ETV Bharat / city

ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆ ಬಗ್ಗೆ ಮಹತ್ವ ನಿರ್ಧಾರ: ಜಗದೀಶ್‌ ಶೆಟ್ಟರ್‌ - ನೂತನ ಕೈಗಾರಿಕಾ ನೀತಿ

ಕೈಗಾರಿಕೋದ್ಯಮಿಗಳ ಹಾಗೂ ಕೈಗಾರಿಕಾ ಸಂಸ್ಥೆಗಳ ಪ್ರಮುಖ ಬೇಡಿಕೆಯಾಗಿದ್ದ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆಯ ಕುರಿತು ರಾಜ್ಯ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ.

jagdish Shettar
jagdish Shettar
author img

By

Published : Dec 21, 2019, 7:01 PM IST

ಬೆಂಗಳೂರು : ಕೈಗಾರಿಕೋದ್ಯಮಿಗಳ ಹಾಗೂ ಕೈಗಾರಿಕಾ ಸಂಸ್ಥೆಗಳ ಪ್ರಮುಖ ಬೇಡಿಕೆಯಾಗಿದ್ದ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆಯ ಕುರಿತು ರಾಜ್ಯ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ.

ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಸುದ್ದಿಗೋಷ್ಠಿ

ಖನಿಜ ಭವನದಲ್ಲಿ ಇಂದು ಗ್ರಾಮೀಣಾಭಿವೃದ್ದಿ, ನಗರಾಭಿವೃದ್ದಿ, ಕೈಗಾರಿಕಾ ಇಲಾಖೆ ಹಾಗೂ ಇನ್ನಿತರೆ ಪ್ರಮುಖ ಇಲಾಖೆಗಳ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರು, ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ನಗರ ಪ್ರದೇಶಗಳಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಕೈಗಾರಿಕೆಗಳಿಗೆ ಏಕರೂಪದ ತೆರಿಗೆ ಸಂಗ್ರಹಣೆ ಮಾಡುವ ನಿಟ್ಟಿನಲ್ಲಿ ಹೊಸ ನೀತಿಯನ್ನು ರೂಪಿಸಲಾಗುವುದು ಎಂದು ತಿಳಿಸಿದರು.

ನಗರಸಭೆ, ಪುರ ಸಭೆ, ಕಾರ್ಪೋರೇಷನ್‌, ಗ್ರಾಮಪಂಚಾಯಿತಿಗಳ ಮೂಲಕ ತೆರಿಗೆ ಸಂಗ್ರಹಕ್ಕೆ ಇರುವ ಕ್ರಮಗಳಲ್ಲಿ ಬಹಳಷ್ಟು ಗೊಂದಲಗಳಿದ್ದವು. ಇವುಗಳನ್ನು ಸರಿಪಡಿಸುವಂತೆ ಕೊರಿ ಕೈಗಾರಿಕೋದ್ಯಮಿಗಳು ಹಾಗೂ ಕೈಗಾರಿಕಾ ಸಂಸ್ಥೆಗಳು ಮನವಿ ನೀಡಿದ್ದವು. ಈ ಮನವಿಯ ಹಿನ್ನಲೆ ಹಾಗೂ ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ದಿಗೆ ಬೇಕಾಗಿರುವ ಸವಲತ್ತುಗಳನ್ನು ನೀಡುವ ದೃಷ್ಟಿಯಿಂದ ರಾಜ್ಯಾದ್ಯಂತ ಏಕರೂಪದ ತೆರಿಗೆ ಸಂಗ್ರಹಣೆಗೆ ಅಗತ್ಯವಿರುವ ನೀತಿಯನ್ನು ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅನೇಕ ಕಡೆ ಭೂಮಿ ಹಸ್ತಾಂತರವಾಗದೇ ಕೈಗಾರಿಕೆಗಳಿಗೆ ತೆರಿಗೆ ಹಾಕುವುದು ಸರಿಯಲ್ಲ ಎನ್ನುವ ನಿರ್ಧಾರವನ್ನು ತಗೆದುಕೊಳ್ಳಲಾಗಿದೆ. ಈ ಬಗ್ಗೆ ಎಲ್ಲಾ ಇಲಾಖೆಯಗಳು ಸಹಮತ ವ್ಯಕ್ತಪಡಿಸಿದ್ದಾರೆ. ಕೆಲವು ಕಡೆ ಇನ್ನೂ ಅಧಿಕೃತವಾಗಿ ಹಸ್ತಾಂತರವಾಗದೇ ಇರುವ ಕೈಗಾರಿಕೆಗಳ ಮೇಲೆ ಹಾಕಿರುವ ತೆರಿಗೆ ಪ್ರಮಾಣ ಬಹಳ ಹೆಚ್ಚಾಗಿದೆ. ಇದರ ಪರೀಶೀಲನೆಯ ಬಗ್ಗೆ ಕೂಲಂಕುಷವಾದ ಚರ್ಚೆ ನಡೆದಿದ್ದು, ಸದ್ಯದಲ್ಲೇ ಸಚಿವ ಸಂಪುಟದ ಮುಂದೆ ನೂತನ ನೀತಿಯ ಪ್ರಸ್ತಾಪವನ್ನು ಇರಿಸಲಾಗುವುದು ಎಂದು ಹೇಳಿದರು.

