ETV Bharat / city

ಮೋದಿ ಕುರಿತ 'ವರುಷ ಎಂಟು, ಅವಾಂತರಗಳು ನೂರೆಂಟು' ಪುಸ್ತಕ ಬಿಡುಗಡೆಗೊಳಿಸಿದ ಸಿದ್ದರಾಮಯ್ಯ - ಮೋದಿ ಕುರಿತ ವರುಷ ಎಂಟು ಅವಾಂತರಗಳು ನೂರೆಂಟು ಪುಸ್ತಕ ಬಿಡುಗಡೆ

ಹೈದರಾಬಾದ್​ನಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಈ ಪುಸ್ತಕದಲ್ಲಿರುವ ವಿಷಯಗಳಿಗೆ ಬಿಜೆಪಿಯವರು ಉತ್ತರ ನೀಡಬೇಕು. ಕಾರ್ಯಕಾರಿಣಿ ಸಭೆಯಲ್ಲಿ ನರೇಂದ್ರ ಮೋದಿ, ಅಮಿತ್‌ ಶಾ, ಜೆ.ಪಿ. ನಡ್ಡಾ ಅವರು ಸೇರಿದಂತೆ ಎಲ್ಲರೂ ಭಾಗವಹಿಸಿದ್ದಾರೆ. ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡುತ್ತಾರಾ ನೋಡೋಣ ಎಂದು ಸಿದ್ದರಾಮಯ್ಯ ಹೇಳಿದರು.

ವರುಷ ಎಂಟು, ಅವಾಂತರಗಳು ನೂರೆಂಟು' ಪುಸ್ತಕ ಬಿಡುಗಡೆ

author img

By

Published : Jul 2, 2022, 7:18 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಎಂಟು ವರ್ಷಗಳ ಆಡಳಿತ ವೈಫಲ್ಯಗಳ ಕುರಿತಾದ 'ವರುಷ ಎಂಟು, ಅವಾಂತರಗಳು ನೂರೆಂಟು' ಎಂಬ ಕಿರುಹೊತ್ತಿಗೆಯನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಬಿಡುಗಡೆಗೊಳಿಸಿದರು. ನಂತರ ವಿಧಾನಸೌಧದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ, ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 8 ವರ್ಷ ಪೂರೈಸಿದ್ದಕ್ಕೆ ಸಂಭ್ರಮಾಚರಣೆಯನ್ನು ಹಮ್ಮಿಕೊಂಡಿದ್ದರು. ಆದ್ರೆ, 2014ರ ಸಂಸತ್‌ ಚುನಾವಣೆಯಲ್ಲಿ ಈ ದೇಶದ ಜನರಿಗೆ ಏನು ಹೇಳಿದ್ದರು? ಪ್ರಧಾನಿಯಾಗಿ ಏನು ಮಾಡಿದರು? ಇದರಿಂದ ಬಡವರು, ಮಹಿಳೆಯರು, ಸಾಮಾನ್ಯ ಜನರು, ರೈತರು, ಅಲ್ಪಸಂಖ್ಯಾತರು, ಹಿಂದುಳಿದ ಜನರು ಎಷ್ಟು ಕಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ? ಅವರ ಭರವಸೆಗಳು ಹೇಗೆ ಹುಸಿಯಾಗಿವೆ? ಬಡವರ, ಸಾಮಾನ್ಯ ಜನರ ಜೀವನ ಹೇಗೆ ದುಸ್ಥರವಾಗಿದೆ? ಎಂಬುದನ್ನು ಪುಸ್ತಕದ ಮೂಲಕ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಈ ಎಂಟು ವರ್ಷಗಳ ಸಂಭ್ರಮಾಚರಣೆ ಸುಳ್ಳಿನ ಆಚರಣೆ, ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಲಾಗದೆ, ಜನದ್ರೋಹದ ಕೆಲಸ ಮಾಡಿದ್ದಾರೆ. ಇವುಗಳ ಬಗ್ಗೆ ಮಾಹಿತಿ ಸಹಿತವಾದ ಒಂದು ಕಿರು ಹೊತ್ತಿಗೆಯನ್ನು ಈ ಪುಸ್ತಕದ ತಲೆಬರಹ 'ವರುಷ ಎಂಟು, ಅವಾಂತರಗಳು ನೂರೆಂಟು' ಎಂದು ವ್ಯಂಗ್ಯವಾಡಿದರು.

