ETV Bharat / city

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನಮ್ಮ ಸರ್ಕಾರದ ಕನಸು: ಮೋದಿ ಉದ್ಘಾಟಿಸಲಿರುವ ಸಮಾರಂಭಕ್ಕೆ ಸಿದ್ದರಾಮಯ್ಯ ವಿಶ್ ​

ಐದು ವರ್ಷಗಳ ಹಿಂದೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬೆಂಗಳೂರಿಗೆ ಬಂದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆಯಾದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಿದ್ದು, ಇದು ನಾನು ಮುಖ್ಯಮಂತ್ರಿಯಾಗಿದ್ದ ಕಾಲದ ಮಧುರ ಮತ್ತು ಸಾರ್ಥಕ ನೆನಪು ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

siddaramaih wishes modi
siddaramaih wishes modi
author img

By

Published : Jun 20, 2022, 10:12 AM IST

ಬೆಂಗಳೂರು: ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್​ನ ನೂತನ ಆವರಣವನ್ನು ಉದ್ಘಾಟಿಸಲು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಐದು ವರ್ಷಗಳ ಹಿಂದೆ (4-10-2017) ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬೆಂಗಳೂರಿಗೆ ಬಂದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆಯಾದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಿದ್ದು, ನಾನು ಮುಖ್ಯಮಂತ್ರಿಯಾಗಿದ್ದ ಕಾಲದ ಮಧುರ ಮತ್ತು ಸಾರ್ಥಕ ನೆನಪು ಎಂದು ಬರೆದುಕೊಂಡಿದ್ದಾರೆ.

  • ಪ್ರಧಾನಿ @narendramodi ಅವರು ಇಂದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ನ ನೂತನ ಆವರಣವನ್ನು ಉದ್ಘಾಟಿಸುತ್ತಿದ್ದಾರೆ. ಈ ಸಮಾರಂಭಕ್ಕೆ ಶುಭ ಹಾರೈಸುವೆ. 5/5#DrBRAmbedkar

    — Siddaramaiah (@siddaramaiah) June 20, 2022 " class="align-text-top noRightClick twitterSection" data=" ">

ವಿಶ್ವಕಂಡ ಅಪ್ರತಿಮ ಆರ್ಥಿಕ ತಜ್ಞ ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮದಿನದ ಸಂದರ್ಭದಲ್ಲಿ ಅವರ ನೆನಪಿಗೆ ಅರ್ಥಪೂರ್ಣವಾದ ಸ್ಮಾರಕರೂಪದಲ್ಲಿ ಯೋಜನೆಯೊಂದನ್ನು ರೂಪಿಸಬೇಕೆಂಬ ನಮ್ಮ ಸರ್ಕಾರದ ಕನಸು ನನಸಾಗಿ ರೂಪುಗೊಂಡಿದ್ದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್. ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಸ್ಥಾಪನೆಗೆ 2017ರಲ್ಲಿಯೇ 43.45 ಎಕರೆ ಜಮೀನು ಮತ್ತು ಹೊಸ ಕಟ್ಟಡ ಸಹಿತ ಮೂಲಸೌಕರ್ಯ ನಿರ್ಮಾಣಕ್ಕೆ 350 ಕೋಟಿ ರೂಪಾಯಿ ಮಂಜೂರು ಮಾಡಿದ್ದ ನಮ್ಮ ಸರ್ಕಾರ ಬದ್ಧತೆಯಿಂದ ಈ ಯೋಜನೆಯನ್ನು ಸಾಕಾರಗೊಳಿಸಿತ್ತು ಎಂದು ವಿವರಿಸಿದ್ದಾರೆ.

  • ವಿಶ್ವಕಂಡ ಅಪ್ರತಿಮ ಆರ್ಥಿಕ ತಜ್ಞ ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ನೆನಪಿಗೆ ಅರ್ಥಪೂರ್ಣವಾದ ಸ್ಮಾರಕರೂಪದಲ್ಲಿ ಯೋಜನೆಯೊಂದನ್ನು ರೂಪಿಸಬೇಕೆಂಬ ನಮ್ಮ ಸರ್ಕಾರದ ಕನಸು ನನಸಾಗಿ ರೂಪುಗೊಂಡದ್ದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್. 2/5#DrBRAmbedkar pic.twitter.com/opBCj9Eg4I

ಬೇಸ್ (ಬಿಎಎಸ್ಇ) ಕಟ್ಟಡದ ಶಂಕುಸ್ಥಾಪನೆ ಮಾಡಿದ್ದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ಈ ಕಟ್ಟಡವನ್ನು 6 ತಿಂಗಳಲ್ಲಿ ಪೂರ್ಣಗೊಳಿಸಿದ್ದು, ನಮ್ಮ ಸರ್ಕಾರದ ಹೆಮ್ಮೆಯ ಸಾಧನೆ. ಜ್ಞಾನಭಾರತಿ ಕ್ಯಾಂಪಸ್​ನಲ್ಲಿಯೇ ಇದ್ದ ಕಟ್ಟಡದಲ್ಲಿಯೇ 2017ರ ಜೂನ್​​ನಲ್ಲಿ bsc(Honours) Economics ತರಗತಿಗಳು ಪ್ರಾರಂಭವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್​ನ ನೂತನ ಆವರಣ ಉದ್ಘಾಟಿಸುತ್ತಿದ್ದಾರೆ. ಈ ಸಮಾರಂಭಕ್ಕೆ ಶುಭ ಹಾರೈಸುವೆ ಎಂದಿದ್ದಾರೆ.

(ಇದನ್ನೂ ಓದಿ: ಇಂದು ಬೆಂಗಳೂರಿಗೆ ಮೋದಿ... ಕಾರ್ಯಕ್ರಮಗಳ ಡಿಟೇಲ್ಸ್... ಶಿಕ್ಷಣ ಸಂಸ್ಥೆಗಳಿಗೆ ರಜೆ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.