ETV Bharat / city

ರೈತರನ್ನ ದೇಶದ್ರೋಹಿಗಳು ಎನ್ಬೇಡಿ, ಅವರ ಕಷ್ಟಕ್ಕೆ ಜತೆಯಾಗಿ, ಇಲ್ಲದಿದ್ರೇ ಸುಮ್ನಿರಿ ; ಸಿದ್ದರಾಮಯ್ಯ - ಬೆಂಗಳೂರು

ಕೇಂದ್ರದಲ್ಲಿ ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚೀನಾದಿಂದ ಭಾರತಕ್ಕೆ ಆಮದು ಮಾಡಿಕೊಳ್ಳುತ್ತಿದ್ದ ರೇಷ್ಮೆಯ ಮೇಲಿನ ಆಮದು ತೆರಿಗೆಯನ್ನು ಶೇ. 5ಕ್ಕೆ ಇಳಿಸಿದರು. ನಮ್ಮ ರೇಷ್ಮೆಗೆ ಬೆಲೆ ಕುಸಿಯಿತು. ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಬಿತ್ತು. ಮಲೇಶಿಯಾ ಮುಂತಾದ ದೇಶಗಳಿಂದ ದೊಡ್ಡ ಮಟ್ಟದಲ್ಲಿ ಎಣ್ಣೆ, ಸೋಯಾ ಕಾಳುಗಳನ್ನು ಆಮದು ಮಾಡಿಕೊಂಡರು. ದೇಶದಲ್ಲಿ ಎಣ್ಣೆ ಕಾಳು ಬೆಳೆಯುವ ಮಧ್ಯ ಪ್ರದೇಶ, ಕರ್ನಾಟಕ, ಮಹಾರಾಷ್ಟ್ರ ಮುಂತಾದ ರಾಜ್ಯಗಳ ರೈತರ ಬದುಕಿಗೆ ಗಂಡಾಂತರ ಒದಗಿತು..

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : Jan 31, 2021, 9:36 PM IST

ಬೆಂಗಳೂರು : ದೇಶದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಯಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರಿಗೆ ಬಹಿರಂಗ ಪತ್ರ ಬರೆದಿರುವ ಅವರು, ದೇಶದ ರೈತರು ಇಂದು ಅತ್ಯಂತ ಹತಾಶರಾಗಿ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.

ಪ್ರತಿಭಟನೆ ಏಕೆ ನಡೆಯುತ್ತಿದೆ ಎಂದು ಅನೇಕರಿಗೆ ಗೊತ್ತಿದೆ. ಗೊತ್ತಿಲ್ಲದ ಜನರೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ರಾಜ್ಯದ ನಮ್ಮ ದೇಶದ ಅಸಂಖ್ಯಾತ ಜನ ಅತ್ಯಂತ ಮೂಲಭೂತ ಅಗತ್ಯಗಳಾದ ಅನ್ನ, ಬಟ್ಟೆ, ಆರೋಗ್ಯ, ಶಿಕ್ಷಣ ಹೀಗೆ ದೈನಂದಿನ ವಿಚಾರಗಳಲ್ಲಿ ಮುಳುಗಿದ್ದಾರೆ.

ದೇಶದ ಆಗುಹೋಗುಗಳ ಕುರಿತು ಆಸಕ್ತಿ ಇರುವವರು ಮಾಹಿತಿ ಹುಡುಕಿ ಅಥವಾ ಕೇಳಿ ಪಡೆದುಕೊಂಡು ಸತ್ಯ ಯಾವುದು ಸುಳ್ಳು ಯಾವುದು ಎಂದು ಪರಾಮರ್ಶಿಸಿ ವಿಚಾರವಂತರಾಗುತ್ತಿದ್ದಾರೆ ಎಂದರು. ದೇಶದ ರೈತರು ಕಣ್ಣಲ್ಲಿ ನೀರು ಹಾಕಿ ರೋಧಿಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ.

ಅವರು ಯಾಕೆ ಕಣ್ಣೀರು ಹಾಕುತ್ತಿದ್ದಾರೆ? ದೆಹಲಿಯ ಮೈನಸ್ ಡಿಗ್ರಿ ಚಳಿಯಲ್ಲಿ ವಯಸ್ಸಾದವರು, ಅಸಹಾಯಕರು, ಯುವಕರು ಕೂತು ಯಾಕೆ ಪ್ರತಿಭಟನೆ ನಡೆಸುತ್ತಿದ್ದಾರೆ? ಸುಮಾರು 140 ಕ್ಕೂ ಹೆಚ್ಚು ಜನರು ಹೋರಾಟದಲ್ಲಿ ಯಾಕೆ ಹುತಾತ್ಮರಾದರು? ಸಾವೆಂಬುದು ಅಷ್ಟೊಂದು ಸರಳವೇ ಅವರಿಗೆ?

