ಬೆಂಗಳೂರು: ಮಹಾನಗರದ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಬಿಜೆಪಿ ಸರ್ಕಾರ ತೀವ್ರ ನಿರ್ಲಕ್ಷ್ಯ ತೋರಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. 8 ವಾರಗಳಲ್ಲಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಆರಂಭಿಸಿ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡುತ್ತಿದ್ದಂತೆ ರಾಜ್ಯ ಸರ್ಕಾರ ಚುನಾವಣೆಗೆ ಸಿದ್ಧತೆ ಶುರು ಮಾಡಿದೆ. ಈ ವಿಚಾರವಾಗಿ ಸರ್ಕಾರದ ವಿರುದ್ಧ ದಿಲ್ಲಿಯಲ್ಲಿರುವ ಸಿದ್ದರಾಮಯ್ಯ ಟ್ವೀಟ್ ಮೂಲಕ ಟೀಕೆ ಮಾಡಿದ್ದಾರೆ.
ನಮ್ಮ ಸರ್ಕಾರವಿದ್ದಾಗ ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ 1,217 ಕೋಟಿ ರೂ. ಅನುದಾನ ನೀಡಿದ್ದೆವು. ಕಳೆದ ಬಜೆಟ್ನಲ್ಲಿ ಬಿಜೆಪಿ ಸರ್ಕಾರ ಬೆಂಗಳೂರಿಗೆ 1,500 ಕೋಟಿ ರೂ. ಘೋಷಣೆ ಮಾಡಿದ್ದು ಬಿಟ್ಟರೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಪಾಪ ಮಾಡಿದವರು ಯಾರಪ್ಪ ಆರ್.ಅಶೋಕ್? ಎಂದು ಪ್ರಶ್ನಿಸಿದ್ದಾರೆ.
-
ನಮ್ಮ ಸರ್ಕಾರವಿದ್ದಾಗ ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ ರೂ. 1217 ಕೋಟಿ ಅನುದಾನ ನೀಡಿದ್ದೆವು. ಕಳೆದ ಬಜೆಟ್ ನಲ್ಲಿ ಬಿಜೆಪಿ ಸರ್ಕಾರ ಬೆಂಗಳೂರಿಗೆ ರೂ. 1500 ಕೋಟಿ ಘೋಷಣೆ ಮಾಡಿದ್ದು ಬಿಟ್ಟರೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ.
— Siddaramaiah (@siddaramaiah) May 21, 2022 " class="align-text-top noRightClick twitterSection" data="
ಪಾಪ ಮಾಡಿದವರು ಯಾರಪ್ಪ @RAshokaBJP?
1/3
">ನಮ್ಮ ಸರ್ಕಾರವಿದ್ದಾಗ ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ ರೂ. 1217 ಕೋಟಿ ಅನುದಾನ ನೀಡಿದ್ದೆವು. ಕಳೆದ ಬಜೆಟ್ ನಲ್ಲಿ ಬಿಜೆಪಿ ಸರ್ಕಾರ ಬೆಂಗಳೂರಿಗೆ ರೂ. 1500 ಕೋಟಿ ಘೋಷಣೆ ಮಾಡಿದ್ದು ಬಿಟ್ಟರೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ.
— Siddaramaiah (@siddaramaiah) May 21, 2022
ಪಾಪ ಮಾಡಿದವರು ಯಾರಪ್ಪ @RAshokaBJP?
1/3ನಮ್ಮ ಸರ್ಕಾರವಿದ್ದಾಗ ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ ರೂ. 1217 ಕೋಟಿ ಅನುದಾನ ನೀಡಿದ್ದೆವು. ಕಳೆದ ಬಜೆಟ್ ನಲ್ಲಿ ಬಿಜೆಪಿ ಸರ್ಕಾರ ಬೆಂಗಳೂರಿಗೆ ರೂ. 1500 ಕೋಟಿ ಘೋಷಣೆ ಮಾಡಿದ್ದು ಬಿಟ್ಟರೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ.
— Siddaramaiah (@siddaramaiah) May 21, 2022
ಪಾಪ ಮಾಡಿದವರು ಯಾರಪ್ಪ @RAshokaBJP?
1/3
ಕಳೆದ ಬಾರಿ ಬಿಬಿಎಂಪಿ ಮೇಯರ್ ಆಗಿದ್ದವರು ಬಿಜೆಪಿಯವರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು ಮೂರು ವರ್ಷ ತುಂಬುತ್ತಾ ಬಂತು. ನೀವೇ ತುಂಬಿಸಿರುವ 40% ಕಮಿಷನ್ ಎಂಬ ಪಾಪದ ಕೊಡ ತಲೆ ಮೇಲಿಟ್ಟುಕೊಂಡು ನಮ್ಮನ್ನು ದೂರಿದ್ರೆ ಹೇಗಪ್ಪಾ ಅಶೋಕ? ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ಎಂಟು ವರ್ಷದಿಂದ ಹಾಡಿದ ರಾಗವನ್ನೇ ರಾಜ್ಯ ಬಿಜೆಪಿ ನಾಯಕರು ಮೂರು ವರ್ಷದಿಂದ ಹಾಡುತ್ತಿದ್ದಾರೆ.ಕೊಟ್ಟ ಕುದುರೆ ಏರಲಾರದವನು ವೀರನೂ ಅಲ್ಲ, ಶೂರನೂ ಅಲ್ಲ ಎಂದು ಲೇವಡಿ ಮಾಡಿದ್ದಾರೆ.
ಇದನ್ನೂ ಓದಿ: ರಾಜ್ಯಸಭೆ, ಪರಿಷತ್ ಟಿಕೆಟ್: ದೆಹಲಿಯಲ್ಲಿ ಬೀಡುಬಿಟ್ಟ ರಾಜ್ಯ ಕೈ ನಾಯಕರು