ETV Bharat / city

ಡ್ರಗ್ಸ್​: ಪ್ರತ್ಯೇಕ ಪ್ರಕರಣದಲ್ಲಿ 6 ಜನರ ಬಂಧನ, 144 ಕೆ.ಜಿ ಗಾಂಜಾ ವಶ

ಎರಡು ಪ್ರತ್ಯೇಕ ಪ್ರಕರಣಗಳನ್ನು ಬೇಧಿಸಿರುವ ಸಿಲಿಕಾನ್​ ಸಿಟಿ ಪೊಲೀಸರು 6 ಜನರನ್ನು ಬಂಧಿಸಿ 144 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

six-accused-arrested-for-marijuana-sell-in-bangalore
ಡ್ರಗ್ಸ್​ ಜಾಲದ ಮೇಲೆ ಖಾಕಿ ದಾಳಿ
author img

By

Published : Jul 16, 2021, 8:07 PM IST

ಬೆಂಗಳೂರು: ಕೋಣನಕುಂಟೆ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಅಂತರ್‌ರಾಜ್ಯ ಡ್ರಗ್‌ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ. ಬನ್ನೇರುಘಟ್ಟ ರಸ್ತೆ ಗೊಟ್ಟಿಗೆರೆ ಬಳಿ ಕಾರ್​ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಸೇಮಂತ, ಸಿದಾರಿ ಬೊಂಜಿ ಬಾಬು, ವಂತಲ ನಾಗೇಶ್, ಸಿದಾರಿ ಮಹೇಶ್ ಎಂಬವರನ್ನು ಬಂಧಿಸಿದ್ದಾರೆ.

ಕಾರಿನಲ್ಲಿ ಸುಮಾರು 41 ಕೆ.ಜಿ ಮತ್ತು ಉಳಿದುಕೊಂಡಿದ್ದ ಲಾಡ್ಜ್​ನಲ್ಲಿ 93 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಡ್ರಗ್ ಪೆಡ್ಲರ್ ಬಲರಾಜು ಪತ್ತೆಗೆ ತಂಡ ರಚಿಸಲಾಗಿದೆ. ಆರೋಪಿಗಳು ಆಂಧ್ರಪ್ರದೇಶದ ವಿಶಾಖಪಟ್ಟಣಂದಿಂದ ಗಾಂಜಾ ತಂದು ನಗರದಲ್ಲಿ ಮಾರಟ ಮಾಡುತ್ತಿದ್ದರು. ಇವರಿಂದ 134 ಕೆ.ಜಿ ಗಾಂಜಾ ಮತ್ತು ಕಾರು ವಶಕ್ಕೆ ಪಡೆದಿದ್ದಾರೆ.

ವಿವೇಕನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಜಿತ್​ ಮತ್ತು ಅಲ್ವಿನ್​ ಎಂದು ಗುರುತಿಸಲಾಗಿದೆ. ಇವರಿಂದ ಸುಮಾರು 10 ಕೆಜಿ ಗಾಂಜಾ ಮತ್ತು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಎನ್​ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.