ETV Bharat / city

ವಿವಿಧ ಸಮುದಾಯಗಳು ಪಡುತ್ತಿರುವ ಕಷ್ಟ ಸರ್ಕಾರದ ಕಣ್ಣಿಗೆ ಬಿದ್ದಿಲ್ಲ: ಸಿದ್ದರಾಮಯ್ಯ

ರಾಜ್ಯ ಸರ್ಕಾರಕ್ಕೆ ಹೋಟೆಲ್ ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್​ಗಳು ಸೇರಿ ಇನ್ನಿತರೆ ನಾನಾ ಸಾಮುದಾಯಗಳು ಪಡುತ್ತಿರುವ ಕಷ್ಟ ಕಣ್ಣಿಗೆ ಬಿದ್ದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

Siddu letter to cm
ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ
author img

By

Published : Jun 23, 2021, 2:05 PM IST

ಬೆಂಗಳೂರು: ಹೋಟೆಲ್, ರೆಸಾರ್ಟ್, ವಸತಿಗೃಹಗಳ ಕೊರೊನಾ ಕಾಲದ ವಿದ್ಯುತ್, ನೀರಿನ ಶುಲ್ಕವನ್ನು ಮನ್ನಾ ಮಾಡುವುದು ಸೇರಿದಂತೆ ಈ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವನ್ನು ನೀಡಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸರ್ಕಾರಕ್ಕೆ ಹೋಟೆಲ್ ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್​ಗಳು ಸೇರಿ ಇನ್ನಿತರೆ ನಾನಾ ಸಾಮುದಾಯಗಳು ಪಡುತ್ತಿರುವ ಕಷ್ಟ ಕಣ್ಣಿಗೆ ಬಿದ್ದಿಲ್ಲ. ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಸಾವಿರಾರು ಹೋಟೆಲ್‍ಗಳು ಬಂದ್ ಆಗಿ ಮಾರಾಟಕ್ಕಿವೆ. ಹೋಟೆಲ್, ಕ್ಯಾಂಟೀನ್ ಕಟ್ಟಡಗಳ ಬಾಡಿಗೆ ಕಟ್ಟಲಾಗದೆ ಮಾಲೀಕರು ಪರಿತಪಿಸುತ್ತಿದ್ದಾರೆ. ಬ್ಯಾಂಕ್ ಸಾಲದ ಬಡ್ಡಿ ಬೆಳೆಯುತ್ತಲೇ ಇರುವ ಕಾರಣ ಸಣ್ಣ ಮತ್ತು ಮಧ್ಯಮ ಹೋಟೆಲ್‍ಗಳ ಮಾಲೀಕರು ಮಾತ್ರವಲ್ಲ, ದೊಡ್ಡ ಹೋಟೆಲ್‍ಗಳ ಮಾಲಿಕರೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದಿದ್ದಾರೆ.

ಪರದಾಡುವ ಸ್ಥಿತಿ

ಮತ್ತೊಂದು ಕಡೆ ಹೋಟೆಲ್ ಕಾರ್ಮಿಕರು ಎರಡು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಇದೆ. ಬೆಂಗಳೂರು ನಗರ ಮತ್ತು ಅಕ್ಕಪಕ್ಕದ ನಾಲ್ಕೈದು ಜಿಲ್ಲೆಗಳಲ್ಲೇ 20 ಸಾವಿರಕ್ಕೂ ಅಧಿಕ ಮಂದಿ ಹೋಟೆಲ್ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಕುಟುಂಬ ನಿರ್ವಹಣೆ ಮಾಡಲಾಗದೆ ಸಂಕಷ್ಟದಲ್ಲಿದ್ದಾರೆ. ಈ ಕಾರ್ಮಿಕರ ಮಕ್ಕಳು ಶಿಕ್ಷಣ ತೊರೆಯಬೇಕಾದ ಸ್ಥಿತಿ ಬಂದೊದಗಿದೆ. ಇಡೀ ಸೇವಾ ವಲಯವೇ ಸ್ಥಗಿತಗೊಂಡಿರುವುದರಿಂದ ಪ್ರವಾಸೋದ್ಯಮವನ್ನೆ ನೆಚ್ಚಿಕೊಂಡಿದ್ದ ವಸತಿ ಗೃಹಗಳ ಮಾಲೀಕರು ಮತ್ತು ಕೆಲಸಗಾರರೂ ದುಡಿಮೆ ಇಲ್ಲದೆ ಕಂಗಾಲಾಗಿದ್ದಾರೆ. ಶುಭ ಕಾರ್ಯಗಳು ನಡೆಯದಿರುವುದರಿಂದ, ಧಾರ್ಮಿಕ ಕಾರ್ಯಗಳು, ಹಬ್ಬಗಳ ಆಚರಣೆಗೂ ಅವಕಾಶ ಇಲ್ಲವಾಗಿದ್ದರಿಂದ ಫೋಟೋಗ್ರಾಫರ್​ಗಳು, ಡೆಕೊರೇಟರ್​ಗಳು, ದೀಪದ ಅಲಂಕಾರ ಮಾಡುವ ಕೆಲಸಗಾರರು ಸೇರಿ ಪ್ರತಿಯೊಂದು ದುಡಿಯುವ ವರ್ಗದ ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುತ್ತಿವೆ ಎಂಬುದನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ.

