ETV Bharat / city

ವಿಧಾನಸಭೆ ಅಧಿವೇಶನಕ್ಕೆ ಮುನ್ನ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ - ಶಾಸಕಾಂಗ ಪಕ್ಷದ ಸಭೆ

ವಿಧಾನಮಂಡಲ ಉಭಯ ಸದನಗಳ ಅಧಿವೇಶನದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ
author img

By

Published : Oct 3, 2019, 5:00 PM IST

ಬೆಂಗಳೂರು: ವಿಧಾನಮಂಡಲ ಉಭಯ ಸದನಗಳ ಅಧಿವೇಶನದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

Siddaramaiah
ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ

ಅಕ್ಬೋಬರ್ 9ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್​ನಲ್ಲಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ಶಾಸಕರು ಉಪಸ್ಥಿತರಿರುವಂತೆ ಸೂಚಿಸಲಾಗಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಉಪಸ್ಥಿತರಿರುತ್ತಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ಟೋಬರ್ 10 ರಿಂದ 12 ರವರೆಗೆ ನಡೆಯುವ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕರು ಅನುಸರಿಸುವ ಕ್ರಮಗಳು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಗಿರುವ ಹಾನಿ ಹಾಗೂ ಸರ್ಕಾರ ಕೈಗೊಂಡಿರುವ ಕ್ರಮಗಳು ಮತ್ತು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತಗೊಂಡಿರುವ ಕುರಿತು ಸದನದಲ್ಲಿ ಗಮನಸೆಳೆಯುವ ಸಂಬಂಧ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಲು ತೀರ್ಮಾನಿಸಲಾಗಿದೆ. ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಹಾನಿಯ ಕುರಿತು ಚರ್ಚಿಸುವ ನಿರ್ಧಾರ ಕೈಗೊಳ್ಳುವ ಜತೆಗೆ ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಇತರೆ ವಿಚಾರಗಳ ಕುರಿತು ಚರ್ಚೆ ಮಾಡಲು ನಿರ್ಧರಿಸಲಾಗಿದೆ.

ವಿಧಾನಮಂಡಲ ಅಧಿವೇಶನವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಮಹತ್ವದ ಚರ್ಚೆಗೆ ಶಾಸಕರು ಮುಂದಾಗಬೇಕು. ಇದೇ ವಿಚಾರವನ್ನು ಸುದೀರ್ಘವಾಗಿ ಚರ್ಚಿಸಲು ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಿಯೊಬ್ಬ ಶಾಸಕರು ಹಾಜರಿದ್ದು, ಸಲಹೆ ಸೂಚನೆಗಳನ್ನು ನೀಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Intro:newsBody:ವಿಧಾನಸಭೆ ಅಧಿವೇಶನಕ್ಕೆ ಮುನ್ನ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ

ಬೆಂಗಳೂರು: ವಿಧಾನಮಂಡಲ ಉಭಯ ಸದನಗಳ ಅಧಿವೇಶನ ಹಿನ್ನೆಲೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಿಎಲ್ಪಿ ಸಭೆ ಕರೆದಿದ್ದಾರೆ.
ಅ.9 ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು ಶಾಸಕರು ಉಪಸ್ಥಿತರಿರುವ ಸೂಚಿಸಲಾಗಿದೆ. ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಉಪಸ್ಥಿತರಿರುತ್ತಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಅಕ್ಟೋಬರ್ 10 ರಿಂದ 12 ರವರೆಗೆ ನಡೆಯುವ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕರು ಅನುಸರಿಸುವ ಕ್ರಮಗಳು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಗಿರುವ ಹಾನಿ ಹಾಗೂ ಸರ್ಕಾರ ಕೈಗೊಂಡಿರುವ ಕ್ರಮಗಳು ಮತ್ತು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತಗೊಂಡಿರುವ ಕುರಿತು ಸದನದಲ್ಲಿ ಗಮನಸೆಳೆಯುವ ಸಂಬಂಧ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಲು ತೀರ್ಮಾನಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಹಾನಿಯ ಕುರಿತು ಚರ್ಚಿಸುವ ನಿರ್ಧಾರ ಕೈಗೊಳ್ಳುವ ಜತೆಗೆ ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಇತರೆ ವಿಚಾರಗಳ ಕುರಿತು ಚರ್ಚೆಗೆ ಕೈಗೆತ್ತಿಕೊಳ್ಳುವ ನಿರ್ಧಾರ ಈ ಸಭೆಯಲ್ಲಿ ಆಗಲಿದೆ.
ವಿಧಾನಮಂಡಲ ಅಧಿವೇಶನವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಮಹತ್ವದ ಚರ್ಚೆಗೆ ಶಾಸಕರು ಮುಂದಾಗಬೇಕು. ಇದೇ ವಿಚಾರವನ್ನು ಸುದೀರ್ಘವಾಗಿ ಚರ್ಚಿಸಲು ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಿಯೊಬ್ಬ ಶಾಸಕರು ಹಾಜರಿದ್ದು ಸಲಹೆ ಸೂಚನೆಗಳನ್ನು ನೀಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.