ETV Bharat / city

ಕೇಂದ್ರ ಸರ್ಕಾರ ವಿಫಲಗೊಂಡಿದ್ದರೆ ಅದಕ್ಕೆ ನೇರ ಹೊಣೆ ನರೇಂದ್ರ ಮೋದಿ: ಸಿದ್ದರಾಮಯ್ಯ

ನರೇಂದ್ರ ಮೋದಿ ಅವರು ಮೊದಲು ಅಧಿಕಾರಕ್ಕೆ ಬಂದಾಗ 'ಮಿನಿಮಮ್ ಗವರ್ನಮೆಂಟ್​​, ಮ್ಯಾಕ್ಸಿಮಮ್ ಗವರ್ನೆನ್ಸ್' ಎಂಬ ಘೋಷಣೆ ಕೂಗುತ್ತಿದ್ದರು. ಈಗಿನ ಸಚಿವ ಸಂಪುಟದಲ್ಲಿ 77 ಸದಸ್ಯರಿದ್ದಾರೆ. ಇದೇನಾ ಮಿನಿಮಮ್ ಗವರ್ನಮೆಂಟ್​? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

siddaramaiah tweet on cabinet reshuffle
ಸರ್ಕಾರ ವಿಫಲಗೊಂಡಿದ್ದರೆ ಅದಕ್ಕೆ ನೇರ ಹೊಣೆ ನರೇಂದ್ರ ಮೋದಿ: ಸಿದ್ದರಾಮಯ್ಯ
author img

By

Published : Jul 8, 2021, 5:03 PM IST

ಬೆಂಗಳೂರು: ಕೇಂದ್ರ ಸಚಿವ ಸಂಪುಟ ಪುನರ್​ರಚನೆ ಕುರಿತು ಮಾಜಿ ಸಿಎಂ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸಚಿವರ ಕಾರ್ಯನಿರ್ವಹಣೆಯ ಸಂಪುಟ ಪುನರ್​ರಚನೆಯ ಮಾನದಂಡವಾಗಿದ್ದರೆ, ಮೋದಿಯವರನ್ನೇ ಮೊದಲು ಪ್ರಧಾನಿ ಹುದ್ದೆಯಿಂದ ತೆಗೆದು ಹಾಕಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ನೋಟ್ ಬ್ಯಾನ್​ನಿಂದ ಹಿಡಿದು ಕೊರೊನಾ ನಿಯಂತ್ರಣದ ವರೆಗೆ ಈ ಸರ್ಕಾರ ವಿಫಲಗೊಂಡಿದ್ದು, ಅದಕ್ಕೆ ನೇರ ಹೊಣೆ ನರೇಂದ್ರ ಮೋದಿಯವರು ಎಂದಿದ್ದಾರೆ. ಆಂತರಿಕ ಪ್ರಜಾಪ್ರಭುತ್ವವೇ ಇಲ್ಲದ ಏಕವ್ಯಕ್ತಿ ಪ್ರದರ್ಶನವಾಗಿರುವ ಸರ್ಕಾರದಲ್ಲಿ ಸಂಪುಟ ವಿಸ್ತರಣೆಗೆ ಯಾವ ಮಹತ್ವ ಇಲ್ಲ. ಯಾರು ಸಚಿವರಾದರೂ ಅವರೆಲ್ಲರೂ ನಾಮಕಾವಸ್ತೆಗಾಗಿ ಮಾತ್ರ. ಹಣಕಾಸು, ಆರೋಗ್ಯ, ಶಿಕ್ಷಣ ಖಾತೆ ಯಾವುದೇ ಇರಲಿ, ನೀತಿ ನಿರ್ಧಾರಗಳನ್ನು ಪ್ರಕಟಿಸುವುದು ನರೇಂದ್ರ ಮೋದಿ ಅವರೇ ಆಗಿರುವ ಕಾರಣ ಆ ಖಾತೆಗಳ ವೈಫಲ್ಯಕ್ಕೆ ಅವರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಸಚಿವರ ಕಾರ್ಯನಿರ್ವಹಣೆಯೇ ಸಂಪುಟ ಪುನಾರಚನೆಯ ಮಾನದಂಡವಾಗಿದ್ದರೆ ಮೊದಲು @narendramodi ಅವರನ್ನು ಪ್ರಧಾನಿ ಪಟ್ಟದಿಂದ ಕಿತ್ತುಹಾಕಬೇಕು. ನೋಟ್ ಬ್ಯಾನ್ ನಿಂದ ಹಿಡಿದು ಕೊರೊನಾ ನಿಯಂತ್ರಣದ ವರೆಗೆ ಈ ಸರ್ಕಾರ ವಿಫಲಗೊಂಡಿದ್ದರೆ ಅದಕ್ಕೆ ನೇರ ಹೊಣೆ ನರೇಂದ್ರ ಮೋದಿಯವರು. 1/9#FailedReshuffle