ನೂತನ ಕೈಗಾರಿಕಾ ನೀತಿ :

ರಾಜ್ಯದ ಹೊಸ ಕೈಗಾರಿಕಾ ನೀತಿಯು ಅಂತಿಮ ಹಂತದಲ್ಲಿದೆ. ಈಗಾಗಲೇ ಹಲವಾರು ಬಾರಿ ಕೈಗಾರಿಕೋದ್ಯಮಿಗಳು ಹಾಗೂ ಕೈಗಾರಿಕಾ ಸಂಘ, ಸಂಸ್ಥೆಗಳ ಜೊತೆ ಕೂಲಂಕುಷವಾದ ಚರ್ಚೆಯಾಗಿದೆ. ಆದಷ್ಟು ಬೇಗ ಅಗತ್ಯವಿರುವ ಇಲಾಖೆಗಳ ಒಪ್ಪಿಗೆಯನ್ನು ಪಡೆದುಕೊಳ್ಳಲಾಗುವುದು. ನಂತರ ಸಚಿವ ಸಂಪುಟದ ಮುಂದೆ ಇದನ್ನು ತರಲಾಗುವುದು. ರಾಜ್ಯದ ಟೂ ಟಯರ್ ನಗರಗಳಲ್ಲಿ ಕೈಗಾರಿಕೆಗಳನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಬಹಳಷ್ಟು ಕಾರ್ಯಕ್ರಮಗಳನ್ನು ನಾನು ಸಚಿವನಾಗಿ ಹಮ್ಮಿಕೊಂಡಿದ್ದೇನೆ. ಮೊದಲ ಹಂತವಾಗಿ ಹುಬ್ಬಳ್ಳಿಯಲ್ಲಿ 'ಇನ್‌ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ' ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಿದ್ದೇವೆ. ಫೆಬ್ರವರಿ ಎರಡನೇ ವಾರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಮುಂದಿನ ಹಂತದಲ್ಲಿ ಬೆಳಗಾವಿ, ಗುಲ್ಬರ್ಗಾ, ಮೈಸೂರು, ದಾವಣಗೆರೆ ಹಾಗೂ ಶಿವಮೊಗ್ಗದಲ್ಲಿ ಹೂಡಿಕೆದಾರರ ಸಮಾವೇಶವನ್ನು ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ವಿಮಾನ ನಿಲ್ದಾಣಗಳು ಹೆಚ್ಚಾಗಿವೆ. ಇದು ಕೈಗಾರಿಕೋದ್ಯಮಿಗಳು ಬೆಂಗಳೂರು ಹೊರತುಪಡಿಸಿ ಇತರೇ ಜಿಲ್ಲೆಗಳಲ್ಲೂ ಹೂಡಿಕೆ ಮಾಡಲು ಚಿಂತಿಸುವಂತೆ ಮಾಡಿದೆ. ರಾಜ್ಯದಲ್ಲಿ ಹೂಡಿಕೆಯ ವಾತಾವರಣ ಬದಲಾಗಿದೆ. ಈಗಾಗಲೇ ಹೈದರಾಬಾದ್‌, ಮಹಾರಾಷ್ಟ್ರ ಹಾಗೂ ಇನ್ನಿತರೆ ರಾಜ್ಯಗಳ ಕೈಗಾರಿಕೋದ್ಯಮಿಗಳು ನಮ್ಮ ಜೊತೆ ಚರ್ಚೆ ನಡೆಸಿದ್ದು, ಬೆಂಗಳೂರು ಹೊರತು ಪಡಿಸಿ ಇತರೆ ಜಿಲ್ಲೆಗಳಲ್ಲಿ ಕೈಗಾರಿಕೆಯನ್ನು ಪ್ರಾರಂಭಿಸಲು ಮುಂದಾಗಿದ್ದಾರೆ. ಇವರಿಗೆ ಅಗತ್ಯವಿರುವ ಅನುಕೂಲತೆಗಳನ್ನು ರಾಜ್ಯ ಸರ್ಕಾರ ಮಾಡಿಕೊಡುತ್ತಿದೆ ಎಂದು ಹೇಳಿದರು.

