ETV Bharat / city

ಶಾಲಾವರಣದಲ್ಲಿ ಶಸ್ತ್ರ ತರಬೇತಿ: ಭಜರಂಗದಳ ನಾಯಕರ ಬಂಧನಕ್ಕೆ ಸಿದ್ದರಾಮಯ್ಯ ಒತ್ತಾಯ

ಶಸ್ತ್ರಾಸ್ತ್ರ ತರಬೇತಿ‌‌ ಸಂಪೂರ್ಣವಾಗಿ ಕಾನೂನು ವಿರೋಧಿ ಚಟುವಟಿಕೆಯಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : May 17, 2022, 7:50 AM IST

ಬೆಂಗಳೂರು: ಮಡಿಕೇರಿಯ ಶಾಲಾ ಆವರಣದಲ್ಲಿ ಯುವ ಜನರಿಗೆ ಶಸ್ತ್ರ ತರಬೇತಿ ನೀಡಿದ ಭಜರಂಗದಳ ನಾಯಕರ ಬಂಧನಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿ, ಭಜರಂಗದಳ ನಾಯಕರ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಡಿಕೇರಿ ಶಾಲೆಯಲ್ಲಿ ಯುವಕರಿಗೆ ಭಜರಂಗದಳ ಶಸ್ತ್ರತರಬೇತಿ ನೀಡಿ ಕಾನೂನಿಗೆ ಬಹಿರಂಗ ಸವಾಲು ಹಾಕಿದೆ. ರಾಜ್ಯದಲ್ಲಿ ಗೃಹ ಮತ್ತು ಶಿಕ್ಷಣ ಖಾತೆಗೆ ಸಚಿವರಿದ್ದಾರೆಯೇ? ಸರ್ಕಾರ ಜೀವಂತವಾಗಿದೆಯೇ? ಭಜರಂಗ ದಳ ನಡೆಸಿದ ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಶಾಸಕರಾದ ಎಂ.ಎ.ಅಪ್ಪಚ್ಚು, ಕೆ.ಜಿ.ಬೋಪಯ್ಯ ಮತ್ತು ಸುಜ ಕುಶಾಲಪ್ಪ ಪಾಲ್ಗೊಂಡಿದ್ದಾರೆ. ಇವರ ಬದ್ಧತೆ ಸಂವಿಧಾನಕ್ಕೋ? ಭಜರಂಗ ದಳಕ್ಕೋ? ಶಸ್ತ್ರಾಸ್ತ್ರ ತರಬೇತಿ‌‌ ಸಂಪೂರ್ಣವಾಗಿ ಕಾನೂನು ವಿರೋಧಿ ಚಟುವಟಿಕೆಯಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಶಾಲೆಯ ಆವರಣದಲ್ಲಿ ಇಂತಹ ಕಾನೂನು ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡಿರುವ ಶಾಲೆಯ ಆಡಳಿತ ಮಂಡಳಿ ವಿರುದ್ಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕ್ರಮ‌ ಕೈಗೊಳ್ಳಬೇಕು. ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ಶ್ರೀರಾಮ ಸೇನೆ, ಭಜರಂಗ ದಳ, ಹಿಂದೂ ಜಾಗರಣ ವೇದಿಕೆ ಮೊದಲಾದ ಸಂಘಟನೆಗಳ‌ ಜೊತೆ ತನ್ನ ಸಂಬಂಧ ಏನು ಎಂಬುದನ್ನು ಬಿಜೆಪಿ‌ ಮೊದಲು ಸ್ಪಷ್ಟಪಡಿಸಬೇಕು. ರಾಜ್ಯದಲ್ಲಿ ಶಾಂತಿ ಕದಡಿಸಲು, ಭೀತಿ ಹುಟ್ಟಿಸಲು ಭಜರಂಗದಳ,‌ ಶ್ರೀರಾಮಸೇನೆಯಂತಹ ಕೋಮು‌ವಾದಿ ಸಂಘಟನೆಗಳಿಗೆ ರಾಜ್ಯ ಬಿಜೆಪಿ ಸರ್ಕಾರ ವಿಶೇಷ ಅನುಮತಿ ನೀಡಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಸ್ತ್ರಾಸ್ತ್ರ ತರಬೇತಿ ಪಡೆದ ಹಿಂದೂ ವಿದ್ಯಾರ್ಥಿಗಳು.. ಎಸ್​ಡಿಪಿಐ ಆಕ್ಷೇಪ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.