕೆ ಒಗ್ಗಿಕೊಂಡಿದ್ದೇನೆ.

Shivaraj Kumar was felicitated at the event.
ಕಾರ್ಯಕ್ರಮದಲ್ಲಿ ಶಿವರಾಜ್​ಕುಮಾರ್​ ಅವರನ್ನು ಸನ್ಮಾನಿಸಲಾಯಿತು..

ಲಾಕ್​ಡೌನ್ ಸಮಯದಲ್ಲಿ ಸಾಕಷ್ಟು ವೆಬ್ ಸಿರೀಸ್ ನೋಡಿದ್ದೀನಿ. ನನ್ನ ಮಗಳು ನಿರ್ಮಿಸಿರುವ ವೆಬ್ ಸಿರೀಸ್ ಸಹ ಸದ್ಯದಲ್ಲೇ ಇದೇ ಟಾಕೀಸ್​ನಲ್ಲಿ ಬರಲಿದೆ. ಮುಂದೆ ನಾನು ಕೂಡ ಒಂದು ವೆಬ್ ಸಿರೀಸ್ ನಿರ್ಮಿಸಿ, ನಟಿಸಲಿದ್ದೇನೆ. ಟಾಕೀಸ್ ತಂಡಕ್ಕೆ ಒಳ್ಳೆಯದಾಗಲಿ ಎಂದು ಶಿವರಾಜಕುಮಾರ್ ಹಾರೈಸಿದರು.

ಕಟ್ಟಡ ನಿರ್ಮಾಣದಿಂದ ಹಿಡಿದು, ಸಿನಿಮಾ ನಿರ್ಮಾಣದ ತನಕ ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸ್ವಯಂಪ್ರಭ ಸಂಸ್ಥೆ ಈ ಉಪಯುಕ್ತ "ಟಾಕೀಸ್" ಆ್ಯಪ್ ಬಿಡುಗಡೆ ಮಾಡಿದೆ. ಕನ್ನಡಿಗರಿಂದ ಕನ್ನಡಿಗರಿಗಾಗಿ ಎಂಬ ವಾಕ್ಯದ ಮೂಲಕ ಈ ಆ್ಯಪ್ ಕಾರ್ಯ ನಿರ್ವಹಿಸಲಿದೆ. ಮೂಲತಃ ಉದ್ಯಮಿಯಾಗಿರುವ ರತ್ನಾಕರ್ ಕಾಮತ್ ಈ ಸಂಸ್ಥೆಯ ಮುಖ್ಯಸ್ಥರು. ಈ ಹಿಂದೆ ವಿಜಯ ರಾಘವೇಂದ್ರ ಅಭಿನಯದ "ಮಾಲ್ಗುಡಿ ಡೇಸ್" ಚಿತ್ರವನ್ನು ನಿರ್ಮಾಣ ಮಾಡಿದ್ದರು.

ಸುಮಾರು 200 ಜನರ ಪರಿಶ್ರಮ, 700ಕ್ಕೂ ಅಧಿಕ ತಂತ್ರಜ್ಞರು ಹಾಗೂ 1200ಕ್ಕೂ ಮೀರಿದ ಕಲಾವಿದರು ಈ "ಟಾಕೀಸ್"ನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ವೆಬ್ ಸಿರೀಸ್, ಧಾರಾವಾಹಿ, ಕಿರುಚಿತ್ರ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಚಲನಚಿತ್ರಗಳನ್ನು "ಟಾಕೀಸ್" ಮೂಲಕ ತಾವು ವೀಕ್ಷಿಸಬಹುದು.

ಇದಕ್ಕೆ ತಗಲುವ ವೆಚ್ಚ ಒಂದು ವರ್ಷಕ್ಕೆ ಕೇವಲ 365 ರೂಪಾಯಿ ಮಾತ್ರ. ದಿನಕ್ಕೆ ಒಂದು ರೂಪಾಯಿಯ ಹಾಗೆ. ಬೇರೆ ಯಾವುದೇ ವೆಚ್ಚ ಇದಕ್ಕೆ ಇರುವುದಿಲ್ಲ. ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಮನೋರಂಜನೆ ನೀಡುವ ಯೋಜನೆ "ಟಾಕೀಸ್" ತಂಡದ್ದು. ಟಾಕೀಸ್" ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪ್ರೋಗ್ರಾಮಿಂಗ್ ಹೆಡ್ ಸೂರಜ್ ಬೋಳಾರ್ ನೀಡಿದರು.

ಹೇಗೆ ಬಳಸಬೇಕೆಂಬ ವಿವರಣೆಯನ್ನು ನಟಿ ರಂಜನಿ ರಾಘವನ್ ವಿಡಿಯೋ ಮೂಲಕ ವಿವರಿಸಿದರು. ಸ್ವಯಂಪ್ರಭ ಸಂಸ್ಥೆಯ ರುವಾರಿಗಳು ಹಾಗೂ ಈ ಆ್ಯಪ್​ನ ಸ್ಥಾಪಕರೂ ಆದ ರತ್ನಾಕರ್ ಕಾಮತ್, ಲಕ್ಷ್ಮಿ ರತ್ನಾಕರ್ ಕಾಮತ್ ಹಾಗೂ ಗಣೇಶ್ ರತ್ನಾಕರ್ ಕಾಮತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಟ ಹರೀಶ್ ರಾಜ್ ಸಹ ಟಾಕೀಸ್ ತಂಡವನ್ನು ಶ್ಲಾಘಿಸಿದರು.

ಇದನ್ನೂ ಓದಿ: ಸಾವಿರ ಕೋಟಿ ಕ್ಲಬ್​​ ಸೇರಿದ ಕೆಜಿಎಫ್​​ 2: ಹಿಂದಿ ಅವತರಣಿಕೆಯಲ್ಲೇ ₹416 ಕೋಟಿ ಗಳಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.