ETV Bharat / city

ಸಬ್ಸಿಡಿಗಳಿಗೆ ಕತ್ತರಿ, ಕಾರ್ಪೊರೇಟ್ ಬಂಡವಾಳಶಾಹಿ ದೋಸ್ತಿ: ಇದೇ ಮೋದಿ 8 ವರ್ಷದ ಸಾಧನೆ: ಸಿದ್ದರಾಮಯ್ಯ ಕಿಡಿ ಕಿಡಿ

ಮೋದಿ ಸರ್ಕಾರ ಜನ ಸಾಮಾನ್ಯರನ್ನು ಶತ್ರುಗಳ ರೀತಿ ಭಾವಿಸುತ್ತಿದೆ. ಉದ್ದೇಶ ಪೂರ್ವಕವಾಗಿ ಜನರ ಕೈಯಲ್ಲಿ ಹಣ ಇರಬಾರದು ಎಂದು ತೀರ್ಮಾನಿಸಿಯೆ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಸಿದ್ದರಾಮಯ್ಯ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

Opposition leader Siddaramayya
ವಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Jun 11, 2022, 1:00 PM IST

ಬೆಂಗಳೂರು : ಸಬ್ಸಿಡಿಗಳಿಗೆ ಕತ್ತರಿ ಕಾರ್ಪೊರೇಟ್ ಬಂಡವಾಳಿಗರ ಜೊತೆ ದೋಸ್ತಿ ಪ್ರಧಾನಿ ನರೇಂದ್ರ ಮೋದಿ ಅವರ ಎಂಟು ವರ್ಷಗಳ ಸಾಧನೆ. ಸಬ್ಸಿಡಿಗಳನ್ನು ನೀಡುವುದರಿಂದ ಆರ್ಥಿಕತೆ ವೇಗ ಪಡೆಯುತ್ತದೆ ಎಂಬುದು ಅರ್ಥಶಾಸ್ತ್ರ ಗೊತ್ತಿರುವ ಪ್ರತಿಯೊಬ್ಬರಿಗೂ ಅರ್ಥವಾಗುತ್ತದೆ. ಆದರೆ ಮೋದಿ ಸರ್ಕಾರ ಮತ್ತು ಆ ಸರ್ಕಾರದ ಹಿಂದೆ ಇರುವ ಆರ್‌ಎಸ್‌ಎಸ್ ಪ್ರಣೀತ ಜನರಿಗೆ ಇದು ಅರ್ಥವಾಗುತ್ತಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಅವರು ಉದ್ದೇಶ ಪೂರ್ವಕವಾಗಿ ಜನರ ಕೈಯಲ್ಲಿ ಹಣ ಇರಬಾರದು ಎಂದು ತೀರ್ಮಾನಿಸಿಯೆ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ತಂದು ಕೃಷಿಯನ್ನೂ ಕೂಡ ಅದಾನಿ, ಅಂಬಾನಿ ಮುಂತಾದ ಬಂಡವಾಳಿಗರಿಗೆ ಕೊಟ್ಟು ರೈತರನ್ನು ಸರ್ವನಾಶ ಮಾಡಲು ಹೊರಟಿತ್ತು. ಆದರೆ, ರೈತರು ನಡೆಸಿದ ವೀರೋಚಿತ ಹೋರಾಟಗಳಿಂದ ಕಾಯ್ದೆಗಳನ್ನು ಕೈ ಬಿಡಬೇಕಾಯಿತು ಎಂದಿದ್ದಾರೆ.

ಕೊರೊನಾ ಅವಧಿ ಬಿಟ್ಟರೆ ಉಳಿದ ಅವಧಿಯಲ್ಲಿ ಬರೀ ಕತ್ತರಿ: ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೊರೋನಾ ಇದ್ದ ಎರಡು ವರ್ಷ ಬಿಟ್ಟರೆ ಉಳಿದಂತೆ ನಿರಂತರವಾಗಿ ಸಬ್ಸಿಡಿಗಳಿಗೆ ಕತ್ತರಿ ಹಾಕುತ್ತಿದ್ದಾರೆ. ಆರ್‌ಬಿಐನ ಮಾಹಿತಿಯಂತೆ 2012 ರಿಂದ 2013-14 ರವರೆಗೆ ಜಿಡಿಪಿಯ ಶೇ. 2.2ರಿಂದ 2.4 ರವರೆಗೆ ಸಬ್ಸಿಡಿ ನೀಡಲಾಗುತಿತ್ತು. ಈಗ ಅದರ ಪ್ರಮಾಣ ಶೇ.1 ಕ್ಕಿಂತ ಕೆಳಗೆ ಇಳಿದಿದೆ.

