ಬೆಂಗಳೂರು : ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತರಲು ಯತ್ನಿಸುತ್ತಿರುವ ನೂತನ ಶಿಕ್ಷಣ ನೀತಿಯ ಬಗ್ಗೆ ಮುಂಗಾರು ಅಧಿವೇಶನದಲ್ಲಿ ಚರ್ಚಿಸಲು ಸರ್ಕಾರದ ಮೇಲೆ ಒತ್ತಾಯ ತರಬೇಕೆಂದು ಎಸ್ಐಒ ಕರ್ನಾಟಕ ನಿಯೋಗ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದೆ.

ಇಂದು ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಿಯೋಗ, ಸೆಪ್ಟೆಂಬರ್ 16ರಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲೂ ರಾಷ್ಟ್ರೀಯ ನೂತನ ಶಿಕ್ಷಣ ನೀತಿಯ ಬಗ್ಗೆ ಚರ್ಚಿಸಬೇಕು. ಜೊತೆಗೆ ಮುಖ್ಯಮಂತ್ರಿಗೆ ಈ ಬಗ್ಗೆ ಚರ್ಚೆಗೆ ಸಮಯ ಮೀಸಲಿಡಲು ಪತ್ರ ಬರೆಯುವಂತೆ ವಿನಂತಿಸಿದೆ.
ಈ ವೇಳೆ ಎಸ್ಐಒ ರಾಜ್ಯಾಧ್ಯಕ್ಷ ನಿಹಾಲ್ ಕಿದಿಯೂರು, ಪ್ರಧಾನ ಕಾರ್ಯದರ್ಶಿ ಡಾ.ನಸೀಮ್ ಅಹ್ಮದ್, ಸಂಪರ್ಕ ಕಾರ್ಯದರ್ಶಿ ಯಾಸೀನ್ ಕೋಡಿಬೆಂಗ್ರೆ, ರಾಜ್ಯ ಕಾರ್ಯದರ್ಶಿಗಳಾದ ಅಸೀಮ್ ಜವಾದ್, ಸಯ್ಯದ್ ಶಫಿ, ಸದಸ್ಯರಾದ ಅಫ್ವಾನ್ ಹೂಡೆ ಉಪಸ್ಥಿತರಿದ್ದರು.