ದೇವನಹಳ್ಳಿ : ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಹಿನ್ನೆಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣ ಬೆಳೆಸಿದರು. ರಾಜ್ಯ ರಾಜಕೀಯ ಬಗ್ಗೆ ಚರ್ಚಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರನ್ನು ದೆಹಲಿಗೆ ಬರುವಂತೆ ಆಹ್ವಾನಿಸಿದ್ದರು.
ಹೈಕಮಾಂಡ್ ಆಹ್ವಾನದ ಹಿನ್ನೆಲೆ ಇಂದು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಿದರು. ಸಿದ್ದರಾಮಯ್ಯ ಜೊತೆ ಶಾಸಕರಾದ ಜಮೀರ್ ಅಹ್ಮದ್ ಖಾನ್, ಭೈರತಿ ಸುರೇಶ್ ಸಹ ಇದ್ದರು.
ಡಿಕೆಶಿ ಬಿಟ್ಟು ಸಿದ್ದರಾಮಯ್ಯ ಪ್ರಯಾಣ
ಇಬ್ಬರೂ ನಾಯಕರು ಒಂದೇ ಸ್ಥಳಕ್ಕೆ, ಒಂದೇ ಉದ್ದೇಶದಿಂದ ಹೊರಟಿದ್ದರೂ ಸಹ ಸಿದ್ದರಾಮಯ್ಯ ಅವರು ಒಂದು ಗಂಟೆ ಮುಂಚಿತವಾಗಿ ದೆಹಲಿಗೆ ಪ್ರಯಾಣ ಬೆಳೆಸಿದರು. 7:40ಕ್ಕೆ ಡಿ ಕೆ ಶಿವಕುಮಾರ್ ತೆರಳಿದ್ದಾರೆ.