ರೈತರ ಸಾವಿಗೆ ಎಂಥೆಂಥ ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದನ್ನು ಮಧ್ಯಮ ವರ್ಗದ ನಗರಗಳಲ್ಲಿನ ನಾವು ಅರ್ಥ ಮಾಡಿಕೊಂಡಿದ್ದೇವೆಯೇ? ಯಾರೋ ಕೆಲವು ಕಿಡಿಗೇಡಿಗಳು ಜನವರಿ 26ನೇ ತಾರೀಖು ಕೆಂಪು ಕೋಟೆಯ ಬಳಿ ಬಾವುಟ ಹಾರಿಸಿದರು, ದಾಂಧಲೆ ಮಾಡಿದರು. ದಾಂಧಲೆ ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದರು.

ದೆಹಲಿಯ ಬೀದಿ ಬೀದಿಗಳಲ್ಲಿ ಸಿಸಿ ಕ್ಯಾಮೆರಾಗಳಿವೆ ಎಂದು ಕೇಳಿದ್ದೇನೆ. ಅವುಗಳ ಮೂಲಕ ತಪ್ಪಿತಸ್ಥರನ್ನು ಹಿಡಿದು ಶಿಕ್ಷಿಸಲಿ. ಕೆಂಪುಕೋಟೆಯ ಆವರಣಕ್ಕೆ ಹೋದವರೆಷ್ಟು ಜನ? ಹೆಚ್ಚೆಂದ್ರೆ ಒಂದೆರಡು ಸಾವಿರ ಜನರಿರಬಹುದು.

ಉಳಿದಂತೆ ಪೊಲೀಸರು ವಿಧಿಸಿದ್ದ ನಿಯಮಗಳಂತೆ ನಡೆದುಕೊಂಡು ರ್ಯಾಲಿ ನಡೆಸಿದ 10 ಲಕ್ಷ ರೈತರನ್ನು ಯಾವ ನಾಲಿಗೆಯಲ್ಲಿ ದೇಶದ್ರೋಹಿಗಳು ಎನ್ನುವುದು, ಆತ್ಮ, ಹೃದಯಗಳನ್ನು ಮಾರಿಕೊಂಡ, ಒತ್ತೆ ಇಟ್ಟುಕೊಂಡ ಜನದ್ರೋಹಿಗಳು ಮಾತ್ರವೇ ಈ ಮಾತುಗಳನ್ನಾಡಲು ಸಾಧ್ಯ ಅಲ್ಲವೇ? ದೇಶ ಎಂದರೆ ಜನರೇ ಅಲ್ಲವೇ? ಜನದ್ರೋಹಿಗಳು ದೇಶ ಪ್ರೇಮಿಗಳು ಹೇಗಾಗುತ್ತಾರೆ? ಎಂದು ಕೇಳಿದ್ದಾರೆ.

ರೈತರ ಬದಲು ಉದ್ಯಮಿ ಸಾಲ ಮನ್ನಾ: ಬಾಯಿ ಮಾತಲ್ಲಿ ಮಾತ್ರ ದೇಶ ಪ್ರೇಮದ ಬಗ್ಗೆ ಬರೀ ಭಾಷಣ ಮಾಡುವ ಬಿಜೆಪಿಯವರು ಮೊನ್ನೆ, "ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಅತಿ ಹೆಚ್ಚು ಆತ್ಮಹತ್ಯೆಗಳಾದವು" ಎಂದು ಟ್ವೀಟ್​ ಮಾಡಿದ್ದರು. ಇದನ್ನು ತಿಳುವಳಿಕೆಯುಳ್ಳ ನಾಡಿನ ಜನರು ಪರಿಶೀಲಿಸಿ ನೋಡಿದರೆ ಸತ್ಯ ತಿಳಿಯುತ್ತದೆ. ಅತಿ ಹೆಚ್ಚು ಆತ್ಮಹತ್ಯೆಗಳಾಗಿರುವುದು ಬಿಜೆಪಿ ಸರ್ಕಾರಗಳಿದ್ದ ಮಹಾರಾಷ್ಟ್ರ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ.

ಇಷ್ಟಕ್ಕೂ ಯಾಕೆ ಆತ್ಮಹತ್ಯೆಗಳಾದವು? ಕೇಂದ್ರದಲ್ಲಿ ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚೀನಾದಿಂದ ಭಾರತಕ್ಕೆ ಆಮದು ಮಾಡಿಕೊಳ್ಳುತ್ತಿದ್ದ ರೇಷ್ಮೆಯ ಮೇಲಿನ ಆಮದು ತೆರಿಗೆಯನ್ನು ಶೇ. 5ಕ್ಕೆ ಇಳಿಸಿದರು. ನಮ್ಮ ರೇಷ್ಮೆಗೆ ಬೆಲೆ ಕುಸಿಯಿತು. ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಬಿತ್ತು. ಮಲೇಶಿಯಾ ಮುಂತಾದ ದೇಶಗಳಿಂದ ದೊಡ್ಡ ಮಟ್ಟದಲ್ಲಿ ಎಣ್ಣೆ, ಸೋಯಾ ಕಾಳುಗಳನ್ನು ಆಮದು ಮಾಡಿಕೊಂಡರು.

