ETV Bharat / city

ಕಾಂಗ್ರೆಸಿಗರು ಗೂಂಡಾ ಸಂಸ್ಕೃತಿಯವರು ಎಂದಿದ್ದ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ - ಬಿಜೆಪಿ ವಿರುದ್ದ ಸಿದ್ದರಾಮಯ್ಯ ಟ್ವೀಟ್

ರಾಜ್ಯ ಬಿಜೆಪಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಟ್ವೀಟ್​ ಸಮರ ಮುಂದುವರೆದಿದೆ.

ಸಿದ್ದರಾಮಯ್ಯ
author img

By

Published : Oct 12, 2019, 3:30 PM IST

ಬೆಂಗಳೂರು: ಬಿಜೆಪಿ ಪಕ್ಷ ತಮ್ಮ ವಿರುದ್ಧ ಮಾಡಿದ್ದ ಟೀಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

tweet
ಬಿಜೆಪಿ ಟ್ವೀಟ್​​

ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸಿದ್ದರಾಮಯ್ಯ ಅವರನ್ನು ಲೇವಡಿ ಮಾಡಿ, ಈ ವಿಡಿಯೋ ನೋಡಿದವರಿಗೆ ಕಾಂಗ್ರೆಸ್ ಹಾಗೂ ಗೂಂಡಾ ಸಂಸ್ಕೃತಿಗೂ ಯಾವುದೇ ವ್ಯತ್ಯಾಸವಿಲ್ಲ ಎಂಬುದರ ಅರಿವಾಗುತ್ತದೆ ಎಂದು ಹೇಳಿ ಸಿದ್ದರಾಮಯ್ಯ ಆಡಿದ ಮಾತಿನ ವಿಡಿಯೋ ತುಣುಕನ್ನು ಲಗತ್ತಿಸಿತ್ತು. ಇದರ ವಿರುದ್ಧ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಸ್ಪೀಕರ್ ಅವರು ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ. ಸ್ಪೀಕರ್ ಸದನದಲ್ಲಿ ಅಂಪೈರ್ ರೀತಿ ಇರಬೇಕು, ಅವರೇ ಆಟಗಾರರ ರೀತಿಯಲ್ಲಿ ಮೈದಾನಕ್ಕೆ ಇಳಿದರೆ ನಾವು ಆಟಗಾರರ ರೀತಿಯಲ್ಲಿಯೇ ಎದುರಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

tweet
ಸಿದ್ದರಾಮಯ್ಯರ ಟ್ವೀಟ್​

ಇದಕ್ಕೆ ಮತ್ತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಸ್ಪೀಕರ್​ರವರು ಸದನದಲ್ಲಿ ಜವಾಬ್ದಾರಿಯುತ ಅಂಪೈರ್ ರೀತಿಯಲ್ಲಿಯೇ ನಡೆದುಕೊಂಡಿದ್ದಾರೆ. ನೀವು ನಿಮ್ಮ ದುರ್ವರ್ತನೆಯನ್ನು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹೋಲಿಸಿ ಅವರಿಗೆ ಅಪಮಾನ ಮಾಡಿದ್ದೀರಿ. ಇನ್ನಾದರೂ ನೀವು ಕಾಂಗ್ರೆಸ್ ಸಂಸ್ಕೃತಿಯನ್ನು ಬದಿಗಿಟ್ಟು ಜವಾಬ್ದಾರಿಯುತ ವಿರೋಧ ಪಕ್ಷದ ನಾಯಕರಾಗಿ ನಡೆದುಕೊಳ್ಳುವಿರಿ ಎಂದು ಆಶಿಸುತ್ತೇವೆ ಎಂದು ಟಾಂಗ್ ನೀಡಿದೆ.

ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಸ್ಪೀಕರ್ ಕಾಗೇರಿಯವರ ಜೊತೆ ನನಗೆ ವೈಯಕ್ತಿಕ ಜಗಳವೇನಿಲ್ಲ. ವಿಧಾನಮಂಡಲದ ಶಿಷ್ಟಾಚಾರ-ನಡವಳಿಕೆಗಳ ಬಗ್ಗೆ ನನಗೂ ತಿಳಿದಿದೆ. ಆದರೆ ಅಧಿಕಾರ ವಹಿಸಿಕೊಂಡ ಕೂಡಲೇ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಿದ ಸ್ಪೀಕರ್, ಮೊದಲ ದಿನದಿಂದಲೇ ಬಿಜೆಪಿ ಸದಸ್ಯರ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ, ಇದು ಖಂಡನೀಯ ಎಂದು ಟ್ವೀಟ್​ ಮಾಡಿದ್ದು, ಇವರಿಬ್ಬರ ಮಧ್ಯೆ ಟ್ವೀಟ್​ ಸಮರ ಮುಂದುವರೆದಿದೆ.

Intro:newsBody:ನಮ್ಮನ್ನು ಗೂಂಡಾ ಸಂಸ್ಕೃತಿಯವರು ಎಂದಿದ್ದ ಬಿಜೆಪಿ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಪಕ್ಷ ತಮ್ಮ ವಿರುದ್ಧ ಮಾಡಿದ್ದ ಪ್ರೀತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸಿದ್ದರಾಮಯ್ಯ ಅವರನ್ನು ಲೇವಡಿ ಮಾಡಿ, ಈ ವಿಡಿಯೋ ನೋಡಿದವರಿಗೆ ಕಾಂಗ್ರೆಸ್ ಹಾಗೂ ಗೂಂಡಾ ಸಂಸ್ಕೃತಿಗೂ ಯಾವುದೇ ವ್ಯತ್ಯಾಸವಿಲ್ಲ ಎಂಬುದರ ಅರಿವಾಗುತ್ತದೆ ಎಂದು ಹೇಳಿ ಸಿದ್ದರಾಮಯ್ಯ ಸಾಧನದಲ್ಲಿ ಆಡಿದ ಮಾತಿನ ವಿಡಿಯೋ ತುಣುಕನ್ನು ಲಗತ್ತಿಸಿತ್ತು.
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಎಂದು ಟ್ವೀಟ್ ಮಾಡಿ, ಸ್ಪೀಕರ್ ಅವರು ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ. ಸ್ಪೀಕರ್ ಸದನದಲ್ಲಿ ಅಂಪೈರ್ ರೀತಿ ಇರಬೇಕು, ಅವರೇ ಆಟಗಾರರ ರೀತಿಯಲ್ಲಿ ಮೈದಾನಕ್ಕೆ ಇಳಿದರೆ ನಾವು ಆಟಗಾರರ ರೀತಿಯಲ್ಲಿಯೇ ಎದುರಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.
ಸ್ಪೀಕರ್ ಕಾಗೇರಿಯವರ ಜೊತೆ ನನಗೆ ವೈಯಕ್ತಿಕ ಜಗಳವೇನಿಲ್ಲ. ವಿಧಾನಮಂಡಲದ ಶಿಷ್ಟಾಚಾರ-ನಡವಳಿಕೆಗಳ ಬಗ್ಗೆ ನನಗೂ ತಿಳಿದಿದೆ.
ಆದರೆ ಅಧಿಕಾರ ವಹಿಸಿಕೊಂಡ ಕೂಡಲೇ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಿದ ಸ್ಪೀಕರ್, ಮೊದಲ ದಿನದಿಂದಲೇ ಬಿಜೆಪಿ ಸದಸ್ಯರ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಖಂಡನೀಯ ಎಂದಿದ್ದಾರೆ.
ಇದಕ್ಕೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು ಭಯ ಪಕ್ಷಗಳ ನಡುವಿನ ಟ್ವೀಟ್ ವಾರ್ ಇನ್ನಷ್ಟು ಮುಂದುವರಿಯುವ ಲಕ್ಷಣವನ್ನು ತೋರಿಸುತ್ತಿದೆ.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.