ಜನವರಿಯಲ್ಲಿ ನಡೆಯಬೇಕಾಗಿದ್ದ ರಾಜ್ಯ ಹೂಡಿಕೆದಾರರ ಸಮಾವೇಶದ ನೂತನ ದಿನಾಂಕ ನಿಗದಿಯ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳ ಜೊತೆಯಲ್ಲಿ ಚರ್ಚೆ ನಡೆಸಿದ್ದೇನೆ. ಮುಖ್ಯಮಂತ್ರಿಗಳು ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ತಿಳಿಸಿದ್ದು, ಮುಂದಿನ ಹೂಡಿಕೆದಾರರ ಸಮಾವೇಶದ ದಿನಾಂಕವನ್ನ ಸದ್ಯದಲ್ಲೇ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಡಿಸೆಂಬರ್‌ 23 ಕ್ಕೆ ಮುಂಬೈನಲ್ಲಿ ರೋಡ್‌ ಶೋ:

ಇನ್‌ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಹೂಡಿಕೆದಾರರನ್ನು ಸೆಳೆಯುವ ನಿಟ್ಟಿನಲ್ಲಿ ಸೋಮವಾರದಂದು ಮುಂಬಯಿಯಲ್ಲಿ ರೋಡ್‌ ಶೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹೈದರಾಬಾದ್‌, ಚೆನ್ನೈ ಸೇರಿದಂತೆ ಇನ್ನಿತರೆ ನಗರಗಳಲ್ಲೂ ರೋಡ್‌ ಶೋವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತಾ ಮಾತನಾಡಿ, ಕರ್ನಾಟಕ ರಾಜ್ಯ ಮೊದಲಿನಿಂದಲೂ ಕೈಗಾರಿಕೆಗಳಿಗೆ ಪೂರಕವಾದ ವಾತಾವರಣ ಹೊಂದಿದೆ. ರಾಜ್ಯದಲ್ಲಿ ಇನ್ನೂ ಹೆಚ್ಚಿನ ಹೂಡಿಕೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನೂತನ ಕೈಗಾರಿಕಾ ನೀತಿ, ಎರಡನೇ ಹಂತದ ಜಿಲ್ಲೆಗಳಲ್ಲಿ ಹೂಡಿಕೆಯನ್ನು ಹೆಚ್ಚಿಸಲು ರೋಡ್‌ ಶೋ ಗಳನ್ನು ನಡೆಸಲಾಗುತ್ತಿದೆ. ಮುಂಬೈಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಇಡೀ ದಿನ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್‌ ಕೃಷ್ಣ ಮಾತನಾಡಿ, ಟಾಟಾ ಗ್ರೂಪ್‌, ಮಹಿಂದ್ರಾ, ಹಿಂದೂಜಾ ಗ್ರೂಫ್‌ ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳ ಮುಖ್ಯಸ್ಥರ ಜೊತೆ ಸಭೆಯನ್ನು ನಿಗದಿಪಡಿಸಲಾಗಿದೆ. ರಾಜ್ಯದಲ್ಲಿರುವ ಕೈಗಾರಿಕಾ ಅನುಕೂಲಕರ ಪರಿಸ್ಥಿತಿಯನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದರು.

