ETV Bharat / city

ಬಾಲಿವುಡ್ ನಟ ಅಜಯ್ ದೇವಗನ್ ಅಧಿಕ ಪ್ರಸಂಗತನ ಮೆರೆದಿದ್ದಾರೆ : ಹೆಚ್​ಡಿಕೆ, ಸಿದ್ದು ಕಿಡಿ - Kiccha Sudeep hindi language statement

ಚಿತ್ರನಟ ಕಿಚ್ಚ ಸುದೀಪ್ ಅವರ ಹಿಂದಿ ರಾಷ್ಟ್ರಭಾಷೆಯಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಾಲಿವುಡ್ ನಟ ಅಜಯ್ ದೇವಗನ್ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

siddaramaiah-and-hd-kumarswami-tweet-against-ajay-devgan
ಬಾಲಿವುಡ್ ನಟ ಅಜಯ್ ದೇವಗನ್ ಅಧಿಕ ಪ್ರಸಂಗತನ ಮೆರೆದಿದ್ದಾರೆ : ಹೆಚ್ ಡಿಕೆ, ಸಿದ್ದು ಕಿಡಿ
author img

By

Published : Apr 28, 2022, 7:01 AM IST

Updated : Apr 28, 2022, 2:27 PM IST

ಬೆಂಗಳೂರು: ಚಿತ್ರನಟ ಕಿಚ್ಚ ಸುದೀಪ್ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ ಎಂದು ಹೇಳಿದ್ದಾರೆ.

  • ಚಿತ್ರನಟ @KicchaSudeep ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ @ajaydevgn ಅಜಯ್ ದೇವಗನ್ ಅತಿರೇಖದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ.1/7

    — H D Kumaraswamy (@hd_kumaraswamy) April 27, 2022 " class="align-text-top noRightClick twitterSection" data=" ">

ಹೆಚ್ಚು ಜನ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಹಿಂದಿ ಎಲ್ಲರ ಭಾಷೆಯಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕೇವಲ 9ಕ್ಕಿಂತ ಕಡಿಮೆ ರಾಜ್ಯಗಳಲ್ಲಿ ಹಿಂದಿ 2ನೇ ಭಾಷೆ, ಇಲ್ಲವೇ 3ನೇ ಭಾಷೆ ಅಥವಾ ಅದೂ ಆಗಿಲ್ಲ. ಹೀಗಿದ್ದ ಮೇಲೆ ಅಜಯ್ ದೇವಗನ್ ಮಾತುಗಳು ಎಷ್ಟು ಸರಿ. ಡಬ್ ಮಾಡಬೇಡಿ ಎಂದರೆ ಏನರ್ಥ? ಎಂದು ಪ್ರಶ್ನಿಸಿದ್ದಾರೆ.

ಮೊದಲಿನಿಂದಲೂ ಕೇಂದ್ರದಲ್ಲಿ ಆಡಳಿತ ನಡೆಸಿದ ' ಹಿಂದಿ ರಾಜಕೀಯ ಪಕ್ಷಗಳು ' ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕುವ ದುಷ್ಟ ಪ್ರಯತ್ನ ಮಾಡುತ್ತಿವೆ. ಕಾಂಗ್ರೆಸ್ ಆರಂಭ ಮಾಡಿದ ಅನ್ಯಭಾಷೆಗಳ ಹತ್ತಿಕ್ಕುವ ಕೃತ್ಯಗಳನ್ನು ಈಗ ಬಿಜೆಪಿ ಅತಿಯಾಗಿ ಮುಂದುವರಿಸುತ್ತಿದೆ. ಒಂದೇ ಪಕ್ಷ, ಒಂದೇ ತೆರಿಗೆ, ಒಂದೇ ಭಾಷೆ, ಒಂದೇ ಸರಕಾರ ಎನ್ನುವ ಸರ್ವಾಧಿಕಾರಿ ಮನಃಸ್ಥಿತಿಯ ಬಿಜೆಪಿ ಮತ್ತು ಅದರ ಹಿಂದಿ ರಾಷ್ಟ್ರೀಯವಾದದ ಮುಖವಾಣಿ ರೀತಿಯಲ್ಲಿ ದೇವಗನ್ ಬಡಬಡಿಸಿದ್ದಾರೆ ಎಂದು ಟೀಕಿಸಿದ್ದಾರೆ.