2012-13 ರಲ್ಲಿ ಕೇಂದ್ರದ ಬಜೆಟ್ ಗಾತ್ರ 14.91 ಲಕ್ಷ ಕೋಟಿ. ಆಗ ಆಹಾರ, ರಸಗೊಬ್ಬರ, ಪೆಟ್ರೋಲಿಯಂನ ಮೇಲೆ ನೀಡಿದ ಸಬ್ಸಿಡಿಯ ಪ್ರಮಾಣ 2.48 ಲಕ್ಷ ಕೋಟಿ. ಅಂದರೆ ಒಟ್ಟಾರೆ ಬಜೆಟ್​ನ ಶೇ. 16.61 ರಷ್ಟು ಸಂಪನ್ಮೂಲಗಳನ್ನು ಸಬ್ಸಿಡಿಗಾಗಿ ವಿಯೋಗಿಸಲಾಗಿತ್ತು. 2014ರಲ್ಲಿ ಅಧಿಕಾರಕ್ಕೆ ಬಂದ ಮೋದಿಯವರ ಸರ್ಕಾರ ನಿರಂತರವಾಗಿ ಜನಸಾಮಾನ್ಯರ ಬದುಕನ್ನು ಹಿಂಡುವ ಕೆಲಸ ಪ್ರಾರಂಭಿಸಿದೆ. ನಿರಂತರವಾಗಿ ಸಬ್ಸಿಡಿ ಕಡಿಮೆ ಮಾಡುತ್ತಾ ಬಂದಿದೆ ಎಂದು ಹೇಳಿದರು.

ಎಲ್ಲ ವಲಯದ ಸಬ್ಸಿಡಿ ಕಡಿತ: 2017-18 ರಲ್ಲಿ ಬಜೆಟ್ ಗಾತ್ರ 21.42 ಲಕ್ಷ ಕೋಟಿ ರೂಗಳಿದ್ದರೆ, ನೀಡಿದ ಸಬ್ಸಿಡಿ ಕೇವಲ 1.91 ಲಕ್ಷ ಕೋಟಿ (ಶೇ. 8.89), 2019-2020 ರಲ್ಲಿ 27.86 ಲಕ್ಷ ಕೋಟಿ ಬಜೆಟ್ ಗಾತ್ರವಾದರೆ, ಸಬ್ಸಿಡಿ ಪ್ರಮಾಣ 2.19 ಲಕ್ಷ ಕೋಟಿಯಾಯಿತು (ಶೇ.7.8). ಇದರ ನಂತರ ಕೊರೋನಾ ತೀವ್ರವಾಗಿ ಬಾಧಿಸಿ, ಆರ್ಥಿಕತೆ ಕುಸಿಯತೊಡಗಿತು. ಈ ಸಂದರ್ಭದಲ್ಲಿ ಆಹಾರ ಮುಂತಾದ ವಲಯಗಳ ಸಬ್ಸಿಡಿಯನ್ನು ತುಸು ಹೆಚ್ಚಿಸಿದರು. ಆದರೆ, 2022-23ರ ಬಜೆಟ್‌ನಲ್ಲಿ ಮತ್ತೆ ಕಡಿತ ಮಾಡಿದ್ದಾರೆ ಎಂದರು.

ಈ ವರ್ಷ ಕೇಂದ್ರದ ಬಜೆಟ್ ಗಾತ್ರ 39.44 ಲಕ್ಷ ಕೋಟಿಗಳಷ್ಟಿದೆ. ಆದರೆ ನೀಡುತ್ತಿರುವ ಸಬ್ಸಿಡಿ ಪ್ರಮಾಣ 3.05 ಲಕ್ಷ ಕೋಟಿಗಳಷ್ಟಿದೆ, ಅಂದರೆ ಶೇ.7.7 ಮಾತ್ರ. ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಮೇಲೆ ಮನ ಮೋಹನಸಿಂಗ್ ಅವರ ಸರ್ಕಾರ ವರ್ಷಕ್ಕೆ 97 ಸಾವಿರ ಕೋಟಿ ರೂಗಳವರೆಗೂ ಸಬ್ಸಿಡಿ ನೀಡುತ್ತಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 125 ಡಾಲರ್​ಗಳನ್ನು ಮೀರಿ ಬೆಳೆದಿದ್ದರೂ ಸಹ ದೇಶದಲ್ಲಿ ಡೀಸೆಲ್ ಬೆಲೆ 46 ರೂಪಾಯಿ ಮತ್ತು ಪೆಟ್ರೋಲ್ ಬೆಲೆ 76 ರೂಪಾಯಿ ಹಾಗೂ ಅಡುಗೆ ಅನಿಲದ ಬೆಲೆ 414 ರೂ ಒಳಗೆ ಇರುವಂತೆ ಮನಮೋಹನಸಿಂಗ್ ಅವರು ನೋಡಿಕೊಂಡಿದ್ದರು. ಇದರಿಂದ ಹಣದುಬ್ಬರವನ್ನು ನಿಯಂತ್ರಿಸಿ ಜನ ಸಾಮಾನ್ಯರ ಬದುಕಿನ ಮೇಲೆ ದುಷ್ಪರಿಣಾಮವಾಗದಂತೆ ನೋಡಿಕೊಂಡಿದ್ದರು ಎಂದು ಹೇಳಿದರು.