Intro:ಬೆಂಗಳೂರು : ಕೈಗಾರಿಕೋದ್ಯಮಿಗಳು ಹಾಗೂ ಕೈಗಾರಿಕಾ ಸಂಸ್ಥೆಗಳ ಪ್ರಮುಖ ಬೇಡಿಕೆಯಾಗಿದ್ದ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆಯ ಬಗ್ಗೆ ರಾಜ್ಯ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ. Body:ಖನಿಜ ಭವನದಲ್ಲಿ ಇಂದು ಗ್ರಾಮೀಣಾಭಿವೃದ್ದಿ, ನಗರಾಭಿವೃದ್ದಿ, ಕೈಗಾರಿಕಾ ಇಲಾಖೆ ಹಾಗೂ ಇನ್ನಿತರೆ ಪ್ರಮುಖ ಇಲಾಖೆಗಳ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರು, ನಂತರ ಸುದ್ದಿಗೋಷ್ಠಿ ಮಾಹಿತಿ ನೀಡಿದರು.
ನಗರ ಪ್ರದೇಶಗಳಿಂದ ಗ್ರಾಮಪಂಚಾಯ್ತಿಯ ವ್ಯಾಪ್ತಿಯಲ್ಲಿನ ಎಲ್ಲಾ ಕೈಗಾರಿಕೆಗಳಿಗೆ ಏಕರೂಪದ ತೆರಿಗೆ ಸಂಗ್ರಹಣೆಯ ಮಾಡುವ ನಿಟ್ಟಿನಲ್ಲಿ ಹೊಸ ನೀತಿಯನ್ನು ರೂಪಿಸಲಾಗುವುದು ಎಂದು ಪ್ರಕಟಿಸಿದರು.
ನಗರಸಭೆ, ಪುರ ಸಭೆ, ಕಾರ್ಪೋರೇಷನ್‌ಗಳು, ಗ್ರಾಮಪಂಚಾಯ್ತಿ ಇವುಗಳ ಮೂಲಕ ತೆರಿಗೆ ಸಂಗ್ರಹಕ್ಕೆ ಇರುವ ಕ್ರಮಗಳಲ್ಲಿ ಬಹಳಷ್ಟು ಗೊಂದಲಗಳು ಇದ್ದವು. ಇವುಗಳನ್ನು ಸರಿಪಡಿಸುವಂತೆ ಕೊರಿ ಕೈಗಾರಿಕೋದ್ಯಮಿಗಳು ಹಾಗೂ ಕೈಗಾರಿಕಾ ಸಂಸ್ಥೆಗಳು ಮನವಿಯನ್ನು ನೀಡಿದ್ದವು. ಈ ಮನವಿಯ ಹಿನ್ನಲೆಯಲ್ಲಿ ಹಾಗೂ ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ದಿಗೆ ಬೇಕಾಗಿರುವ ಸವಲತ್ತುಗಳನ್ನು ನೀಡುವ ದೃಷ್ಟಿಯಿಂದ ರಾಜ್ಯಾದ್ಯಂತ ಏಕರೂಪದ ತೆರಿಗೆ ಸಂಗ್ರಹಣೆಗೆ ಅಗತ್ಯವಿರುವ ನೀತಿಯನ್ನು ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಎಷ್ಟೊ ಕಡೆ ಕೈಗಾರಿಕೆಗಳಿಗೆ ಭೂಮಿ ಹಸ್ತಾಂತರಿಸಲಾಗಿಲ್ಲ. ಆದರೂ ಕೂಡಾ ಸ್ಥಳೀಯ ಸಂಸ್ಥೆಗಳು ಅವರ ಮೇಲೆ ತೆರಿಗೆ ಹಾಕುತ್ತಿದ್ದಾರೆ. ಭೂಮಿ ಹಸ್ತಾಂತರವಾಗದೇ ಕೈಗಾರಿಕೆಗಳಿಗೆ ತೆರಿಗೆ ಹಾಕುವುದು ಸರಿಯಲ್ಲ ಎನ್ನುವ ನಿರ್ಧಾರವನ್ನು ತಗೆದುಕೊಳ್ಳಲಾಗಿದೆ. ಈ ಬಗ್ಗೆ ಎಲ್ಲಾ ಇಲಾಖೆಯಗಳು ಸಹಮತ ವ್ಯಕ್ತಪಡಿಸಿದ್ದಾರೆ. ಕೆಲವು ಕಡೆ ಇನ್ನೂ ಅಧಿಕೃತವಾಗಿ ಹಸ್ತಾಂತರವಾಗದೇ ಇರುವ ಕೈಗಾರಿಕೆಗಳ ಮೇಲೆ ಹಾಕಿರುವ ತೆರಿಗೆ ಪ್ರಮಾಣ ಬಹಳ ಹೆಚ್ಚಾಗಿದೆ.