    — Siddaramaiah (@siddaramaiah) July 8, 2021 " class="align-text-top noRightClick twitterSection" data=" ">

ಆಗಾಗ ಟಿವಿಗಳಲ್ಲಿ ಕಾಣಿಸಿಕೊಂಡು ಜಾಗಟೆ ಬಡಿದು, ದೀಪ ಹಚ್ಚಿ ಕೊರೊನಾ ವೈರಸ್ ಓಡಿಸಲು ಹೇಳಿದ ಮತ್ತು ಆರೋಗ್ಯ ಸಚಿವರನ್ನು ಬದಿಗೊತ್ತಿ ಎಲ್ಲಾ ನಿರ್ಧಾರಗಳನ್ನು ಕೈಗೊಂಡವರು ಮೋದಿ. ಈಗ ಕೊರೊನಾ ನಿಯಂತ್ರಣದ ವೈಫಲ್ಯಕ್ಕೆ ಡಾ.ಹರ್ಷವರ್ಧನ್ ಎಂಬ ಆರೋಗ್ಯ ಸಚಿವರನ್ನು ಕಿತ್ತುಹಾಕಿದ್ದಾರಂತೆ. ನಿಜವಾಗಿ ಮೋದಿಯವರು ರಾಜೀನಾಮೆ ನೀಡಬೇಕಲ್ಲಾ? ಎಂದಿದ್ದಾರೆ.

ಸಾಧನೆಯೇ ಮಾನದಂಡ?

ಸಾಧನೆಯೇ ಮಾನದಂಡವಾಗಿದ್ದರೆ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಿತ್ತುಹಾಕಬೇಕಿತ್ತಲ್ವಾ? ಆರೋಗ್ಯ ಕ್ಷೇತ್ರಕ್ಕಿಂತಲೂ ಹೆಚ್ಚಿನ ವೈಫಲ್ಯ ಆಗಿರುವುದು ಆರ್ಥಿಕ ಕ್ಷೇತ್ರದಲ್ಲಿ. ನೋಟ್ ಬ್ಯಾನ್, ಜಿಎಸ್ಟಿ, ಕೊರೊನಾ ಪರಿಹಾರ, ಹೀಗೆ ಹಣಕಾಸು ಖಾತೆಗೆ ಸಂಬಂಧಿಸಿದ ವೈಫಲ್ಯಗಳಿಂದಾಗಿಯೇ ದೇಶ ದುಸ್ಥಿತಿಗೆ ಬಂದಿದೆ. ಬಹಳ ಮಂದಿ ಸಚಿವರನ್ನು ಕೈಬಿಟ್ಟಿರುವ ಸುದ್ದಿ ಕೇಳಿಯೇ ಅವರೆಲ್ಲಾ ಸಂಪುಟದಲ್ಲಿದ್ದರೆಂದು ದೇಶದ ಜನರಿಗೆ ಗೊತ್ತಾಗಿದ್ದು. ಇವರಲ್ಲಿ ಬಹಳಷ್ಟು ಮಂದಿ ಹೊಸಬರು. ದೇಶ ಎದುರಿಸುತ್ತಿರುವ ಇಂದಿನ ಸಂಕಷ್ಟದ ಕಾಲದಲ್ಲಿ ಈ ಹೊಸಬರು ಏನು ಮಾಡುತ್ತಾರೋ ಗೊತ್ತಿಲ್ಲ. ಸಾಮಾನ್ಯವಾಗಿ ಅಸಮರ್ಥರು ಅಸಮರ್ಥರನ್ನೇ ಆಯ್ಕೆ ಮಾಡಿಕೊಂಡು ಜೊತೆಯಲ್ಲಿಟ್ಟುಕೊಳ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಆರೋಗ್ಯ ಖಾತೆಯಲ್ಲಿ ಬದಲಾವಣೆಯಾಯ್ತು, ವ್ಯಾಕ್ಸಿನೇಷನ್​ನಲ್ಲಿ ಬದಲಾವಣೆಯಾಗುವುದೇ?: ರಾಹುಲ್

ಮಿನಿಮಂ ಗವರ್ನಮೆಂಟ್?