ದೇಶದಲ್ಲಿ ಎಣ್ಣೆ ಕಾಳು ಬೆಳೆಯುವ ಮಧ್ಯ ಪ್ರದೇಶ, ಕರ್ನಾಟಕ, ಮಹಾರಾಷ್ಟ್ರ ಮುಂತಾದ ರಾಜ್ಯಗಳ ರೈತರ ಬದುಕಿಗೆ ಗಂಡಾಂತರ ಒದಗಿತು. ಇದರ ಜೊತೆಯಲ್ಲಿ ದೇಶದ ಅನೇಕ ಕಡೆ ಭೀಕರ ಬರಗಾಲ ಬಂತು. ರೈತರ ಸಾಲ ಮನ್ನಾ ಮಾಡಿ ಎಂದು ಕೈ ಮುಗಿದು ಕೇಂದ್ರವನ್ನು ರಾಜ್ಯಗಳು ಕೇಳಿಕೊಂಡವು. ಮೋದಿಯವರು ರೈತರ ಸಾಲ ಮನ್ನಾ ಮಾಡುವ ಬದಲಾಗಿ ದೊಡ್ಡ ಕೈಗಾರಿಕೋದ್ಯಮಿಗಳ ಸಾಲ ವಸೂಲಿ ಮಾಡುವುದನ್ನು ನಿಲ್ಲಿಸಿ ಅದನ್ನು ಎನ್​ಪಿಎ ಎಂದು ಮಾಫಿ ಮಾಡಿಬಿಟ್ಟರು ಎಂದು ತಿಳಿಸಿದರು.

ಬೆಲೆ ಏರಿಕೆ : ಗ್ಯಾಸಿನ ಬೆಲೆ ಗಗನಕ್ಕೇರಿದೆ. ಯುಪಿಎ ಸರ್ಕಾರದ ಅಂತ್ಯದ ವೇಳೆಗೆ ಪೆಟ್ರೋಲ್ ಮೇಲೆ ಕೇಂದ್ರ ಸರಕಾರ ವಿಧಿಸುತ್ತಿದ್ದ ತೆರಿಗೆ 9.21 ಮಾತ್ರ. ಇದನ್ನು ಈಗ 32.98 ಕ್ಕೆ ಹೆಚ್ಚಿಸಲಾಗಿದೆ. ಹಾಗೆಯೇ ಡೀಸೆಲ್ ಮೇಲೆ ಮೊದಲಿದ್ದ ತೆರಿಗೆ 3.45 ಮಾತ್ರ. ಈಗ ಇದನ್ನು 31.83 ಕ್ಕೆ ಹೆಚ್ಚಿಸಲಾಗಿದೆ. ರಾಜ್ಯದಿಂದ ಸ್ಥೂಲವಾಗಿ ನೋಡಿದರೂ ಸುಮಾರು ಎರಡೂವರೆ ಲಕ್ಷ ಕೋಟಿ ಹಣ ಕೇಂದ್ರಕ್ಕೆ ಹೋಗುತ್ತಿದೆ.

ಅದರಲ್ಲಿ 1 ಲಕ್ಷ ಕೋಟಿ ಆದಾಯ ತೆರಿಗೆ, 83 ಸಾವಿರ ಕೋಟಿ ಜಿ.ಎಸ್.ಟಿ, 36 ಸಾವಿರ ಕೋಟಿ ಪೆಟ್ರೋಲ್ ಡೀಸೆಲ್ ಮೇಲಿನ ಹೆಚ್ಚುವರಿ (ಅಡಿಷನಲ್) ತೆರಿಗೆ, ಯುಪಿಎ ಸರ್ಕಾರವಿದ್ದಾಗ ಕೇವಲ 3500 ಕೋಟಿ ಮಾತ್ರ ತೆರಿಗೆ ಸಂಗ್ರಹವಾಗುತ್ತಿತ್ತು. 17.5 ಸಾವಿರ ಕೋಟಿ ಕಸ್ಟಮ್ಸ್ ತೆರಿಗೆ ಮುಂತಾದವೆಲ್ಲ ಸೇರಿವೆ. ನಮ್ಮ ಐ.ಟಿ ರಫ್ತಿನಿಂದ ಬರುವ ತೆರಿಗೆಯನ್ನು, ಸುಂಕವನ್ನು, ಸೆಸ್​ಗಳನ್ನು ಇದರಲ್ಲಿ ಸೇರಿಸಿಲ್ಲ.