ನೆರವು ಸಿಕ್ಕಿಲ್ಲ
ಇವರೆಲ್ಲರ ಸಂಕಷ್ಟ ಮತ್ತು ನೋವುಗಳು ಸರ್ಕಾರಕ್ಕೆ ಕಾಣಬೇಕಿತ್ತು. ಸರ್ಕಾರ ಕುರುಡಾಗಿರುವುದರಿಂದ ಈ ಶ್ರಮಿಕ ವರ್ಗಗಳೇ ಸ್ವತಃ ಸರ್ಕಾರವನ್ನು ಇನ್ನಿಲ್ಲದಂತೆ ಒತ್ತಾಯಿಸುತ್ತಿದ್ದರೂ ಅವರಿಗೆ ಸೂಕ್ತವಾದ ನೆರವು ಸಿಕ್ಕಿಲ್ಲ. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿದ ಪ್ಯಾಕೇಜ್‍ನಲ್ಲಿ ಅರ್ಧದಷ್ಟು ಕೂಡ ತಲುಪಬೇಕಾದವರಿಗೆ ತಲುಪಲಿಲ್ಲ. ಕಾರ್ಮಿಕ ನಿಧಿ ಹೊರತುಪಡಿಸಿ ಕೇವಲ 800-900 ಕೋಟಿಯಷ್ಟು ಹಣ ನೆಪಮಾತ್ರಕ್ಕೆ ಹಂಚಿಕೆಯಾಗಿದೆ. ಎರಡನೇ ಅಲೆ ಸಂದರ್ಭದಲ್ಲೂ ಸರ್ಕಾರ ಘೋಷಿಸಿರುವ 2 ಸಾವಿರ ಕೋಟಿ ರೂ.ಗಳ ಪ್ಯಾಕೇಜ್​ ರಾಜ್ಯದ ಜನರಿಗೆ ಮಾಡಿರುವ ಅವಮಾನ ಎಂದು ಮತ್ತೊಮ್ಮೆ ಹೇಳಬೇಕಾಗಿದೆ. ಈ 2 ಸಾವಿರ ಕೋಟಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಘೋಷಿಸಿರುವ ಅವರದೇ ಹಣದ ಪ್ಯಾಕೇಜ್​ ಬಿಟ್ಟರೆ ಉಳಿಯುವುದು ಕೇವಲ 1,500 ಕೋಟಿ ರೂ. ಮಾತ್ರ. ಅತಿ ಕಡಿಮೆ ಪ್ಯಾಕೇಜ್​ ಘೋಷಿಸಿದ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲಿಗೆ ನಿಂತಿದೆ ಎಂಬ ಆರೋಪದಿಂದ ಹೊರಬರಬೇಕಾದರೆ ರಾಜ್ಯ ಸರ್ಕಾರ ಈಗಲಾದರೂ ಉತ್ತಮ ಪ್ಯಾಕೇಜನ್ನು ಘೋಷಿಸಿ, ಅಕ್ಕಪಕ್ಕದ ರಾಜ್ಯಗಳ ಮುಂದೆ ಮರ್ಯಾದೆ ಉಳಿಸಿಕೊಳ್ಳಬೇಕಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪರಿಹಾರ ಘೋಷಿಸಿ
ಎಲ್ಲ ಬಿಪಿಎಲ್ ಕುಟುಂಬಗಳಿಗೆ ತಲಾ 10,000 ರೂ.ಗಳನ್ನು ಘೋಷಿಸಬೇಕೆಂದು ಮತ್ತೊಮ್ಮೆ ಒತ್ತಾಯಿಸುತ್ತಿದ್ದೇನೆ. ಜೊತೆಗೆ ಈ ಕೆಳಕಂಡ ವಲಯಗಳ ಜನರೂ ಸಹ ಉಳಿದವರಂತೆ ತೀವ್ರ ಬಿಕ್ಕಟ್ಟಿನಲ್ಲಿದ್ದಾರೆ. ಆದ್ದರಿಂದ ಹೋಟೆಲ್, ವಸತಿ ಗೃಹ, ಫೋಟೋಗ್ರಾಫರ್​ಗಳು, ಅಲಂಕಾರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ತಕ್ಷಣ ಸೂಕ್ತ ಪ್ಯಾಕೇಜ್ ಘೋಷಣೆ ಮಾಡಬೇಕು. ಹೋಟೆಲ್, ಕ್ಯಾಂಟೀನ್ ಮಾಲೀಕರ ಬ್ಯಾಂಕ್ ಸಾಲ ವಸೂಲಾತಿಯನ್ನು ಮುಂದೂಡಬೇಕು. ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು. ಜೊತೆಗೆ ಎಲ್ಲಾ ಉತ್ಪಾದಕ ಮತ್ತು ಸೇವಾ ವಲಯಗಳ ಜನರು ಮಾಡಿರುವ ಸಾಲದ ಮೇಲಿನ ಬಡ್ಡಿಯನ್ನೂ ಮನ್ನಾ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಫೋನ್ ಟ್ಯಾಪಿಂಗ್ ಆರೋಪ​ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಶಾಸಕ ಅರವಿಂದ್ ಬೆಲ್ಲದ್​ಗೆ ನೋಟಿಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.