ಆನೇಕಲ್: ತಮಿಳುನಾಡಿನ ಹೊಸೂರು ಮತ್ತು ತಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕಾಗಿ ಚಂದಾಪುರ, ಆನೇಕಲ್ ಮಾರ್ಗವಾಗಿ ತಮಿಳುನಾಡಿಗೆ ಕಾಂಗ್ರೆಸ್ ನಾಯಕರು ತೆರಳಿದರು.
ಹೊಸೂರು ವಿಧಾನಸಭಾ ಕ್ಷೇತ್ರದ ಡಿಎಂಕೆ ಅಭ್ಯರ್ಥಿ ವೈ ಪ್ರಕಾಶ್ ಮತ್ತು ತಳಿ ವಿಧಾನಸಭಾ ಕ್ಷೇತ್ರದ ಸಿಪಿಐ ಅಭ್ಯರ್ಥಿ ಟಿ. ರಾಮಚಂದ್ರರಿಗೆ ಬೆಂಬಲ ಸೂಚಿಸಿ, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವ ಉದ್ದೇಶದಿಂದ ಸಿದ್ದರಾಮಯ್ಯ, ಜಮೀರ್ ಅಹ್ಮದ್, ರೇವಣ್ಣ ಮತ್ತು ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ತಮಿಳುನಾಡಿಗೆ ತೆರಳಿದರು.
ಇನ್ನು ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡರಿಗೆ ಸೂರ್ಯನಗರದಲ್ಲಿ ಆನೇಕಲ್ ಶಾಸಕ ಶಿವಣ್ಣ ಹಾಗೂ ನೂರಾರು ಜನ ಕಾರ್ಯಕರ್ತರು, ಮುಖಂಡರು ಭವ್ಯ ಸ್ವಾಗತ ಕೋರಿದರು.