ದೇಶದಲ್ಲಿ ಶೇ.40ಕ್ಕೂ ಹೆಚ್ಚಿನ ಪ್ರಮಾಣದ ರಫ್ತು ನಮ್ಮ ರಾಜ್ಯದಿಂದಲೇ ಆಗುತ್ತದೆ. ಆದರೆ ಕೇಂದ್ರ ನಮಗೆ ಶೇ. 42 ರಷ್ಟು ಕೊಡಬೇಕಲ್ಲವೆ? ಆದರೆ ತೆರಿಗೆ, ಸಹಾಯಧನಗಳ ರೂಪದಲ್ಲಿ ಕೊಡುತ್ತಿರುವುದು ಕೇವಲ 45 ರಿಂದ 50 ಸಾವಿರ ಕೋಟಿ ಮಾತ್ರ. ದೇಶದ ಬೇರೆ ಬೇರೆ ರಾಜ್ಯಗಳೂ ಬೆಳವಣಿಗೆಯಾಗಬೇಕು ನಿಜ. ಅದಕ್ಕೆ ಕೇಂದ್ರ ಉಳಿಸಿಕೊಳ್ಳುವ ಶೇ 58 ರಷ್ಟು ನಮ್ಮ ಹಣದಲ್ಲಿ ಉದಾರವಾಗಿ ನೀಡಲಿ ಯಾರು ಬೇಡ ಅಂದವರು? ಎಂದರು.

ರೈತರ ಬದುಕು ಅತಂತ್ರ: ರೈತರ ವಿಚಾರಕ್ಕೆ ಬರೋಣ. ರೈತರು ಈಗ ಕೇಂದ್ರವು ಜಾರಿಗೆ ತಂದಿರುವ ಮೂರೂ ಕಾಯ್ದೆಗಳು ನಮ್ಮನ್ನು ನಾಶ ಮಾಡುತ್ತವೆ ಎಂದು ಹೇಳುತ್ತಿದ್ದಾರೆ. ಅವುಗಳನ್ನು ಹಿಂಪಡೆಯಿರಿ ಎಂದು ಪ್ರತಿಭಟಿಸುತ್ತಿದ್ದಾರೆ. ಈ ಕಾಯ್ದೆಗಳು ರೈತರನ್ನು ಉದ್ಧಾರ ಮಾಡುತ್ತವೆ ಎಂದು ಕೇಂದ್ರ ಹೇಳುತ್ತಿದೆ. ತಿಳಿದವರು ಯಾವುದು ಸರಿ ಎಂದು ಯೋಚಿಸಬೇಕಲ್ಲವೆ? ಸರಿ ತಪ್ಪುಗಳ ಕುರಿತು ಜನರಿಗೆ ಹೇಳಬೇಕಲ್ಲವೆ? ಚರ್ಚೆ, ಸಂವಾದ ನಡೆಸುವವರನ್ನೇ ದೇಶದ್ರೋಹಿಗಳು ಎಂದು ಬಿಂಬಿಸಿ ಅನೇಕ ಮಾಧ್ಯಮದವರ ಮೇಲೆ ಕೇಸು ಹಾಕಿಬಿಟ್ಟರೆ ಅದನ್ನು ಪ್ರಜಾಪ್ರಭುತ್ವ ಎನ್ನಲಾದೀತೆ?.

ಈ ರೀತಿ ಹತ್ತು ಹಲವು ವಿಚಾರಗಳನ್ನು ಮುಂದಿಟ್ಟು ತಮ್ಮ ಆತಂಕ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಮತ್ತೊಮ್ಮೆ ನಾಡಿನ ಜನರನ್ನು ಉದ್ದೇಶಿಸಿ ಮನವಿ ಮಾಡಿದ್ದು ಮತ್ತೊಮ್ಮೆ ನಾಡಿನ ಪ್ರೀತಿಯ ಜನರನ್ನು ವಿನಂತಿಸುತ್ತೇನೆ. ದಯಮಾಡಿ ರೈತರನ್ನು ದೇಶದ್ರೋಹಿಗಳು ಎನ್ನಬೇಡಿ. ಅವರ ಕಷ್ಟಕ್ಕೆ ಜೊತೆಯಾಗಿ. ಆಗದಿದ್ದರೆ ಅವರ ಬಗ್ಗೆ ಕೆಟ್ಟ ಮಾತು ಆಡುವುದನ್ನಾದರೂ ನಿಲ್ಲಿಸಿ. ಇಡೀ ದೇಶ ಪ್ರತಿಭಟನಾನಿರತ ರೈತರ ಋಣದಲ್ಲಿದೆ ಎನ್ನುವುದನ್ನು ಮರೆಯದಿರೋಣ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.