ETV Bharat / city

ಕನ್ನಡಿಗ ವಿದ್ಯಾರ್ಥಿಗಳನ್ನು ವಾಪಸು ಕರೆತರಲು ಅಗತ್ಯ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ

ಉಕ್ರೇನ್ ಮತ್ತು ರಷ್ಯಾ ನಡುವಿನ ಸಂಘರ್ಷದಿಂದಾಗಿ ಉಕ್ರೇನಿನಲ್ಲಿ ಸಿಲುಕಿರುವ ಕನ್ನಡಿಗರನ್ನು ಜೊತೆಗೆ ವಿದ್ಯಾರ್ಥಿಗಳನ್ನು ಕರೆತರಲು ವಿಶೇಷ ಅಧಿಕಾರಿಯನ್ನು ನೇಮಿಸುವಂತೆ ಸಿದ್ದರಾಮಯ್ಯ ಸಿಎಂಗೆ ಸಲಹೆ ನೀಡಿದ್ದಾರೆ.

siddaramayya-tweet-to-bring-kannadigas-from-ukrein
ಸಿದ್ದರಾಮಯ್ಯ
author img

By

Published : Feb 25, 2022, 1:05 PM IST

ಬೆಂಗಳೂರು: ಉಕ್ರೇನ್-ರಷ್ಯಾ ನಡುವಿನ ಸಂಘರ್ಷದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಜನರನ್ನು ಮುಖ್ಯವಾಗಿ ವಿದ್ಯಾರ್ಥಿಗಳನ್ನು ವಾಪಸು ಕರೆತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಅವರ ಕುಟುಂಬದವರನ್ನು ಸಂಪರ್ಕಿಸಿ ಅವರಲ್ಲಿ ಭರವಸೆ ತುಂಬಬೇಕು. ಯುಕ್ರೇನ್-ರಷ್ಯಾ ಸಂಘರ್ಷ ಅಂತಾರಾಷ್ಟ್ರೀಯ ವಿದ್ಯಮಾನವಾಗಿರುವ ಕಾರಣ ಕೇಂದ್ರ ಸರ್ಕಾರದ ನೆರವು-ಸಹಕಾರ ಅಗತ್ಯವಾದರೂ ಅವರ ಮೇಲಷ್ಟೇ ಜವಾಬ್ದಾರಿವಹಿಸಿ ಬಿಟ್ಟುಬಿಡಬಾರದು ಎಂದು ಸಲಹೆ ನೀಡಿದ್ದಾರೆ.

ಈ ಬಿಕ್ಕಟ್ಟು ಪರಿಹಾರವಾಗುವವರೆಗೆ ಇದರ ನಿರ್ವಹಣೆಗೆ ಸಿಎಂ ವಿಶೇಷ ಅಧಿಕಾರಿಯನ್ನು ನೇಮಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಡಿಯೋ: ರಷ್ಯಾ ಸಮರ ವಿಮಾನ ಹೊಡೆದುರುಳಿಸಿದ ಉಕ್ರೇನ್‌; ಕಟ್ಟಡಕ್ಕೆ ಅಪ್ಪಳಿಸಿ ಅಗ್ನಿ ಅವಘಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.