ನರೇಂದ್ರ ಮೋದಿ ಅವರು ಮೊದಲು ಅಧಿಕಾರಕ್ಕೆ ಬಂದಾಗ 'ಮಿನಿಮಮ್ ಗವರ್ನಮೆಂಟ್​​, ಮ್ಯಾಕ್ಸಿಮಮ್ ಗವರ್ನೆನ್ಸ್' ಎಂಬ ಘೋಷಣೆ ಕೂಗುತ್ತಿದ್ದರು. ಈಗಿನ ಸಚಿವ ಸಂಪುಟದಲ್ಲಿ 77 ಸದಸ್ಯರಿದ್ದಾರೆ. ಇದೇನಾ ಮಿನಿಮಮ್ ಗವರ್ನಮೆಂಟ್​? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದು, ಹೇಳುವುದೊಂದು, ಮಾಡುವುದೊಂದು.ಇದಕ್ಕಾಗಿಯೇ ಮೋದಿಯವರ ಮನೆ ದೇವರೇ ಸುಳ್ಳು ಎಂದು ಹೇಳುತ್ತಿದ್ದೇನೆ. ಕರ್ನಾಟಕದ ಕೇಂದ್ರ ಸಚಿವರಲ್ಲಿ ಹಿಂದುಳಿದ ಜಾತಿಗೆ ಸೇರಿದವರಿಲ್ಲ. ಮೂವರು ಬ್ರಾಹ್ಮಣರು ಹಾಗೂ ಒಕ್ಕಲಿಗ, ಲಿಂಗಾಯತ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ತಲಾ ಒಬ್ಬರು ಸಚಿವರಾಗಿದ್ದಾರೆ. ಯಾವ ಜಾತಿಗೆ ಕೊಟ್ಟರೂ ನನ್ನ ಆಕ್ಷೇಪ ಇಲ್ಲ. ಅರ್ಧಕ್ಕಿಂತ ಹೆಚ್ಚಿನ ಜನಸಂಖ್ಯೆಯ ಸಮುದಾಯಗಳಿಗೆ ಪ್ರಾತಿನಿಧ್ಯ ನಿರಾಕರಿಸುವುದು ಯಾವ ಸಾಮಾಜಿಕ ನ್ಯಾಯ? ಎಂದು ಕೇಳಿದ್ದಾರೆ.

'ಏನೋ ಲಾಭವಾಗದು'

ಕರ್ನಾಟಕದಿಂದ ಸಚಿವರು ಆರಾಗಲಿ, ಹನ್ನೆರಡಾಗಲಿ ಅದರಿಂದ ರಾಜ್ಯಕ್ಕೆ ಏನೂ ಲಾಭವಾಗದು ಎನ್ನುವುದು ಈಗಾಗಲೇ ಸಾಬೀತಾಗಿದೆ. ಹೊಸಬರಲ್ಲಿ ಯಾರೂ ಸಂಪುಟ ದರ್ಜೆಯ ಸಚಿವರಿಲ್ಲ. ಮಹತ್ವದ ಖಾತೆಗಳೂ ಇಲ್ಲ. ಮಹತ್ವದ ಖಾತೆಗಳನ್ನು ಕೊಟ್ಟರೂ ಇವರಿಗೆ ನಿಭಾಯಿಸುವ ಸಾಮರ್ಥ್ಯವೂ ಇಲ್ಲ ಎಂದು ನರೇಂದ್ರ ಮೋದಿ ಅವರಿಗೆ ಗೊತ್ತಾಗಿರಬೇಕು. ಈ ಸಂಪುಟ ವಿಸ್ತರಣೆ, ಪುನರ್​​ ರಚನೆಯಿಂದ ರಾಜ್ಯಕ್ಕೆ ಯಾವ ಲಾಭವೂ ಇಲ್ಲ. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೇಶದ ಪ್ರಧಾನಿ ಎದುರು ಬಾಯಿಬಿಡುವ ಶಕ್ತಿ ಇಲ್ಲ. 25 ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ. ಹೀಗಿರುವಾಗ ಹೊಸದಾಗಿ ಸಚಿವ ಖಾತೆಯ ಕಿರೀಟ ಇಟ್ಟುಕೊಂಡು ಇವರೇನು ಮಾಡಬಹುದು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.