ಜನರನ್ನೇ ಶತ್ರುಗಳಂತೆ ನೋಡ್ತಿದೆ ಮೋದಿ ಸರ್ಕಾರ: ಆದರೆ ಮೋದಿ ಸರ್ಕಾರ ಜನ ಸಾಮಾನ್ಯರನ್ನು ಶತ್ರುಗಳ ರೀತಿ ಭಾವಿಸುತ್ತಿದೆ. ಪೆಟ್ರೋಲಿಯಂ ಬಾಬತ್ತಿಗೆ ನೀಡುತ್ತಿದ್ದ ಸಬ್ಸಿಡಿಯನ್ನು 2020- 21 ರಲ್ಲಿ ಕೇವಲ 6.5 ಸಾವಿರ ಕೋಟಿಗಳಿಗೆ ಇಳಿಸಿದರು. 2022- 23ರಲ್ಲಿ ಅದರ ಪ್ರಮಾಣ ಕೇವಲ 5.8 ಸಾವಿರ ಕೋಟಿಗಳಿಗೆ ಇಳಿದಿದೆ. ಇದರಿಂದಾಗಿಯೂ ಬೆಲೆಗಳು ತೀವ್ರವಾಗಿ ಏರಿಕೆಯಾಗಿವೆ. ಜನರು ಬದುಕು ಸಾಗಿಸುವುದೇ ದುಸ್ತರವಾಗಿದೆ ಎಂದಿದ್ದಾರೆ.

ರೈತರಿಗೆ ನೀಡುವ ಸಬ್ಸಿಡಿಯ ಮೊತ್ತ ಕೂಡ ದಿನೇ ದಿನೇ ಕಡಿಮೆಯಾಗುತ್ತಿದೆ. ಜನರಿಗೆ ಸಬ್ಸಿಡಿ ನೀಡಬಾರದು, ಜನರ ಕಡೆಯ ಹನಿ ರಕ್ತವೂ ಉಳಿಯದಂತೆ ಹೀರಿಕೊಳ್ಳಬೇಕೆಂದು ಹಠ ತೊಟ್ಟಂತೆ ತೆರಿಗೆ ವಿಧಿಸುತ್ತಿದೆ. ಮೋದಿಯವರ ಬಿಜೆಪಿ ಸರ್ಕಾರವು ಮತ್ತೊಂದು ಕಡೆ ಕಾರ್ಪೊರೇಟ್ ಬಂಡವಾಳಿಗರ ಮೇಲಿನ ತೆರಿಗೆಯನ್ನು ಇಳಿಸುತ್ತಿದೆ. ದೇಶದಲ್ಲಿ ಈಗ ಜನಸಾಮಾನ್ಯರು ಕಟ್ಟುವ ತೆರಿಗೆ ಹೆಚ್ಚಾಗುತ್ತಿದೆ. ಕಾರ್ಪೊರೇಟ್ ಶ್ರೀಮಂತರು ಕಟ್ಟುವ ತೆರಿಗೆ ಕಡಿಮೆಯಾಗುತ್ತಿದೆ.