  • Hindi was never & will never be our National Language.

    It is the duty of every Indian to respect linguistic diversity of our Country.

    Each language has its own rich history for its people to be proud of.

    I am proud to be a Kannadiga!! https://t.co/SmT2gsfkgO

    — Siddaramaiah (@siddaramaiah) April 27, 2022 " class="align-text-top noRightClick twitterSection" data=" ">

ದೇವಗನ್ ಅರ್ಥ ಮಾಡಿಕೊಳ್ಳಬೇಕು. ಕನ್ನಡ ಚಿತ್ರರಂಗ ಇವತ್ತು ಹಿಂದಿ ಚಿತ್ರರಂಗವನ್ನು ಮೀರಿ ಬೆಳೆಯುತ್ತಿದೆ. ಕನ್ನಡಿಗರು ಕೂಡ ಪ್ರೋತ್ಸಾಹಿಸಿದ ಪರಿಣಾಮ ಹಿಂದಿ ಚಿತ್ರರಂಗ ಬೆಳೆದಿದೆ. ಅವರ 'ಫೂಲ್ ಔರ್ ಕಾಂಟೆ' ಸಿನಿಮಾ ಬೆಂಗಳೂರಿನಲ್ಲಿ ಒಂದು ವರ್ಷ ಪ್ರದರ್ಶನ ಆಗಿದ್ದನ್ನು ದೇವಗನ್ ಮರೆಯಬಾರದು ಎಂದು ಹೇಳಿದ್ದಾರೆ. ಶ್ರೇಷ್ಠತೆಯ ವ್ಯಸನ ಭಾರತವನ್ನು ಒಡೆಯುತ್ತಿದೆ. ಬಿಜೆಪಿ ಭಿತ್ತಿದ ಈ ರೋಗ, ಅಂಟು ಜಾಡ್ಯದಂತೆ ಹರಡುತ್ತಾ ದೇಶವನ್ನು ಛಿದ್ರಗೊಳಿಸುವಂತಿದೆ. ಭಾರತದ ಏಕತೆಗೆ ಇದು ಅಪಾಯಕಾರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ವಿಪಕ್ಷನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ, ಮುಂದೆ ಆಗುವುದೂ ಇಲ್ಲ. ನಮ್ಮ ದೇಶದ ಭಾಷಾ ವೈವಿಧ್ಯತೆ ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಪ್ರತಿಯೊಂದು ಭಾಷೆಯು ತನ್ನದೇ ಆದ ಶ್ರೀಮಂತ ಇತಿಹಾಸ ಹೊಂದಿದೆ, ಅದರ ಬಗ್ಗೆ ಜನರು ಹೆಮ್ಮೆಪಡುತ್ತಾರೆ. ನಾನು ಹೆಮ್ಮೆಯ ಕನ್ನಡಿಗ ಎಂದು ಅಜಯ್ ದೇವಗನ್​​​​ಗೆ ತಿರುಗೇಟು ನೀಡಿದ್ದಾರೆ.

ಓದಿ : 'ಹಿಂದಿ ರಾಷ್ಟ್ರೀಯ ಭಾಷೆಯಲ್ಲ' ಎಂದ ಸುದೀಪ್‌ಗೆ ಅಜಯ್‌ ದೇವಗನ್ ಖಾರ ಪ್ರತಿಕ್ರಿಯೆ; ನೆಟ್ಟಿಗರಿಂದ ತರಾಟೆ

Last Updated : Apr 28, 2022, 2:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.