ಇವುಗಳ ಪರೀಶೀಲನೆಯ ಬಗ್ಗೆ ಕೂಲಂಕುಷವಾದ ಚರ್ಚೆ ನಡೆದಿದ್ದು, ಸದ್ಯದಲ್ಲೇ ಸಚಿವ ಸಂಪುಟದ ಮುಂದೆ ನೂತನ ನೀತಿಯ ಪ್ರಸ್ತಾಪವನ್ನು ಇರಿಸಲಾಗುವುದು ಎಂದು ಹೇಳಿದರು.
ನೂತನ ಕೈಗಾರಿಕಾ ನೀತಿ : ರಾಜ್ಯದ ಹೊಸ ಕೈಗಾರಿಕಾ ನೀತಿಯು ಅಂತಿಮ ಹಂತದಲ್ಲಿದೆ. ಈಗಾಗಲೇ ಹಲವಾರು ಬಾರಿ ಕೈಗಾರಿಕೋದ್ಯಮಿಗಳು ಹಾಗೂ ಕೈಗಾರಿಕಾ ಸಂಘ ಸಂಸ್ಥೆಗಳ ಜೊತೆ ಕೂಲಂಕುಷವಾದ ಚರ್ಚೆಯಾಗಿದೆ. ಆದಷ್ಟು ಬೇಗನೆ ಅಗತ್ಯವಿರುವ ಇಲಾಖೆಗಳ ಒಪ್ಪಿಗೆಯನ್ನು ಪಡೆದುಕೊಳ್ಳಲಾಗುವುದು. ನಂತರ ಸಚಿವ ಸಂಪುಟ ಮುಂದೆ ಇದನ್ನು ತರಲಾಗುವುದು ಎಂದು ಹೇಳಿದರು.
ಟೂ ಟಯರ್‌ ನಗರಗಳಲ್ಲಿ ಕೈಗಾರಿಕಾ ಅಭಿವೃದ್ದಿ: ರಾಜ್ಯದ ಟೂ ಟಯರ್ ನಗರಗಳಲ್ಲಿ ಕೈಗಾರಿಕೆಗಳನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಬಹಳಷ್ಟು ಕಾರ್ಯಕ್ರಮಗಳನ್ನು ನಾನು ಸಚಿವನಾಗಿ ಹಮ್ಮಿಕೊಂಡಿದ್ದೇನೆ. ಮೊದಲ ಹಂತವಾಗಿ ಹುಬ್ಬಳ್ಳಿಯಲ್ಲಿ ಇನ್‌ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಿದ್ದೇವೆ. ಫೆಬ್ರವರಿ ಎರಡನೇ ವಾರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಮುಂದಿನ ಹಂತದಲ್ಲಿ ಬೆಳಗಾವಿ, ಗುಲ್ಬರ್ಗಾ, ಮೈಸೂರು, ದಾವಣಗೆರೆ ಹಾಗೂ ಶಿವಮೊಗ್ಗದಲ್ಲಿ ಹೂಡಿಕೆದಾರರ ಸಮಾವೇಶವನ್ನು ನಡೆಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ವಿಮಾನ ನಿಲ್ದಾಣಗಳು ಹೆಚ್ಚಾಗಿವೆ. ಇದು ಕೈಗಾರಿಕೋದ್ಯಮಿಗಳು ಬೆಂಗಳೂರು ಹೊರತುಪಡಿಸಿ ಇತರೇ ಜಿಲ್ಲೆಗಳಲ್ಲೂ ಹೂಡಿಕೆ ಮಾಡಲು ಚಿಂತಿಸುವಂತೆ ಮಾಡಿದೆ. ರಾಜ್ಯದಲ್ಲಿ ಹೂಡಿಕೆಯ ವಾತಾವರಣ ಬದಲಾಗಿದೆ. ಈಗಾಗಲೇ ಹೈದರಾಬಾದ್‌, ಮಹಾರಾಷ್ಟ್ರ ಹಾಗೂ ಇನ್ನಿತರೆ ರಾಜ್ಯಗಳ ಕೈಗಾರಿಕೋದ್ಯಮಿಗಳು ನಮ್ಮ ಜೊತೆ ಚರ್ಚೆ ನಡೆಸಿದ್ದು, ಬೆಂಗಳೂರು ಹೊರತು ಪಡಿಸಿ ಇತರೆ ಜಿಲ್ಲೆಗಳಲ್ಲಿ ಕೈಗಾರಿಕೆಯನ್ನು ಪ್ರಾರಂಭಿಸಲು ಮುಂದಾಗಿದ್ದಾರೆ. ಇವರಿಗೆ ಅಗತ್ಯವಿರುವ ಅನುಕೂಲತೆಗಳನ್ನು ರಾಜ್ಯ ಸರ್ಕಾರ ಮಾಡಿಕೊಡುತ್ತಿದೆ ಎಂದು ಹೇಳಿದರು.
