ETV Bharat / city

ಅಂಗನವಾಡಿ ಕಾರ್ಯಕರ್ತೆಯರಿಂದ ಮೇಲ್ವಿಚಾರಕರ ಬಡ್ತಿಗೆ ನಿಯಮ ಸರಳೀಕರಣಕ್ಕೆ ಒತ್ತಾಯ

author img

By

Published : Mar 11, 2022, 8:16 PM IST

ಅಂಗನವಾಡಿ ಕಾರ್ಯಕರ್ತೆಯರಿಂದ ಮೇಲ್ವಿಚಾರಕರ ಹುದ್ದೆಗಳಿಗೆ ಶೇ. 100ರಷ್ಟು ಅನುಪಾತದ ಪ್ರಕಾರ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವ ಹಾಲಪ್ಪ ಕಲಾಪದಲ್ಲಿ ಹೇಳಿದರು.

Halappa Achar
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಂದ ಮೇಲ್ವಿಚಾರಕರ ಹುದ್ದೆಗಳಿಗೆ ಬಡ್ತಿ ಹೊಂದಲು ಸರ್ಕಾರ ನಿಗದಿಪಡಿಸಿರುವ ನಿಯಮಗಳನ್ನು ಸರಳೀಕರಣ ಮಾಡಬೇಕೆಂದು ಶಾಸಕರು ವಿಧಾನಸಭೆಯಲ್ಲಿ ಒತ್ತಾಯಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಇಂದು ಶಾಸಕ ಭೀಮಾನಾಯಕ್ ಅವರ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಉತ್ತರಿಸಿ, ಮೇಲ್ವಿಚಾರಕರ ಹುದ್ದೆಗೆ ಪಿಯುಸಿ ಮತ್ತು ಪದವಿ ಪಡೆದವರಿಗೆ ಬಡ್ತಿ ನೀಡಲಾಗುತ್ತದೆ ಎಂದು ಹೇಳಿದರು.

ಇದಕ್ಕೆ ಆಕ್ಷೇಪಿಸಿದ ಶಾಸಕ ಭೀಮಾನಾಯಕ್ ಮತ್ತು ನಾರಾಯಣಸ್ವಾಮಿ, ಎಸ್​ಎಸ್​ಎಲ್​ಸಿ ಮುಗಿಸಿದವರು ಸಾಕಷ್ಟಿದ್ದಾರೆ. ಈ ಮೊದಲು ಇವರಿಗೆ ಮುಂಬಡ್ತಿ ನೀಡಲಾಗುತ್ತಿತ್ತು. ಇದನ್ನು ನಂಬಿ ಅನೇಕರು ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಹೀಗಾಗಿ ಹಳೆಯ ನಿಯಮವನ್ನೇ ಮುಂದುವರೆಸಬೇಕೆಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಹಾಲಪ್ಪ, ಶೇ. 100 ರಷ್ಟು ಅನುಪಾತದ ಪ್ರಕಾರ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದರಲ್ಲಿ ಶೇ.5ರಷ್ಟು ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮಹಿಳಾ ಮೇಲ್ವಿಚಾರಕಿ ಹುದ್ದೆ, ಶೇ.50ರಷ್ಟು ಹುದ್ದೆಗಳನ್ನು ಯಾವುದೇ ವಿಷಯದಲ್ಲಿ ಪದವಿ ಹೊಂದಿದವರನ್ನು 5 ವರ್ಷ ಸೇವೆ ಸಲ್ಲಿಸಿದ, ಶೇ.25ರಷ್ಟು ಪಿಯುಸಿ ಆಗಿರುವವರು ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಪರಿಗಣಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಮತ ಯಂತ್ರಗಳು ಹ್ಯಾಕ್‌ ಆಗುವ ಅನುಮಾನವಿದೆ: ಜಿ.ಪರಮೇಶ್ವರ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.