ಮೋದಿ ಅಧಿಕಾರಕ್ಕೆ ಬಂದ ಮೇಲೆ 102 ಲಕ್ಷ ಕೋಟಿ ಸಾಲ: ಇದೇ ಸಂದರ್ಭದಲ್ಲಿ ದೇಶದ ಆರ್ಥಿಕತೆಯ ಚೈತನ್ಯವೇ ಕುಸಿದು ಹೋಗುವಂತೆ ಸಾಲ ಮಾಡಲಾಗಿದೆ. ಮೋದಿಯವರು ಅಧಿಕಾರಕ್ಕೆ ಬಂದ ಈ ಎಂಟು ವರ್ಷಗಳಲ್ಲಿ ದೇಶದ ಸಾಲ 102 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದೆ. 2014ರಲ್ಲಿ ದೇಶದ ಜನರ ತಲೆಯ ಮೇಲೆ 57ಸಾವಿರ ರೂಪಾಯಿ ಸಾಲವಿದ್ದರೆ, ಇಂದು 1.71 ಲಕ್ಷ ರೂಪಾಯಿ ಸಾಲವಾಗಿದೆ.

ಆದರೆ, ಇದೇ ಸಂದರ್ಭದಲ್ಲಿ ಕೇವಲ ಪೆಟ್ರೋಲ್ ಮತ್ತು ಡೀಸೆಲ್‌ಗಳಿಂದಲೇ 26 ಲಕ್ಷ ಕೋಟಿ ರೂಪಾಯಿಗಳನ್ನು ದೇಶದ ಜನರಿಂದ ದೋಚಿಕೊಳ್ಳಲಾಗಿದೆ. ಇಷ್ಟೊಂದು ಹಣ ಎಲ್ಲಿ ಹೋಯಿತು? ಇದರ ಲಾಭ ಜನ ಸಾಮಾನ್ಯರಿಗೇಕೆ ಸಿಗಲಿಲ್ಲ? ಇದನ್ನು ಯಾರು ತಿಂದು ಹಾಕಿದರು? ಎಷ್ಟು ಹಣ ಭ್ರಷ್ಟಾಚಾರಕ್ಕೆ ಹೋಯಿತು? ಎಷ್ಟು ಹಣ ಕಾರ್ಪೊರೇಟ್ ಬಂಡವಾಳಿಗರ ಸಾಲ ಮನ್ನಾ ಮಾಡಲು ಖರ್ಚು ಮಾಡಲಾಯಿತು? ಈ ಎಲ್ಲ ಪ್ರಶ್ನೆಗಳಿಗೆ ದೇಶದ ಜನರಿಗೆ ಮೋದಿಯವರ ಸರ್ಕಾರ ಲೆಕ್ಕ ಕೊಡಬೇಕಾಗಿದೆ.

ಅದಕ್ಕೂ ಮೊದಲು ಅಮೆರಿಕ, ಯುರೋಪ್​, ಆಸ್ಟ್ರೇಲಿಯಾ, ಜಪಾನ್ ಮತ್ತು ನ್ಯೂಜಿಲ್ಯಾಂಡ್ ದೇಶಗಳಲ್ಲಿ ರೈತರಿಗೆ, ಜನಸಾಮಾನ್ಯರಿಗೆ ನೀಡುತ್ತಿರುವ ಸಬ್ಸಿಡಿಗಳಂತೆ ಭಾರತದಲ್ಲೂ ನೀಡಿ, ಮುಳುಗಿ ಹೋಗುತ್ತಿರುವ ಜನರ ಬದುಕನ್ನು ಸುಧಾರಣೆ ಮಾಡಬೇಕಾದ ಅಗತ್ಯ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಜೈರಾಮ್ ರಮೇಶ್ ಭೇಟಿ: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿದ ಜೈರಾಮ್ ರಮೇಶ್ ಅವರನ್ನು ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಅಭಿನಂದಿಸಿ ಶುಭ ಹಾರೈಸಿದರು. ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ನಸೀರ್ ಅಹಮದ್, ಚುನಾವಣೆಯಲ್ಲಿ ಎರಡನೇ ಅಭ್ಯರ್ಥಿಯಾಗಿದ್ದ ಮನ್ಸೂರ್ ಆಲಿ ಖಾನ್, ಕೆಪಿಸಿಸಿ ಉಪಾಧ್ಯಕ್ಷ ಸುಧೀಂದ್ರ ಹಾಜರಿದ್ದರು.

ಇದನ್ನೂ ಓದಿ: ಬಂಡವಾಳ ಹಿಂತೆಗೆದುಕೊಂಡ ಕಂಪನಿಗಳು ಮರು ಹೂಡಿಕೆ ಮಾಡಿ ಉತ್ತಮ ಆದಾಯ ನೀಡುತ್ತಿವೆ: ಸೀತಾರಾಮನ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.