ಕೈಗಾರಿಕಾಭಿವೃದ್ದಿಯಲ್ಲಿ ಹಿಂದೆ ಉಳಿದಿರುವ ಜಿಲ್ಲೆಗಳಲ್ಲಿ ಹೂಡಿಕೆ ಮಾಡಲು ಮುಂದಾಗುವ ಉದ್ಯಮಿಗಳೀಗೆ ತೆರಿಗೆ ರಿಯಾಯಿತಿ ನೀಡುವ ಬಗ್ಗೆಯೂ ಚಿಂತನೆ ನಡೆಸಿದ್ದೇವೆ ಎಂದರು.
ಜನವರಿಯಲ್ಲಿ ನಡೆಯಬೇಕಾಗಿದ್ದ ರಾಜ್ಯ ಹೂಡಿಕೆದಾರರ ಸಮಾವೇಶದ ನೂತನ ದಿನಾಂಕ ನಿಗದಿಯ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳ ಜೊತೆಯಲ್ಲಿ ಚರ್ಚೆ ನಡೆಸಿದ್ದೇನೆ. ಮುಖ್ಯಮಂತ್ರಿಗಳು ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ತಿಳಿಸಿದ್ದು, ಮುಂದಿನ ಹೂಡಿಕೆದಾರರ ಸಮಾವೇಶದ ದಿನಾಂಕವನ್ನ ಸದ್ಯದಲ್ಲೇ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.
ಡಿಸೆಂಬರ್‌ 23 ಕ್ಕೆ ಮುಂಬೈನಲ್ಲಿ ರೋಡ್‌ ಶೋ: ಇನ್‌ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಹೂಡಿಕೆದಾರರನ್ನು ಸೆಳೆಯುವ ನಿಟ್ಟಿನಲ್ಲಿ ಸೋಮುವಾರದಂದು ಮುಂಬಯಿಯಲ್ಲಿ ರೋಡ್‌ ಶೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಹೈದರಾಬಾದ್‌, ಚೆನ್ನೈ ಸೇರಿದಂತೆ ಇನ್ನಿತರೆ ನಗರಗಳಲ್ಲೂ ರೋಡ್‌ ಶೋವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತಾ ಮಾತನಾಡಿ, ಕರ್ನಾಟಕ ರಾಜ್ಯ ಮೊದಲಿನಿಂದಲೂ ಕೈಗಾರಿಕೆಗಳಿಗೆ ಪೂರಕವಾದ ವಾತಾವರಣ ಹೊಂದಿದೆ. ರಾಜ್ಯದಲ್ಲಿ ಇನ್ನೂ ಹೆಚ್ಚಿನ ಹೂಡಿಕೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನೂತನ ಕೈಗಾರಿಕಾ ನೀತಿ, ಎರಡನೇ ಹಂತದ ಜಿಲ್ಲೆಗಳಲ್ಲಿ ಹೂಡಿಕೆಯನ್ನು ಹೆಚ್ಚಿಸಲು ರೋಡ್‌ ಶೋಗಳನ್ನು ನಡೆಸಲಾಗುತ್ತಿದೆ. ಮುಂಬಯಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಇಡೀ ದಿನ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್‌ ಕೃಷ್ಣ ಮಾತನಾಡಿ, ಟಾಟಾ ಗ್ರೂಪ್‌, ಮಹಿಂದ್ರಾ, ಹಿಂದೂಜಾ ಗ್ರೂಫ್‌ ಸೇರಿದಂತೆ ಹಲವು ಪ್ರಮುಖ ಸಂಸ್ಥೇಗಳ ಮುಖ್ಯಸ್ಥರ ಜೊತೆ ಸಭೆಯನ್ನು ನಿಗದಿಪಡಿಸಲಾಗಿದೆ. ರಾಜ್ಯದಲ್ಲಿರುವ ಕೈಗಾರಿಕಾ ಅನುಕೂಲಕರ ಪರಿಸ್ಥಿತಿಯನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.