ಬೆಂಗಳೂರು: ಮುಂಬೈನಲ್ಲಿರುವ ಮೈತ್ರಿ ಪಕ್ಷದ ಅತೃಪ್ತ ಶಾಸಕರಿಗೆ ಟ್ವಿಟರ್ ಮೂಲಕ ಸಂದೇಶ ರವಾನಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ನಿಮ್ಮ ಸಮಸ್ಯೆಗಳನ್ನು ಆಲಿಸಿ ತಕ್ಷಣವೇ ಪರಿಹಾರ ನೀಡುತ್ತೇವೆ. ಮಂತ್ರಿಮಂಡಲ ಪುನಾರಚನೆ ಮಾಡುತ್ತಿದ್ದೇವೆ. ರಾಜೀನಾಮೆ ವಾಪಾಸ್ ಪಡೆಯಿರಿ ಎಂದು ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಮತ್ತೊಮ್ಮೆ ತನ್ನ ಪ್ರಯತ್ನದಲ್ಲಿ ವಿಫಲವಾಗಲಿದೆ ಎಂದಿದ್ದಾರೆ.
ಮಾಜಿ ಸಿಎಂ ಸಿದ್ಧರಾಮಯ್ಯ ಕಳೆದ ಒಂದು ಗಂಟೆಯಲ್ಲಿ ಮೂರು ಟ್ವೀಟ್ ಮಾಡಿದ್ದು, ಅವು ಹೀಗಿವೆ.
"ಮಂತ್ರಿ ಸ್ಥಾನದಿಂದ ವಂಚಿತರಾದ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವ ಶಾಸಕರು ಬಿಜೆಪಿಯ ಆಮಿಷಗಳಿಗೆ ಬಲಿಯಾಗದೆ ರಾಜೀನಾಮೆ ವಾಪಸ್ ಪಡೆಯಿರಿ, ನಿಮ್ಮ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹಾರ ಮಾಡುತ್ತೇವೆ ಎಂದು ಪಕ್ಷದ ಪರವಾಗಿ ನಾನು ಮನವಿ ಮಾಡುತ್ತಿದ್ದೇನೆ. ನಾವು ಈಗಾಗಲೇ ಮಂತ್ರಿಮಂಡಲ ಪುನಾರಚನೆ ನಿರ್ಧಾರಕ್ಕೆ ಸಹ ಬಂದಿದ್ದೇವೆ"