ವರುಷ ಎಂಟು, ಅವಾಂತರಗಳು ನೂರೆಂಟು' ಪುಸ್ತಕ ಬಿಡುಗಡೆ
ವರುಷ ಎಂಟು, ಅವಾಂತರಗಳು ನೂರೆಂಟು' ಪುಸ್ತಕ ಬಿಡುಗಡೆ

ಹೈದರಾಬಾದ್​ನಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಈ ಪುಸ್ತಕದಲ್ಲಿರುವ ವಿಷಯಗಳಿಗೆ ಬಿಜೆಪಿಯವರು ಉತ್ತರ ನೀಡಬೇಕು. ಕಾರ್ಯಕಾರಿಣಿ ಸಭೆಯಲ್ಲಿ ನರೇಂದ್ರ ಮೋದಿ, ಅಮಿತ್‌ ಶಾ, ಜೆ.ಪಿ ನಡ್ಡಾ ಅವರು ಸೇರಿದಂತೆ ಎಲ್ಲರೂ ಭಾಗವಹಿಸಿದ್ದಾರೆ. ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡುತ್ತಾರಾ ನೋಡೋಣ ಎಂದು ಹೇಳಿದರು. ನರೇಂದ್ರ ಮೋದಿ ಅವರು 12 ವರ್ಷ ಗುಜರಾತ್‌ ಮುಖ್ಯಮಂತ್ರಿಯಾಗಿದ್ದರು. ಈಗ ಪ್ರಧಾನಿಯಾಗಿ ಎಂಟು ವರ್ಷಗಳು ತುಂಬಿವೆ. ಮೋದಿ ಅವರು 2014 ರಲ್ಲಿ ಗುಜರಾತ್‌ ಮಾದರಿ ಮಾಡುತ್ತೇವೆ ಎಂದು ದೇಶದ ಉದ್ದಗಲಕ್ಕೆ ಸುಳ್ಳು ಭ್ರಮೆಯನ್ನು ಹುಟ್ಟಿಸಿದ್ದರು. ವಿದೇಶದಲ್ಲಿರುವ ಕಪ್ಪು ಹಣ ತಂದು 15 ಲಕ್ಷದಂತೆ ಪ್ರತಿ ಕುಟುಂಬಕ್ಕೆ ಹಂಚುತ್ತೇವೆ, ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ, ಯುವಕರಿಗೆ ಪ್ರತೀ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ, ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ. ಬೆಲೆ ಏರಿಕೆಯನ್ನು ತಡೆಗಟ್ಟಿ ಅಚ್ಛೇ ದಿನ್‌ ತರುತ್ತೇವೆ ಎಂದಿದ್ದರು. ಕಳೆದ ಎಂಟು ವರ್ಷಗಳಲ್ಲಿ ಒಂದೇ ಒಂದೂ ಭರವಸೆಯೂ ಈಡೇರಿಲ್ಲ ಎಂದು ಸಿದ್ದರಾಮಯ್ಯ ದೂರಿದರು.

(ಇದನ್ನೂ ಓದಿ: ನಮ್ಮ ಮುಂದಿನ ಸಿಎಂ ಕುಮಾರಸ್ವಾಮಿ, ತಾಕತ್ತಿದ್ದರೆ ನಿಮ್ಮ ಸಿಎಂ ಅಭ್ಯರ್ಥಿ ಘೋಷಿಸಿ: ಕಾಂಗ್ರೆಸ್​-ಬಿಜೆಪಿಗೆ ಇಬ್ರಾಹಿಂ ಸವಾಲು)

