ETV Bharat / city

ಪರಿಷ್ಕೃತ ಪಠ್ಯಕ್ರಮವನ್ನು ಕಸದ ಬುಟ್ಟಿಗೆ ಎಸೆಯಿರಿ: ಸಿದ್ದರಾಮಯ್ಯ - ವಿಪಕ್ಷ ನಾಯಕ ಸಿದ್ದರಾಮಯ್ಯ

ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ. ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Siddaramaiah
ಸಿದ್ದರಾಮಯ್ಯ
author img

By

Published : Jun 5, 2022, 12:50 PM IST

ಬೆಂಗಳೂರು: ರಾಜ್ಯ ಸರ್ಕಾರದ ಪರಿಷ್ಕೃತ ಪಠ್ಯ ಕ್ರಮವನ್ನು ಕೂಡಲೇ ಕಸದಬುಟ್ಟಿಗೆ ಎಸೆಯಿರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಹಿಂದೂಗಳು ಯಾರು?, ಎಂಬ ವಿಚಾರದ ಅಡಿ ಸರಣಿ ಟ್ವೀಟ್ ಮಾಡಿರುವ ಅವರು, ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಸಚಿವರು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

'ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ನಾರಾಯಣಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ. ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ' ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ ಬಿ.ಸಿ ನಾಗೇಶ್? ಎಂದು ಪ್ರಶ್ನಿಸಿದ್ದಾರೆ.

  • ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ @BCNagesh_bjp ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಸನ್ಮಾನ್ಯ ಸಚಿವರು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು. 1/6#WhoAreHindus

    — Siddaramaiah (@siddaramaiah) June 5, 2022 " class="align-text-top noRightClick twitterSection" data=" ">

ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲವಲ್ಲ?, ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ?, ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ ಬಿ.ಸಿ ನಾಗೇಶ್? ಎಂದು ಕೇಳಿದ್ದಾರೆ.

ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ?, ಅವಮಾನ ಮಾಡಲಾಯಿತೇ?, ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತೇ? ಹಾಗೆಂದು ಹೇಳಿ ಬಿಡಿ ಎಂದಿದ್ದಾರೆ.

  • ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರುವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ @BCNagesh_bjp. 6/6#WhoAreHindus

ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ? ಶಿಕ್ಷಣ ಸಚಿವರೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೋಹಿತ್​ ಚಕ್ರತೀರ್ಥ ಸಮಿತಿ ವಿಸರ್ಜನೆ, ಪರಿಷ್ಕೃತ ಪಠ್ಯದಲ್ಲಿ ಆಕ್ಷೇಪಾರ್ಹವಿದ್ದಲ್ಲಿ ಪರಿಷ್ಕರಣೆಗೆ ಸಿದ್ಧ: ವಿವಾದಕ್ಕೆ ತೆರೆ ಎಳೆದ ಸಿಎಂ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.