ಕಳೆದ 8 ವರ್ಷಗಳಲ್ಲಿ ಮೋದಿ ಸರ್ಕಾರ ಜನರ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮಾಡಿಲ್ಲ. ಇಂದು ಬೆಲೆಯೇರಿಕೆ ಗಗನ ಮುಟ್ಟಿದೆ. ಅಚ್ಛೇ ದಿನ್‌ ಆಯೇಗಾ ಎಂದು ಹೇಳುತ್ತಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಚ್ಚಾ ತೈಲ ಬೆಲೆ ಬ್ಯಾರಲ್​​ಗೆ 40 ಡಾಲರ್‌ ಆಸುಪಾಸು ಬಂದಿತ್ತು. ಹೀಗೆ ಕಚ್ಚಾ ತೈಲ ಬೆಲೆ ಕಡಿಮೆಯಾದರೂ ಅದರ ಲಾಭವನ್ನು ಜನರಿಗೆ ವರ್ಗಾವಣೆ ಮಾಡಿಲ್ಲ. ಇಂದು ಗ್ಯಾಸ್‌ ಬೆಲೆ 1,050 ರೂಪಾಯಿ, ಡೀಸೆಲ್‌ ಬೆಲೆ 95 ರೂಪಾಯಿ, ಪೆಟ್ರೋಲ್‌ ಬೆಲೆ 113 ರೂಪಾಯಿ ಆಗಿದೆ. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಹೆಚ್ಚುವರಿ ಅಬಕಾರಿ ಸುಂಕವನ್ನು ನಿರಂತರ ಏರಿಕೆ ಮಾಡಿದ್ದು ಎಂದರು.

ಮೋದಿ ಸರ್ಕಾರದ 8 ವರ್ಷಗಳ 8 ಅನಾಹುತಗಳು: ದೇಶ ಹಿಂದೆಂದೂ ಇಲ್ಲದಷ್ಟು ಸಾಲದ ಸುಳಿಗೆ ಸಿಲುಕಿದೆ, ರೂಪಾಯಿ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ. ಬೆಲೆಯೇರಿಕೆ ಹಿಂದೆಂದು ಇಲ್ಲದ ಮಟ್ಟಕ್ಕೆ ಮುಟ್ಟಿದೆ, ಹಣದುಬ್ಬರ ಕಳೆದ 17 ವರ್ಷಗಳಲ್ಲಿ ತೀವ್ರ ಗತಿಗೆ ಮುಟ್ಟಿದೆ. ನಿರುದ್ಯೋಗ ತಾರಕಕ್ಕೇರಿದೆ, ರಾಜ್ಯಗಳ ಆರ್ಥಿಕತೆ ಕುಸಿದುಹೋಗುತ್ತಿದೆ, ಒಕ್ಕೂಟ ವ್ಯವಸ್ಥೆ ಶಿಥಿಲವಾಗುತ್ತಿದೆ ಇದರ ಜೊತೆಯಲ್ಲಿ ದೇಶದ ಪ್ರಜಾಪ್ರಭುತ್ವ ಭಯಭೀತವಾಗಿದೆ, ಜಿಎಸ್‌ಟಿ, ನೋಟು ಅಮಾನ್ಯೀಕರಣ, ಕೊರೊನಾ ನಿರ್ವಹಣೆಯ ಎಡಬಿಡಂಗಿ ನಿಲುವುಗಳು ದೇಶದ ಬೆನ್ನುಮೂಳೆಯನ್ನು ಟೊಳ್ಳು ಮಾಡಿದೆ, ದೇಶದ ಜನರು ಕಷ್ಟಪಟ್ಟು ಕಟ್ಟಿದ್ದ ಲಾಭದಾಯಕ ಸಂಸ್ಥೆ, ಕಾರ್ಖಾನೆಗಳನ್ನು ಬಿಡಿಗಾಸಿಗೆ ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದೆ, ರೈತರು, ಕಾರ್ಮಿಕ, ಮಹಿಳೆ, ಯುವ ಜನರ ವಿರೋಧಿ ಕಾನೂನುಗಳನ್ನು ಜಾರಿಗೆ ತಂದು ಅದರ ಮೂಲಕ ಜನರನ್ನು ಶತ್ರುಗಳಂತೆ ಭಾವಿಸಿ, ಧಮನಿಸಲಾಗುತ್ತಿದೆ. ಜನರನ್ನು ಬಡತನಕ್ಕೆ ತಳ್ಳಲಾಗುತ್ತಿದೆ, ಅಂಬಾನಿ, ಅದಾನಿಗಳಂತಹ ಕಾರ್ಪೋರೇಟ್‌ ಬಂಡವಾಳಿಗರನ್ನು ಕೊಬ್ಬಿಸಿ ಮೆರೆಸಲಾಗುತ್ತಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.